ಯುಪಿ ಸಿಎಂ ಜೊತೆ ಅಯೋಧ್ಯೆ ಅಭಿವೃದ್ಧಿ ಯೋಜನೆಯ ದೃಷ್ಟಿಕೋನ ವಿಮರ್ಶಿಸಿದ ಪ್ರಧಾನಿ
ಅಯೋಧ್ಯೆ, ಜೂ.26: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶನಿವಾರ ವರ್ಚುವಲ್ ಕಾನ್ಫೆರೆನ್ಸ್ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತುಕತೆ ನಡೆಸಿದ್ದಾರೆ.
ಆಧುನೀಕರಣ, ರಸ್ತೆಗಳು, ಮೂಲಸೌಕರ್ಯ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಮತ್ತು ಬಾಕಿ ಉಳಿದಿರುವ ಹಲವಾರು ಯೋಜನೆಗಳನ್ನು ಒಳಗೊಂಡಿರುವ ಅಯೋಧ್ಯೆಯ ಅಭಿವೃದ್ಧಿಯ ಭವಿಷ್ಯದ ದೃಷ್ಟಿಯನ್ನು ಪ್ರಧಾನಿ ಪರಿಶೀಲಿಸಿದ್ದಾರೆ.
ಮೂಲಗಳ ಪ್ರಕಾರ, ನಡೆಯುತ್ತಿರುವ ಯೋಜನೆಗಳನ್ನು ಪಿಎಂ ಪರಿಶೀಲಿಸಿದ್ದಾರೆ. ರಾಮ ಮಂದಿರ ನಿರ್ಮಾಣ ಪೂರ್ಣಗೊಳ್ಳುವವರೆಗೆ ಅಯೋಧ್ಯೆಯನ್ನು ಸ್ಮಾರ್ಟ್ ಸಿಟಿಯನ್ನಾಗಿ ಮಾಡುವತ್ತ ಗಮನಹರಿಸುವ ಬಗ್ಗೆ ತಿಳಿಸಿದ್ದಾರೆ.

''ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುವ ಈ ನಗರವನ್ನು ಸಂಪೂರ್ಣವಾಗಿ ತಂತ್ರಜ್ಞಾನ ಭರಿತವಾಗಿ ಸಜ್ಜುಗೊಳಿಸುವ ನಿಟ್ಟಿನಲ್ಲಿ, ನಗರದಲ್ಲಿ ಹೆಚ್ಚಿನ ಅಭಿವೃದ್ಧಿಯನ್ನು ಮಾಡುವ ಮಾಸ್ಟರ್ ಪ್ಲ್ಯಾನ್ ಬಗ್ಗೆ ಮೋದಿ ಚರ್ಚಿಸಿದ್ದಾರೆ,'' ಎಂದು ಮೂಲಗಳು ಸೂಚಿಸಿವೆ.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ''ನಾವು ನಿರ್ಮಿಸುತ್ತಿರುವ ಅಯೋಧ್ಯೆಯು ಪ್ರತಿಯೊಬ್ಬ ಭಾರತೀಯನಿಗಾಗಿ ಆಗಿರಬೇಕು,'' ಎಂದು ಹೇಳಿದ್ದಾರೆ ಎನ್ನಲಾಗಿದೆ.
ಈ ವರ್ಷದ ಫೆಬ್ರವರಿಯಲ್ಲಿ ''ರಾಜ್ಯ ಸರ್ಕಾರ ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಮಾಡಿದ ಪ್ರಸ್ತಾವನೆಯನ್ನು ಕೇಂದ್ರ ಅನುಮೋದಿಸಿದೆ,' ಎಂದು ಆದಿತ್ಯನಾಥ್ ಹೇಳಿದ್ದರು.
"ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಯುಪಿ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಅನುಮೋದಿಸಿದೆ. ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರವು ಸುಮಾರು 1,000 ಕೋಟಿ ರೂ.ಗಳನ್ನು ನೀಡಿದೆ. ಕೇಂದ್ರ ಸರ್ಕಾರವು 250 ಕೋಟಿ ರೂ. ನೀಡಿದೆ," ಎಂದು ಮುಖ್ಯಮಂತ್ರಿ ಎಎನ್‌ಐಗೆ ತಿಳಿಸಿದ್ದರು.
ಅಯೋಧ್ಯೆಯಲ್ಲಿ ಪ್ರವಾಸೋದ್ಯಮ ಮತ್ತು ತೀರ್ಥಯಾತ್ರೆಯ ಕುರಿತು ಮಾತನಾಡಿದ ಮುಖ್ಯಮಂತ್ರಿ, "ಅಯೋಧ್ಯೆಯು ರಾಮಜನ್ಮ ಭೂಮಿಯಾದ ಹಿನ್ನೆಲೆ ಜನಪ್ರಿಯವಾಗಿದೆ. ಭಗವಂತ ರಾಮನ ಮಂದಿರ ನಿರ್ಮಾಣ ಕಾರ್ಯ ಪ್ರಸ್ತುತ ಅಯೋಧ್ಯೆಯಲ್ಲಿ ನಡೆಯುತ್ತಿದೆ. ಲಕ್ಷಾಂತರ ಭಕ್ತರು ಮತ್ತು ಯಾತ್ರಾರ್ಥಿಗಳು ಅಯೋಧ್ಯೆಗೆ ಭೇಟಿ ನೀಡುತ್ತಾರೆ. ನಗರವು ಆಧ್ಯಾತ್ಮಿಕತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಸಹಕಾರಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಲ್ಲಿಯ ಅಭಿವೃದ್ಧಿಗೆಕೆಲಸ ಮಾಡುತ್ತಿವೆ," ಎಂದಿದ್ದರು.
(ಒನ್‌ಇಂಡಿಯಾ ಸುದ್ದಿ)












Click it and Unblock the Notifications