ಅಲಿಗಢ ವಿವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಆರೋಪ
ಲಕ್ನೋ, ಆಗಸ್ಟ್ 19: ಉತ್ತರ ಪ್ರದೇಶದ ಅಲಿಗಢ ದಲ್ಲಿ ತಿರಂಗಾ ಯಾತ್ರೆಯ ವೇಳೆ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ ವಿಡಿಯೋಗಳು ಹೊರಬಿದ್ದ ನಂತರ ಹಲವಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಆರೋಪ ಹೊರಿಸಿದ್ದಾರೆ.
ಆಗಸ್ಟ್ 13 ರಂದು ಉತ್ತರ ಪ್ರದೇಶದ ಅಲಿಗಢದಲ್ಲಿ ಕಾಲೇಜಿನಿಂದ ತಿರಂಗಾ ಯಾತ್ರೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದರು. ಇದನ್ನು ಕೆಲವರು ಮೆರವಣಿಗೆಯ ವಿಡಿಯೋ ಸಮೇತ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದರು. ಆದರೂ ಯಾವುದೇ ಕ್ರಮ ಕೈಗೊಳ್ಳದೆ ಕಾಲೇಜು ಘಟನೆ ಹತ್ತಿಕ್ಕಲು ಯತ್ನಿಸಿದೆ ಎಂದು ಆರೋಪಿಸಲಾಗಿದೆ.
ಕಾಲೇಜು ಆಡಳಿತ ಮಂಡಳಿ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ದೂರುದಾರರು ವೀಡಿಯೊದೊಂದಿಗೆ ಪೊಲೀಸರನ್ನು ಸಂಪರ್ಕಿಸಿದರು. ಅದರ ಆಧಾರದ ಮೇಲೆ ಕೆಲವು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ವ್ಯವಸ್ಥಾಪಕರ ವಿರುದ್ಧವೂ ಆರೋಪ ಹೊರಿಸಲಾಗಿದೆ.

ಹರ್ ಘರ್ ತಿರಂಗ ಅಭಿಯಾನ ಹಿನ್ನೆಲೆಯಲ್ಲಿ ನಮ್ಮ ಕಾಲೇಜಿನಿಂದ ಯಾತ್ರೆಯನ್ನು ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಶಿಕ್ಷಕರು ನಮಗಿಂತ ಮುಂದೆ ನಡೆದರು. ಯಾತ್ರೆಯಲ್ಲಿ ಅನೇಕ ವಿದ್ಯಾರ್ಥಿಗಳು ಇದ್ದರು. ಇದ್ದಕ್ಕಿದ್ದಂತೆ ನಮಗೆ 'ಪಾಕಿಸ್ತಾನ್ ಜಿಂದಾಬಾದ್' ಎಂಬ ಘೋಷಣೆಗಳು ಕೇಳಿಬಂದವು. ಕೂಡಲೇ ನಮ್ಮ ಶಿಕ್ಷಕರಿಗೆ ವಿಷಯ ತಿಳಿಸಿದ್ದೇವೆ. ನಾನು ಕೇವಲ ಘೋಷಣೆಗಳನ್ನು ಕೇಳಿದೆ. ಅವರನ್ನು ಕಾಲೇಜಿನ ವಿದ್ಯಾರ್ಥಿಗಳು ಅಥವಾ ಹೊರಗಿನವರೋ ಎಂದು ನನಗೆ ತಿಳಿದಿಲ್ಲ ಎಂದು ಕಾಲೇಜಿನ ವಿದ್ಯಾರ್ಥಿ ರಾಜನ್ ಕುಮಾರ್ ತಿಳಿಸಿದ್ದಾರೆ.
ಇದು ಆಗಸ್ಟ್ 13 ರಂದು ನಡೆದ ಒಂದು ದೊಡ್ಡ ಕಾರ್ಯಕ್ರಮವಾಗಿತ್ತು. ನಾವು ಕೆಲವು ವಿದ್ಯಾರ್ಥಿಗಳಿಂದ ಹಿಂದೂಸ್ತಾನ್ ಜಿಂದಾಬಾದ್ ಘೋಷಣೆಗಳನ್ನು ಕೂಗಿದರು. ಅದಕ್ಕೆ ಕೆಲವರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದರು ಎಂದು ನಮಗೆ ಮಾಹಿತಿ ಸಿಕ್ಕಿತು. ನಾವು ಅದರ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಆದರೆ ಯಾವುದೇ ವೀಡಿಯೋ ಪತ್ತೆಯಾಗಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಯಾತ್ರೆಯಲ್ಲಿ ದೇಶಭಕ್ತಿಯ ಘೋಷಣೆಗಳ ಜೊತೆಗೆ ಕೆಲವು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಲಾಯಿತು. ವೀಡಿಯೊ ನೋಡಿದ ನಂತರ ನಾವು ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇವೆ. ಪ್ರಾಂಶುಪಾಲರು ಮತ್ತು ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅಲಿಘರ್‌ನ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ), ಪಲಾಶ್ ಬನ್ಸಾಲ್ ಹೇಳಿದ್ದಾರೆ.












Click it and Unblock the Notifications