ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮಯಕ್ಕೆ ಸರಿಯಾಗಿ ಯುಪಿ ಚುನಾವಣೆ ನಡೆಸಬೇಕೆಂಬುವುದು ಎಲ್ಲಾ ಪಕ್ಷಗಳ ಬಯಕೆ: ಚುನಾವಣಾ ಆಯೋಗ

|
Google Oneindia Kannada News

ಲಕ್ನೋ, ಡಿಸೆಂಬರ್‌ 30: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯುವ ವಿಧಾನಸಭೆ ಚುಣಾವಣೆಯನ್ನು ಸಮಯಕ್ಕೆ ಸರಿಯಾಗಿ, ಎಲ್ಲಾ ಕೋವಿಡ್‌ ಮಾರ್ಗಸೂಚಿಯೊಂದಿಗೆ ನಡೆಸಬೇಕು ಎಂಬುವುದು ಉತ್ತರ ಪ್ರದೇಶದ ಎಲ್ಲಾ ಪಕ್ಷಗಳ ಆಗ್ರಹವಾಗಿದೆ ಎಂದು ಚುನಾವಣಾ ಆಯೋಗವು ಇಂದು ಮಾಹಿತಿ ನೀಡಿದೆ. ಈ ಮೂಲಕ ಕೊರೊನಾ ವೈರಸ್‌ ಸೋಂಕಿನ ಹೊಸ ರೂಪಾಂತರ ಓಮಿಕ್ರಾನ್‌ ಹರಡುತ್ತಿರುವ ನಡುವೆಯೇ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬ ಸೂಚನೆಯನ್ನು ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ಸುಶೀಲ್‌ ಚಂದ್ರ, "ಆಡಾಳಿತರೂಢ ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು, ಸಮಾಜವಾದಿ ಪಕ್ಷ, ಕಾಂಗ್ರೆಸ್‌ ಹಾಗೂ ಬಹುಜನ ಸಮಾಜ ಪಕ್ಷ, ಇನ್ನುಳಿದ ಪಕ್ಷಗಳು, ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ಸಮಯಕ್ಕೆ ಸರಿಯಾಗಿ ವಿಧಾನಸಭೆ ಚುನಾವಣೆ ನಡೆಯಬೇಕು ಎಂದು ಹೇಳಿದ್ದಾರೆ. ಈ ಕೊರೊನಾ ವೈರಸ್‌ ಸೋಂಕಿನಿಂದ ಜನರನ್ನು ಹೇಗೆ ರಕ್ಷಣೆ ಮಾಡಬಹುದು ಎಂಬ ಬಗ್ಗೆ ಎಲ್ಲಾ ಪಕ್ಷಗಳು ಹಲವಾರು ಸಲಹೆಗಳನ್ನು ನೀಡಿದೆ," ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶಕ್ಕೆ 3 ದಿನ ಪ್ರವಾಸ ಆರಂಭಿಸಿದ ಕೇಂದ್ರ ಚುನಾವಣಾ ಆಯೋಗಉತ್ತರ ಪ್ರದೇಶಕ್ಕೆ 3 ದಿನ ಪ್ರವಾಸ ಆರಂಭಿಸಿದ ಕೇಂದ್ರ ಚುನಾವಣಾ ಆಯೋಗ

ಕೊರೊನಾ ವೈರಸ್‌ನ ಹೊಸ ರೂಪಾಂತರ ಓಮಿಕ್ರಾನ್‌ ನಡುವೆ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯನ್ನು ನಡೆಸುವುದು ಬೇಡ ಎಂದು ಇತ್ತೀಚೆಗೆ ಅಲಹಾಬಾದ್‌ ಹೈಕೋರ್ಟ್ ಹೇಳಿದೆ. ಹಾಗೆಯೇ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳ ಅವಧಿಗೆ ಮುಂದೂಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಒತ್ತಾಯಿಸಿದೆ. ಇನ್ನು ರಾಜ್ಯದಲ್ಲಿ ಚುನಾವಣಾ ಮೆರವಣಿಗೆಗಳನ್ನು ಕೂಡಾ ನಿಷೇಧ ಮಾಡುವಂತೆ ಹೇಳಿದೆ.

