ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾರಣಾಸಿಯಲ್ಲಿ 64,180 ಕೋಟಿ ಮೌಲ್ಯದ PMASBY ಯೋಜನೆಗೆ ಮೋದಿ ಚಾಲನೆ

|
Google Oneindia Kannada News

ವಾರಣಾಸಿ, ಅಕ್ಟೋಬರ್ 25: ಉತ್ತರ ಪ್ರದೇಶದಲ್ಲಿ ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆ(PMASBY)ಯಡಿ 64,180 ಕೋಟಿ ಮೌಲ್ಯದ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕಾರ್ಯಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಲಿದ್ದಾರೆ.

ಕಳೆದ ಒಂದು ವಾರದಲ್ಲಿ ಎರಡನೇ ಬಾರಿ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ, 5,000 ಕೋಟಿ ಮೌಲ್ಯದ 9 ವೈದ್ಯಕೀಯ ಹಾಗೂ 30 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಹಾಜರಾಗಲಿದ್ದಾರೆ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ

ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯು ವಾರಣಾಸಿ ವೈದ್ಯಕೀಯ ಕಾಲೇಜು, ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಪಂಚಾಯತ್ ಮತ್ತು ಬ್ಲಾಕ್ ಮಟ್ಟದ ವೈದ್ಯಕೀಯ ಸಿಬ್ಬಂದಿಗೆ ಅನುಕೂಲಕರವಾಗಿರಲಿದೆ.

PM Modi to Launch 64,000 Crore Worth Atmanirbhar Swasth Bharat Yojana in Varanasi

ಏನಿದು ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆ?:

ದೇಶದಲ್ಲಿ ಸೃಷ್ಟಿಯಾದ ಆರೋಗ್ಯ ಬಿಕ್ಕಟ್ಟುಗಳನ್ನು ಎದುರಿಸುವಲ್ಲಿ ಸಮುದಾಯಗಳನ್ನು ಸ್ವಾವಲಂಬಿಯಾಗಿ ಮಾಡುವುದು. ಈ ನಿಟ್ಟಿನಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ಆರೋಗ್ಯ ಮೂಲಸೌಕರ್ಯ, ಭದ್ರತೆ ಮತ್ತು ವೈದ್ಯಕೀಯ ಸಂಶೋಧನೆ ಕ್ಷೇತ್ರಗಳ ಶಕ್ತಿಯನ್ನು ವೃದ್ಧಿಸುವುದು ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಭಾರತದ ಆರೋಗ್ಯ ವ್ಯವಸ್ಥೆಯ ಪ್ರಾಥಮಿಕ, ಮಾಧ್ಯಮಿಕ ಹಾಗೂ ತೃತೀಯ ಮಟ್ಟದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವತ್ತ ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯ ಗುರಿಯನ್ನು ಕೇಂದ್ರೀಕರಿಸಲಾಗಿರುತ್ತದೆ. ಅದರ ಜೊತೆಗೆ ಪ್ರಸ್ತುತ ಎದುರಿಸುತ್ತಿರುವ ವೈದ್ಯಕೀಯ ಸವಾಲುಗಳ ಜೊತೆಗೆ ಭವಿಷ್ಯದಲ್ಲಿ ಎದುರಾಗುವ ಸಮಸ್ಯೆಗಳ ನಿರ್ವಹಣೆಗೆ ವ್ಯವಸ್ಥೆಯನ್ನು ಸಜ್ಜುಗೊಳಿಸುವ ಉದ್ದೇಶವನ್ನು ಹೊಂದಿರುತ್ತದೆ.

ರಾಜ್ಯ ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲು ಅಗತ್ಯವಾದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಈ ಯೋಜನೆಯು ನಿಧಿಯ ಅನುದಾನವನ್ನು ಒದಗಿಸುತ್ತದೆ. ಕೇಂದ್ರ ಸರ್ಕಾರವು ಈ ವರ್ಷದ ಫೆಬ್ರವರಿ 1 ರಂದು 2021-22 ರ ಬಜೆಟ್‌ನಲ್ಲಿ ಯೋಜನೆಯನ್ನು ಘೋಷಿಸಿತು ಮತ್ತು ಸೆಪ್ಟೆಂಬರ್‌ನಲ್ಲಿ ಕ್ಯಾಬಿನೆಟ್ ಇದನ್ನು ಅನುಮೋದಿಸಿತು.

PMASBY ಬಗ್ಗೆ ಪ್ರಧಾನಿ ಸಚಿವಾಲಯದ ಪ್ರಕಟಣೆ:

ಪ್ರಧಾನ ಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆ (PMASBY) ಅಡಿಯಲ್ಲಿ, ರಾಷ್ಟ್ರೀಯ ಆರೋಗ್ಯ ಸಂಸ್ಥೆ, ಸೂಕ್ಷ್ಮಾಣುರೋಗಶಾಸ್ತ್ರದ ಕುರಿತು ಸಂಶೋಧನೆಗೆ ನಾಲ್ಕು ಹೊಸ ರಾಷ್ಟ್ರೀಯ ಸಂಸ್ಥೆ, WHO ಆಗ್ನೇಯ ಏಷ್ಯಾ ಪ್ರದೇಶದ ಪ್ರಾದೇಶಿಕ ಸಂಶೋಧನಾ ವೇದಿಕೆ, ಒಂಬತ್ತು ಜೈವಿಕ ಸುರಕ್ಷತೆ ಮಟ್ಟ- III ಪ್ರಯೋಗಾಲಯಗಳು, ಐದು ಹೊಸ ಪ್ರಾದೇಶಿಕ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪಿಎಂಒ ಹೇಳಿದೆ.

ಪ್ರಧಾನ ಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯಡಿ 17,788 ಗ್ರಾಮೀಣ ಆರೋಗ್ಯ ಮತ್ತು ಆರೈಕೆ ಕೇಂದ್ರಗಳಿಗೆ ಹಾಗೂ 10 ಕೇಂದ್ರೀಕೃತ ರಾಜ್ಯಗಳಿಗೆ ಹೆಚ್ಚಿನ ಬೆಂಬಲವನ್ನು ಒದಗಿಸಲಿದೆ. ಇದಲ್ಲದೆ, ಎಲ್ಲಾ ರಾಜ್ಯಗಳಲ್ಲಿ 11,024 ನಗರ ಆರೋಗ್ಯ ಮತ್ತು ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದೆ.

English summary
PM Modi to Launch 64,000 Crore Worth Atmanirbhar Swasth Bharat Yojana in Varanasi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X