• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮ ಮಂದಿರ ಭೂಮಿ ಪೂಜೆಗೆ ತಡೆ ನೀಡುವಂತೆ ಕೋರ್ಟ್‌ಗೆ ಅರ್ಜಿ

|

ಅಲಹಾಬಾದ್, ಜುಲೈ 24: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲು ದಿನಾಂಕ ನಿಗದಿ ಮಾಡಲಾಗಿದ್ದು, ಆಗಸ್ಟ್ ಮೊದಲ ವಾರ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸಕ್ಕೆ ಅಡಿಪಾಯ ಹಾಕಲಿದ್ದಾರೆ.

ಆದರೆ, ರಾಮ ಮಂದಿರ ಭೂಮಿ ಪೂಜೆ ನಡೆಯಲು ಅವಕಾಶ ಮಾಡಿಕೊಡಬಾರದು ಎಂದು ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ.

ಅಯೋಧ್ಯೆ ಭೂಮಿಪೂಜೆಗೆ ಮುನ್ನ ಸುಬ್ರಮಣಿಯನ್ ಸ್ವಾಮಿ ವಿವಾದಾತ್ಮಕ ಟ್ವೀಟ್

ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ, ಇಂತಹ ಸಂಭರ್ದದಲ್ಲಿ ಈ ಕಾರ್ಯಕ್ರಮ ಮಾಡುವುದು ಸೂಕ್ತವಲ್ಲ, ಸುಮಾರು 300 ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಆರೋಪಿಸಿ ದೆಹಲಿ ಮೂಲದ ಸಾಕೇತ್ ಗೋಖಲೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ರಾಷ್ಟ್ರದ ಹಲವರ ಗಣ್ಯರು ಭಾಗವಹಿಸಲಿದ್ದಾರೆ. ಇದು ಲಾಕ್‌ಡೌನ್‌ ಮಾರ್ಗಸೂಚಿ ಉಲ್ಲಂಘನೆ ಮಾಡಿದಂತೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಒಂದು ವೇಳೆ ಈ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸ್ವೀಕರಿಸಿದರೆ ಬಹುಶಃ ರಾಮಮಂದಿರ ಭೂಮಿ ಪೂಜೆ ಮುಂದೂಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.

ಅಂದ್ಹಾಗೆ, ಆಗಸ್ಟ್ 5 ರಂದ ರಾಮ ಮಂದಿರ ಶಿಲನ್ಯಾಸ ಕಾರ್ಯಕ್ರಮ ನಿಗದಿಯಾಗಿದ್ದು, ಪ್ರಧಾನಿ ಮೋದಿ ಈ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಾಕ್‌ಡೌನ್ ನಿಯಮಗಳನ್ನು ಅನುಸರಿಲಾಗುವುದು ಎಂದು ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಈಗಾಗಲೇ ಹೇಳಿದ್ದಾರೆ.

English summary
PIL in Allahabad HC seeking stay on Ram Mandir ‘bhumi pujan’; states violation of Covid guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X