Parties Want UP Polls On Time With Covid Protocol Says Election Commission

ಉತ್ತರ ಪ್ರದೇಶದಲ್ಲಿ ಚುನಾವಣೆಯನ್ನು ನಾವು ನಿಲ್ಲಿಸದಿದ್ದರೆ ಕೊರೊನಾ ವೈರಸ್‌ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ನಾವು ಎದುರಿಸಿದ್ದಕ್ಕಿಂತ ಕೆಟ್ಟ ಪರಿಸ್ಥಿತಿಯನ್ನು ನಾವು ಎದುರಿಸಬೇಕಾಗುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಯಾದವ್ ಹೇಳಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ಚುನಾವಣೆಯನ್ನು ಮುಂದೂಡುವ ಸಾಧ್ಯತೆಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.

ಉತ್ತರ ಪ್ರದೇಶ ಚುನಾವಣೆಯ ಬಗ್ಗೆ ಚುನಾವಣಾ ಆಯೋಗ ಮಾಹಿತಿ

ಪ್ರಸ್ತುತ ಚುನಾವಣಾ ಆಯೋಗವು ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣದಿಂದಾಗಿ ಮೂರು ದಿನಗಳ ಉತ್ತರ ಪ್ರದೇಶ ಪ್ರವಾಸದಲ್ಲಿದೆ. ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಚುನಾವಣಾ ಆಯುಕ್ತ ಸುಶೀಲ್‌ ಕುಮಾರ್‌, "ವಿವಿಪಿಎಡಿಗಳನ್ನು ಎಲ್ಲಾ ಚುನಾವಣಾ ಬೂತ್‌ಗಳಲ್ಲಿ ಅಳವಡಿಸಲಾಗುವುದು. ಚುನಾವಣೆಯಲ್ಲಿ ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಲೈವ್‌ ವೆಬ್‌ಕಾಸ್ಟಿಂಗ್‌ ಇರಲಿದೆ," ಎಂದು ಮಾಹಿತಿ ನೀಡಿದ್ದಾರೆ. ಹಾಗೆಯೇ 2017 ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಶೇಕಡ 61 ರಷ್ಟು ಮಂದಿ ಮತದಾನ ಮಾಡಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಶೇಕಡ 59 ರಷ್ಟು ಮಂದಿ ಮತದಾನ ಮಾಡಿದ್ದಾರೆ. ಇಲ್ಲಿ ಜನರಲ್ಲಿ ಹೆಚ್ಚು ರಾಜಕೀಯ ಅರಿವು ಇರುವಾಗ ಮತದಾನ ಏಕೆ ಕಡಿಮೆ ಎಂದು ನಮಗೆ ತಿಳಿಯುತ್ತಿಲ್ಲ," ಎಂದು ಕೂಡಾ ಹೇಳಿದ್ದಾರೆ. "ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಚುನಾವಣೆಯು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 6 ಗಂಟೆಯವರೆಗೆ ನಡೆಯಲಿದೆ," ಎಂದು ತಿಳಿಸಿದ್ದಾರೆ.

ಓಮಿಕ್ರಾನ್ ಭೀತಿ: ರಾಜ್ಯ ಚುನಾವಣೆಗಳು ಮುಂದೂಡಿಕೆ ಸಾಧ್ಯತೆಯಿಲ್ಲಓಮಿಕ್ರಾನ್ ಭೀತಿ: ರಾಜ್ಯ ಚುನಾವಣೆಗಳು ಮುಂದೂಡಿಕೆ ಸಾಧ್ಯತೆಯಿಲ್ಲ

ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ, ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಅನೂಪ್ ಚಂದ್ರ ಪಾಂಡೆ ಸೇರಿದಂತೆ ಇತರೆ ಹಿರಿಯ ಅಧಿಕಾರಿಳನ್ನೊಳಗೊಂಡ ಆಯೋಗ ಮಂಗಳವಾರದಿಂದ ಗುರುವಾರದವರೆಗೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಸಿದ್ಧತೆಗೆ ಸಂಬಂಧಿಸಿದಂತೆ ಚರ್ಚಿಸಲು ಎಲ್ಲಾ 75 ಜಿಲ್ಲೆಗಳ ವಿಭಾಗೀಯ ಆಯುಕ್ತರು, ಜಿಲ್ಲಾ ಚುನಾವಣಾ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು (ವಲಯ) ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಬುಧವಾರ ಕೇಂದ್ರೀಯ ಚುನಾವಣಾ ನಿಯೋಗವು ಸಭೆ ನಡೆಸಿದೆ. ಗುರುವಾರ ಚುನಾವಣಾ ಸಮಿತಿಯು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಸಭೆ ನಡೆಸಿದ್ದು ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದೆ. (ಒನ್‌ಇಂಡಿಯಾ ಸುದ್ದಿ)

English summary
Parties Want UP Polls On Time With Covid Protocol Says Election Commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X