ಪತ್ನಿ, ಪಕ್ಷ ಧರ್ಮಸಂಕಟದಲ್ಲಿ ಶತ್ರುಘ್ನ ಸಿನ್ಹಾ
ಲಕ್ನೋ, ಏ.19:ಪ್ರತಿಷ್ಠಿತ ಲಕ್ನೋ ಕ್ಷೇತ್ರದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ವಿರುದ್ಧ ಶಾಟ್ಗನ್ ಖ್ಯಾತಿಯ ಶತ್ರುಘ್ನ ಸಿನ್ಹಾ ಪತ್ನಿ ಪೂನಮ್ ಸಿನ್ಹಾ ಸ್ಪರ್ಧಿಸಿದ್ದಾರೆ.
ಆಶ್ಚರ್ಯಕರ ಬೆಳವಣಿಗೆಯಲ್ಲಿ ಆಚಾರ್ಯ ಪ್ರಮೋದ್ಗೆ ಕಾಂಗ್ರೆಸ್ ಟಿಕೆಟ್ ದೊರೆತಿದೆ. ಶತ್ರುಘ್ನ ಸಿನ್ಹಾ ಪತ್ನಿ ಸಮಾಜವಾದಿಯಿಂದ ಸ್ಪರ್ಧಿಸಿರುವುದು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಹಾಕಿರುವುದು ಶತ್ರುಘ್ನ ಸಿನ್ಹಾಗೆ ಗೊಂದಲ ಮೂಡಿಸಿದೆ.
ಪಕ್ಷ ಹಾಗೂ ಪತ್ನಿಯಲ್ಲಿ ಯಾರ ಪರ ನಿಲ್ಲಬೇಕು ಎನ್ನುವ ಗೊಂದಲದಲ್ಲಿದ್ದಾರೆ. ಈ ನಡುವೆ ಗುರುವಾರ ನಡೆದ ರೋಡ್ ಶೋನಲ್ಲಿ ಪತ್ನಿ ಪರ ಪ್ರಚಾರ ಡೆಸಿ ಶತ್ರುಘ್ನ ಸಿನ್ಹಾ ಗಮನ ಸೆಳೆದಿದ್ದಾರೆ.

ಇದನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್ ಅಭ್ಯರ್ಥಿ ಆಚಾರ್ಯ ಪ್ರಮೋದ್ ಪಕ್ಷ ಹಾಗೂ ಪತ್ನಿ ಇದರಲ್ಲಿ ಯಾವ ಧರ್ಮ ಪಾಲಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಶತ್ರುಘ್ನ ಸಿನ್ಹಾ ಪಕ್ಷ ನನಗೆ ಟಿಕೆಟ್ ನೀಡಿದೆ. ಆಭಾರಿಯಾಗಿದ್ದೇನೆ, ಆದರೆ ನನ್ನ ಪತ್ನಿ ಚುನಾವಣೆಗೆ ನಿಂತಿದ್ದಾರೆ, ನನಗೆ ಕುಟುಂಬವೇ ಮೊದಲು ಎಂದು ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಶತ್ರುಘ್ನ ಸಿನ್ಹಾ ಬಿಹಾರದ ಪಟ್ನಾ ಸಾಹೀಬ್ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications