ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿ ಚುನಾವಣೆ: ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ಸಂವಾದ

|
Google Oneindia Kannada News

ಲಕ್ನೋ, ಜನವರಿ 19: ಉತ್ತರ ಪ್ರದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಹಾವಳಿ ಹೇಗಿದೆ. ಕೊವಿಡ್-19 ಭೀತಿ ನಡುವೆ ಚುನಾವಣಾ ಪ್ರಚಾರ ಕಾರ್ಯ ಚಟುವಟಿಕೆ ನಡೆಸುವುದು ಹೇಗೆ ಎಂಬುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಪಕ್ಷದ ಕಾರ್ಯಕರ್ತರ ಜೊತೆ ಸಂವಾದ ನಡೆಸಿದ್ದಾರೆ.

ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಿದ ನಂತರ ಪಕ್ಷದ ಕಾರ್ಯಕರ್ತರ ಜೊತೆಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ನಡೆಸುತ್ತಿರುವ ಮೊದಲ ರಾಜಕೀಯ ಸಂವಾದ ಇದಾಗಿದೆ. ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರೊಂದಿಗೆ ವರ್ಚುವಲ್ ಸಭೆ ಮೂಲಕ ಸಂವಾದ ನಡೆಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಖಿಲೇಶ್ ಯಾದವ್!ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಖಿಲೇಶ್ ಯಾದವ್!

ವಾರಣಾಸಿ ಲೋಕಸಭೆ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರಗಳು ಮತ್ತು ಬೂತ್ ಮಟ್ಟದ ಕಾರ್ಯಕರ್ತರು ಸೇರಿದಂತೆ 10,000ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪ್ರಧಾನಿ ಜೊತೆಗಿನ ಸಂವಾದದಲ್ಲಿ ಭಾಗವಹಿಸಿದ್ದರು. ಬಿಜೆಪಿ ಕಾರ್ಯಕರ್ತರ ಜೊತೆಗೆ ಪ್ರಧಾನಿ ಮೋದಿ ನಡೆಸಿದ ಸಂವಾದದಲ್ಲಿ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಾಯಕರು, ಉತ್ತರ ಪ್ರದೇಶದ ಸಚಿವರು ಹಾಗೂ ಇತರೆ ಘಟಕಗಳ ಅಧ್ಯಕ್ಷರು ಸಹ ಹಾಜರಾಗಿದ್ದರು. ಪ್ರಧಾನಿ ಮೋದಿ ಸಂವಾದದಲ್ಲಿ ನಾಯಕರು ಮತ್ತು ಕಾರ್ಯಕರ್ತರ ಪ್ರಶ್ನೆ ಹೇಗಿತ್ತು, ಅದಕ್ಕೆ ಪ್ರಧಾನಿಯವರ ಉತ್ತರದ ವೈಖರಿ ಹೇಗಿತ್ತು ಎಂಬುದನ್ನು ಮುಂದೆ ತಿಳಿಯಿರಿ.

PM Modi’s interacts With Kashi Workers to Boost Uttar Pradesh Poll Campaign

ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ಮಾತು:

- ಉತ್ತರ ವಿಧಾನಸಭೆ ವಿಭಾಗದ ವ್ಯಾಪ್ತಿಗೆ ಸೇರಿದ ಬಾಗೇಶ್ವರಿ ಘಟಕದ ಕಾರ್ಯಕರ್ತ ಅಶುತೋಶ್ ಪ್ರಶ್ನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರಿಸಿದರು. ಆಶುತೋಶ್ ಕಾಶಿಯ ಹವಾಮಾನ ಪರಿಸ್ಥಿತಿ, ಕೊವಿಡ್-19 ಪಿಡುಗಿನ ನಡುವೆ ಉತ್ತರ ಪ್ರದೇಸ ವಿಧಾನಸಭೆಯ ಬಗ್ಗೆ ಜನಾಭಿಪ್ರಾಯ ಹೇಗಿದೆ. ಕಾಶಿಯಲ್ಲಿ ವಾಹನ ದಟ್ಟಣೆಯನ್ನು ಕಡಿಮೆಗೊಳಿಸುವುದಕ್ಕೆ ರಸ್ತೆ ಅಗಲೀಕರಣಗೊಳಿಸುವ ಬಗ್ಗೆ ಅಶುತೋಶ್ ಮಾತನಾಡಿದರು. ಟ್ರಾಫಿಕ್ ಚಿತ್ರಣವನ್ನು ಸುಧಾರಿಸಲು ಪಾರ್ಕಿಂಗ್ ವಲಯಗಳನ್ನು ಬಳಸಲು ಪ್ರಾರಂಭಿಸುವಂತೆ ಮೋದಿ ಕಾಶಿಯ ಜನರಿಗೆ ಮನವಿ ಮಾಡಿದರು.

