ಉತ್ತರ ಪ್ರದೇಶದ ಮೊದಲ ವರ್ಚುವಲ್ ಪ್ರಚಾರದಲ್ಲಿ ಎಸ್‌ಪಿ ವಿರುದ್ಧ ಮೋದಿ ಸೇಡಿನ ಆರೋಪ
ಲಕ್ನೋ, ಜನವರಿ 31: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ರತಿಪಕ್ಷ ಸಮಾಜವಾದಿ ಪಕ್ಷ ಮತದಾರರನ್ನು ಪ್ರೇರೇಪಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ಅಭಿವೃದ್ಧಿ ನೀತಿಗಳಿಂದ ದೂರವಾಗಿದೆ ಎಂದು ದೂಷಿಸಿದ್ದಾರೆ.
ಉತ್ತರ ಪ್ರದೇಶದ ಶಾಮ್ಲಿ, ಮುಜಾಫರ್‌ನಗರ, ಬಾಗ್‌ಪತ್, ಸಹರಾನ್‌ಪುರ ಮತ್ತು ಗೌತಮ್ ಬುಧ್ ನಗರದ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ರಾಜ್ಯದಲ್ಲಿ ಮೊದಲ ವರ್ಚುವಲ್ ಪ್ರಚಾರ ನಡೆಸಿದರು.
"ನಕಲಿ ಸಮಾಜವಾದ (ನಕಲಿ ಸಮಾಜವಾದ್)ದ ವಿರುದ್ಧ ಗರೀಬ್ ಕಾ ಸರ್ಕಾರ್ (ಬಡವರ ಪರ ಸರ್ಕಾರ)" ಎಂದು ಹೇಳಿದ ಪ್ರಧಾನಿ ಮೋದಿ, ಬಡವರಿಗೆ ಮನೆಗಳು, ಹಿಂದುಳಿದ ವರ್ಗಗಳಿಗೆ ಹೊಸ ನೀತಿ, ವೈದ್ಯಕೀಯ ಕಾಲೇಜು, ಎಕ್ಸ್‌ಪ್ರೆಸ್‌ವೇಗಳ ಮೂಲಕ ಹೆಚ್ಚಿನ ಸಂಪರ್ಕ, ಮುಸ್ಲಿಂ ಮಹಿಳೆಯರು ಮತ್ತು ಮದುವೆ ಪ್ರಮಾಣ ಹೆಚ್ಚಿಸುವುದರ ಕುರಿತು ಪ್ರಧಾನಿ ಮೋದಿ ಉಲ್ಲೇಖಿಸಿದರು.

ಕನಸು ಕಾಣುವುದಕ್ಕಾಗಿ ನಿದ್ರೆಗೆ ಜಾರುತ್ತಾರೆ ಎಂದ ಲೇವಡಿ
"ಇತ್ತೀಚಿನ ದಿನಗಳಲ್ಲಿ ಜನರು ಬಹಳಷ್ಟು ಕನಸು ಕಾಣುತ್ತಿದ್ದಾರೆ, ಆದರೆ ನಿದ್ದೆ ಮಾಡುವವರು ಮಾತ್ರ ಇಂಥ ಕನಸುಗಳನ್ನು ಕಾಣಲು ಸಾಧ್ಯ ಎನ್ನುವ ಮೂಲಕ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ಪ್ರಧಾನಿ ಮೋದಿ ನೇರ ವಾಗ್ದಾಳಿ ನಡೆಸಿದ್ದರು. ಇತ್ತೀಚಿಗಷ್ಟೇ ಚುನಾವಣಾ ಪ್ರಚಾರದ ಅಖಾಡದಲ್ಲಿ ಅಖಿಲೇಶ್ ಯಾದವ್, ಪ್ರತಿದಿನ ತಮ್ಮ ಕನಸಿನಲ್ಲಿ ಬರುವ ಶ್ರೀಕೃಷ್ಣ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವೇ ಸರ್ಕಾರ ರಚಿಸುವುದಾಗಿ ಹೇಳುತ್ತಾನೆ ಎಂದು ಹೇಳಿಕೊಂಡಿದ್ದರು.

