ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿಯವರಿಂದ ಇಂದು 296 ಕಿಮೀ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ

|
Google Oneindia Kannada News

ಲಕ್ನೋ ಜುಲೈ 16: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜುಲೈ 16) ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಜಲೌನ್ ಜಿಲ್ಲೆಯ ಒರೈ ತೆಹಸಿಲ್‌ನ ಕೈಥೇರಿ ಗ್ರಾಮದಲ್ಲಿ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಲಿದ್ದಾರೆ. ಇದು ಸುಮಾರು 14,850 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 296 ಕಿಮೀ ಉದ್ದದ ನಾಲ್ಕು ಪಥದ ಎಕ್ಸ್‌ಪ್ರೆಸ್‌ವೇ ಆಗಿದೆ. ಪ್ರಧಾನಿ ಕಾರ್ಯಾಲಯದ ಪ್ರಕಾರ, ಎಕ್ಸ್‌ಪ್ರೆಸ್‌ವೇ ಕಾಮಗಾರಿಯನ್ನು 28 ತಿಂಗಳೊಳಗೆ ಪೂರ್ಣಗೊಳಿಸಲಾಗಿದೆ.

ಹೇಳಿಕೆಯ ಪ್ರಕಾರ, ಬೆಳಿಗ್ಗೆ 11:30 ರ ಸುಮಾರಿಗೆ ಪ್ರಧಾನಿ ಮೋದಿ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಲಿದ್ದಾರೆ. ಫೆಬ್ರವರಿ 29, 2020 ರಂದು ಪ್ರಧಾನಿ ಮೋದಿ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು.

296 ಕಿಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಏಳು ಜಿಲ್ಲೆಗಳ ಮೂಲಕ ಹಾದು ಹೋಗುವುದರಿಂದ ಏಳು ಜಿಲ್ಲೆಗಳಿಗೆ ಪ್ರಯೋಜನವಾಗಲಿದೆ. ಇದು ಚಿತ್ರಕೂಟ್ ಜಿಲ್ಲೆಯ ಭರತ್‌ಕಪ್ ಬಳಿಯ ಗೊಂಡಾ ಹಳ್ಳಿಯಲ್ಲಿ NH-35 ನಿಂದ ಇಟಾವಾ ಜಿಲ್ಲೆಯ ಕುದುರೆಲ್ ಗ್ರಾಮದವರೆಗೆ ವಿಸ್ತರಿಸುತ್ತದೆ. ಅಲ್ಲಿ ಇದು ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯೊಂದಿಗೆ ಸಂಧಿಸುತ್ತದೆ. ಇದು ಚಿತ್ರಕೂಟ, ಬಂದಾ, ಮಹೋಬಾ, ಹಮೀರ್‌ಪುರ, ಜಲೌನ್, ಔರೈಯಾ ಮತ್ತು ಇಟಾವಾ ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ.

PM Modi will inaugurate 296 km long Bundelkhand Expressway today

ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಈ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸುವುದರ ಜೊತೆಗೆ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಪಿಎಂಒ ಹೇಳಿದೆ. PMO ಪ್ರಕಾರ, ಎಕ್ಸ್‌ಪ್ರೆಸ್‌ವೇ ಪಕ್ಕದಲ್ಲಿರುವ ಬಂದಾ ಮತ್ತು ಜಲೌನ್ ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್‌ಗಳನ್ನು ಮಾಡುವ ಕೆಲಸ ಪ್ರಾರಂಭವಾಗಿದೆ.

English summary
Prime Minister Narendra Modi will visit Uttar Pradesh today (July 16) and will inaugurate the Bundelkhand Expressway at Kaitheri village in Orai tehsil of Jalaun district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X