ತಂದೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಮಗಳ ಮೇಲೆ ಅತ್ಯಾಚಾರ
ಲಕ್ನೋ, ಮಾರ್ಚ್ 18: ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸಂತ್ರಸ್ತ ಬಾಲಕಿಯ ತಂದೆ ಸ್ಪರ್ಧಿಸುತ್ತಿದ್ದು ಇದನ್ನು ತಡೆಯುವ ಸಲುವಾಗಿ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.
16 ವರ್ಷದ ಅಪ್ರಾಪ್ತ ಬಾಲಕಿ ಶಾಲೆಯಿಂದ ಹಿಂದಿರುಗುತ್ತಿದ್ದಾಗ ನಾಲ್ವರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಾಂಡೆ ತಿಳಿಸಿದ್ದಾರೆ.
ಹಣದ ಆಮಿಷಕ್ಕೆ ಒಳಗಾಗದಿದ್ದಕ್ಕೆ ಆಕಾಶ್ ವರ್ಮಾ, ಲಾಲ್ಜಿ ವರ್ಮಾ, ಸಚಿನ್ ವರ್ಮಾ ಮತ್ತು ಶಿವಂ ವರ್ಮಾ ನಾಲ್ವರು ಸೇರಿ ತಮ್ಮ ಮಗಳನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಸಂತ್ರಸ್ತೆ ಬಾಲಕಿಯ ತಂದೆಯ ದೂರಿನನ್ವಯ ಪ್ರಕರಣ ದಾಖಲಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಪಾಂಡೆ ತಿಳಿಸಿದ್ದಾರೆ.
ನಾನು ಒತ್ತಡಕ್ಕೆ ಒಳಗಾಗಿದ್ದೇನೆ. ಅಲ್ಲದೆ ಚುನಾವಣೆಗೆ ಸ್ಪರ್ಧಿಸದಂತೆ ಒತ್ತಡ ಹಾಕುತ್ತಿದ್ದು ಹಣದ ಆಮಿಷವನ್ನು ನೀಡಿದ್ದರು ಎಂದು ಬಾಲಕಿಯ ತಂದೆ ಹೇಳಿಕೊಂಡಿದ್ದಾರೆ.












Click it and Unblock the Notifications