ನೋಯ್ಡಾ ವಸತಿ ಸಮಸ್ಯೆ ಬಗೆಹರಿಸಲು ವಿಶೇಷ ನಿಧಿ
ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ನಗರ ಪ್ರದೇಶಗಳಲ್ಲಿನ ವಸತಿ ಸಮಸ್ಯೆಯ ಬಗ್ಗೆಯೂ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ, "ಭ್ರಷ್ಟಾಚಾರದಿಂದ ಈ ಪ್ರದೇಶದಲ್ಲಿ ಫ್ಲ್ಯಾಟ್‌ಗಳನ್ನು ಖರೀದಿಸಿದ ಸಾವಿರಾರು ಜನರ ನೋವು ಅನುಭವಿಸುವಂತಾಗಿದೆ," ಎಂದು ಹೇಳಿದರು. ಪೂರ್ಣಗೊಳ್ಳದ ಈ ಫ್ಲಾಟ್‌ಗಳನ್ನು ಪೂರ್ಣಗೊಳಿಸುವುದಕ್ಕಾಗಿ ವಿಶೇಷ ನಿಧಿಯನ್ನು ನೀಡುವುದಾಗಿ ಎಂದು ಭರವಸೆ ಇತ್ತರು.

ಯುಪಿಯಲ್ಲಿ ಕ್ರಿಮಿನಲ್ ಸ್ನೇಹಿ ಸರ್ಕಾರಕ್ಕೆ ಹುನ್ನಾರ
ಉತ್ತರ ಪ್ರದೇಶದಲ್ಲಿ ನಾವು ಬದಲಾವಣೆ ತರುವುದಕ್ಕೆ ಪ್ರಯತ್ನಿಸುತ್ತಿದ್ದೇವೆ. ಆದರೆ ಪ್ರತಿಪಕ್ಷಗಳು ಸೇಡು ತೀರಿಸಿಕೊಳ್ಳುವುದಕ್ಕೆ ಹಾತೊರೆಯುತ್ತಿವೆ. ಈ ಜನರು ಅಂಥ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಅವರ ಮನಸ್ಥಿತಿಯನ್ನು ಅವರ ನಡುವಳಿಕೆಯೇ ತೋರಿಸುತ್ತದೆ. ಗಲಭೆ ಮನಸ್ಥಿತಿಯುಳ್ಳವರಿಗೆ ಟಿಕೆಟ್ ನೀಡುವ ಮೂಲಕ ಕ್ರಿಮಿನಲ್ ಸ್ನೇಹಿ ಸರ್ಕಾರವನ್ನು ರಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ," ಎಂದು ಪ್ರಧಾನಿ ಮೋದಿ ದೂಷಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಐದು ವರ್ಷಗಳಲ್ಲಿ ಆಗಿರುವ ಬದಲಾವಣೆ
"ಭಾರತದಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪ್ರತಿ ಬಡ ಕುಟುಂಬವನ್ನು ನೋಡಿಕೊಳ್ಳುತ್ತಿದೆ. 15 ಕೋಟಿ ನಾಗರಿಕರು ಉಚಿತ ಪಡಿತರ ಪಡೆಯುತ್ತಿದ್ದಾರೆ. ಇದೇ ಉತ್ತರ ಪ್ರದೇಶದಲ್ಲಿ ಐದು ವರ್ಷಗಳ ಹಿಂದೆ ಬಡವರಿಗೆ ನೀಡಬೇಕಾದ ಪಡಿತರವನ್ನು ಪಡಿತರ ಅಂಗಡಿಗಳಿಂದ ಕದಿಯಲಾಗುತ್ತಿತ್ತು. ಇಂದು ಪ್ರತಿ ತುತ್ತು ಬಡವರ ಮನೆಗೆ ಸೇರುತ್ತಿದೆ. ಇದೇ ಕಳೆದ ಐದು ವರ್ಷಗಳಲ್ಲಿ ಆಗಿರುವ ಬದಲಾವಣೆ," ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
"ನಾವು ಈಗ ಸಣ್ಣ ರೈತರ ಬಗ್ಗೆ ಚಿಂತಿಸಬೇಕಾಗಿದ್ದು, ಅದಕ್ಕಾಗಿ ಕೆಲಸ ಮಾಡಲು ಪ್ರಾರಂಭಿಸಿದ್ದೇವೆ. ಸಣ್ಣ ರೈತರು ಗ್ರಾಮೀಣ ಪ್ರದೇಶದ ಚಿತ್ರಣವನ್ನು ಬದಲಾಯಿಸುತ್ತಾರೆ," ಎಂದು ಹೇಳಿದರು.
Recommended Video

ಯುಪಿಯಲ್ಲಿ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಈ ಹಿಂದೆ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications