ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿಯಲ್ಲಿ ಶಾಸಕರು, ಸಚಿವರ ರಾಜೀನಾಮೆಯಿಂದ ಯಾವುದೇ ಬದಲಾವಣೆ ಇಲ್ಲ

|
Google Oneindia Kannada News

ಲಕ್ನೋ ಜನವರಿ 14: ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಅಂದಿನಿಂದ ಎಲ್ಲ ರಾಜಕೀಯ ಪಕ್ಷಗಳು ತಮ್ಮನ್ನು ತಾವು ಬಲಪಡಿಸಿಕೊಳ್ಳಲು ಕುತಂತ್ರ ರಾಜಕಾರಣ ಆರಂಭಿಸಿವೆ. ಈ ಸಂಚಿಕೆಯಲ್ಲಿ ಯುಪಿಯ ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷಕ್ಕೆ ಹಲವು ದೊಡ್ಡ ನಾಯಕರು ರಾಜೀನಾಮೆ ನೀಡಿದ್ದು, ಇದರಿಂದ ಬಿಜೆಪಿಗೆ ಭಾರೀ ನಷ್ಟವಾಗಿದೆ. ಈ ಮಧ್ಯೆ, ಉತ್ತರ ಪ್ರದೇಶದ ಶಾಸಕರು ಮತ್ತು ಸಚಿವರ ರಾಜೀನಾಮೆ ಕುರಿತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕಟುವಾದ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಯ ಮೂಲಕ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ಅತೃಪ್ತರ ರಾಜೀನಾಮೆಯಿಂದ ಯುಪಿ ಬಿಜೆಪಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ತೋಮಾರ್ ಅವರು, ಯುಪಿ ಚುನಾವಣೆಯಲ್ಲಿ ಸಚಿವರು ಮತ್ತು ಶಾಸಕರು ರಾಜೀನಾಮೆ ನೀಡಿದರೂ ಆಶ್ಚರ್ಯವಿಲ್ಲ. ಅದರಿಂದ ಯಾವುದೇ ಬದಲಾವಣೆ ಬಿಜೆಪಿಯಲ್ಲಿ ಆಗುವುದಿಲ್ಲ. ಆದರೆ ಬಿಜೆಪಿಯ ಕೇಂದ್ರ ಮತ್ತು ರಾಜ್ಯ ನಾಯಕತ್ವ ಉತ್ತರ ಪ್ರದೇಶದ ಪರಿಸ್ಥಿತಿಯ ಮೇಲೆ ಕಣ್ಣಿಟ್ಟಿದೆ ಎಂದು ತೋಮರ್ ಹೇಳಿದ್ದಾರೆ. ಯುಪಿಯಲ್ಲಿ ಬಿಜೆಪಿ ಪೂರ್ಣ ಬಲದಿಂದ ಚುನಾವಣೆ ಎದುರಿಸುತ್ತಿದೆ. ಬಿಜೆಪಿಗೆ ಎಲ್ಲಾ ಕಡೆಯಿಂದ ಬೆಂಬಲ ಸಿಗುತ್ತಿದೆ. ಇದಲ್ಲದೆ, ಕಳೆದ 5 ವರ್ಷಗಳಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ನೇತೃತ್ವದಲ್ಲಿ ಉತ್ತರ ಪ್ರದೇಶದ ಚಿತ್ರಣ ಬದಲಾಗಿದೆ ಎಂದು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಇದರೊಂದಿಗೆ ರಾಜಕೀಯ ಸಂಸ್ಕೃತಿಯಲ್ಲೂ ಬದಲಾವಣೆಯಾಗಿದೆ. ಈ ಬದಲಾವಣೆಗಳಿಂದ ಜನರು ನಿರಾಳರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿಗೆ ಜನರ ಸಂಪೂರ್ಣ ಆಶೀರ್ವಾದ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂತಹ ರಾಜಕೀಯ ಕೆಸರೆರೆಚಾಟದ ಮಧ್ಯೆ ಮುಂದಿನ ದಿನಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಎಲ್ಲ ಕಡೆ ಬಿಜೆಪಿ ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗುವುದನ್ನು ಕಾದು ನೋಡಬೇಕಿದೆ.

ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ತೋಮರ್ ಕಾಂಗ್ರೆಸ್ ಸರ್ಕಾರವನ್ನು ಸುತ್ತುವರೆದಿದ್ದಾರೆ. ಕಾಂಗ್ರೆಸ್ ಸರಕಾರ ಇರುವ ಕಡೆ ಕಾನೂನು ಸುವ್ಯವಸ್ಥೆ ಬಗ್ಗೆ ಗಮನವೇ ಇಲ್ಲದಂತಾಗಿದೆ ಎಂದರು. ಹೀಗಿರುವಾಗ ಪಕ್ಷಗಳು ತಮ್ಮ ಬಗ್ಗೆ ಯೋಚಿಸಿದರೆ ಜನರಿಗೆ ಹೇಗೆ ಭದ್ರತೆ ಕೊಡಲು ಸಾಧ್ಯ ಎಂದರು.

peoples blessings are with BJP Tomar

ಬಿಜೆಪಿಯಷ್ಟೇ ಅಲ್ಲದೇ ಬಿಜೆಪಿ ಮೈತ್ರಿಕೂಟದಲ್ಲಿರುವ ಅಪ್ನಾ ದಳ ಪಕ್ಷದ ಶಾಸಕ ಚೌಧರಿ ಅಮರ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ಭಾಗವಾಗಿದ್ದ 11 ಮಂದಿ ಶಾಸಕರು ಸರ್ಕಾರದಿಂದ ದೂರ ಸರಿದಿದ್ದಾರೆ.

ಜನವರಿ 8 ರಂದು ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್‌ನಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದ ಚುನಾವಣಾ ಆಯೋಗ, ಕೋವಿಡ್-19 ಉಲ್ಬಣದಿಂದಾಗಿ ಐದು ಚುನಾವಣೆಗೆ ಒಳಪಟ್ಟ ರಾಜ್ಯಗಳಲ್ಲಿ ಜನವರಿ 15 ರವರೆಗೆ ಸಾರ್ವಜನಿಕ ರ್‍ಯಾಲಿಗಳು, ರೋಡ್‌ಶೋಗಳು ಮತ್ತು ಕಾರ್ನರ್ ಸಭೆಗಳನ್ನು ನಿಷೇಧಿಸಿದೆ.

2022 ರ ಯುಪಿ ಚುನಾವಣೆಯನ್ನು ಏಳು ಹಂತಗಳಲ್ಲಿ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಉತ್ತರ ಪ್ರದೇಶದಲ್ಲಿ ಮತದಾನ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ನಡೆಯಲಿದೆ. ಉತ್ತರ ಪ್ರದೇಶ ಚುನಾವಣೆ 2022 ಫಲಿತಾಂಶವನ್ನು ಮಾರ್ಚ್ 10 ರಂದು ಪ್ರಕಟಿಸಲಾಗುವುದು.

English summary
Union Agriculture Minister Narendra Singh Tomar has made a vehement statement on the resignation of MLAs and ministers in Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X