- ದಕ್ಷಿಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಸೇರಿದ ಬಿಜೆಪಿ ಕಾರ್ಯಕರ್ತ ಶ್ರವಣ್ ಕುಮಾರ್ ರಾವತ್ ಕಾಶಿ ವಿಶ್ವನಾಥ ಧಾಮದ ನಿರ್ಮಾಣದ ನಂತರ ಆಗುತ್ತಿರುವ ಬದಲಾವಣೆಗಳು ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗಮನ ಸೆಳೆದರು. ಇದಕ್ಕೆ ಪ್ರತಿಯಾಗಿ ವಿಶ್ವನಾಥನ ಆಶೀರ್ವಾದದಿಂದ ಕೆವಿಡಿ ಸಾಧ್ಯವಾಗಿದೆ ಎಂದು ಮೋದಿ ಹೇಳಿದರು.

- ವಾರಣಾಸಿ ಕಂಟೇನ್ಮೆಂಟ್ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಮಹಿಳಾ ಕಾರ್ಯಕರ್ತೆ ಸೀಮಾ ಕುಮಾರಿ, ಮಹಿಳೆಯರು ಕೂಡ ಡಿಜಿಟಲ್ ಮನಿ ಹಾಗೂ ಸ್ವಯಂ-ಸೇವಾ ಸಂಘಟನೆಗಳನ್ನು ನಡೆಸುವುದಕ್ಕೆ ಉತ್ತೇಜನ ನೀಡುವಂತೆ ಪ್ರಧಾನಿಯವರಲ್ಲಿ ಮನವಿ ಮಾಡಿಕೊಂಡರು.

- ರೋಹಾನಿಯಾ ವಿಧಾನಸಭೆ ವ್ಯಾಪ್ತಿಯ ಮನೋಜ್ ಕುಮಾರ್ ಪಟೇಲ್ ಎಂಬುವವರು ಕಾಶಿ ಕ್ಷೇತ್ರದಲ್ಲಿ ರೈತರ ಮನಸ್ಥಿತಿ. ಕೃಷಿ ಕ್ಷೇತ್ರಕ್ಕಾಗಿ ಕಾಶಿಯಲ್ಲಿ ಪರಿಚಯಿಸಲಾದ ಯೋಜನೆಗಳ ಸಹಾಯದಿಂದ ಅವರು ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂಬುದರ ಬಗ್ಗೆ ಪ್ರಧಾನಿಯವರಿಗೆ ತಿಳಿಸಿದರು.

- ಸೇವಾಪುರಿ ವಿಧಾನಸಭೆ ಕ್ಷೇತ್ರದ ನರೇನ್ ಪ್ರಜಾಪತಿ ಎಂಬುವವರು ಕ್ಯಾನ್ಸರ್ ಆಸ್ಪತ್ರೆಗಳು ಮತ್ತು ಆಸ್ಪತ್ರೆಗಳಲ್ಲಿನ ಸುಧಾರಿತ ಸೌಲಭ್ಯಗಳಿಂದ ನಗರವು ಹೇಗೆ ಆರೋಗ್ಯ ಸೇವೆಗಳ ಹಬ್ ಆಗುತ್ತಿದೆ ಎಂಬುದರ ಬಗ್ಗೆ ಪ್ರಧಾನಿಗೆ ತಿಳಿಸಿ ಕೊಟ್ಟರು. ಈ ವೇಳೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಬಡವರು ಮತ್ತು ಅನಕ್ಷರಸ್ಥರಿಗೆ ಸರ್ಕಾರದ ಯೋಜನೆಗಳ ಬಗ್ಗೆ ತಿಳಿಸಲು ಸಹಾಯ ಮಾಡುವಂತೆ ಸಲಹೆ ನೀಡಿದರು.

- ಶಿವಪುರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತ ಮಿಥುನ್ ಕುಮಾರ್, ಕ್ರೀಡೆಗೆ ಉತ್ತೇನ ನೀಡುವಂತೆ ಮನವಿ ಮಾಡಿಕೊಂಡರು. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳ ಉತ್ತೇಜನಕ್ಕಾಗಿ ಕ್ರೀಡಾಕೂಟಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಕ್ರೀಡೆಗೆ ಉತ್ತೇಜನ ನೀಡುವುದರ ಜೊತೆ ಜೊತೆಗ ಗ್ರಾಮೀಣ ಪ್ರದೇಶಗಳಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಉತ್ತಮ ವೇದಿಕೆ ಒದಗಿಸುವತ್ತ ಗಮನ ಹರಿಸುವುದಾಗಿ ಸೂಚಿಸಿದರು.

- ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಕಾರ್ಯಕರ್ತರ ಸಂವಾದದ ವೇಳೆ ಕಾಶಿ ವಿಶ್ವನಾಥ್ ಕಾರಿಡಾರ್ ಮರುಸ್ಥಾಪನೆ, ಮಹಿಳಾ ಸಬಲೀಕರಣ, ಮೂಲಸೌಕರ್ಯ ಮತ್ತು ಆರೋಗ್ಯ ಅಭಿವೃದ್ಧಿ ವಿಷಯಗಳು ಚರ್ಚೆಗೆ ಬಂದವು.

ಉತ್ತರ ಪ್ರದೇಶದಲ್ಲಿ ಚುನಾವಣೆ ಹಿನ್ನೆಲೆ:

ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳಿಗೆ ಒಟ್ಟು ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

2017 ಉತ್ತರ ಪ್ರದೇಶ ಚುನಾವಣೆ ಫಲಿತಾಂಶ

ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

English summary
PM Modi’s interacts With Kashi Workers to Boost Uttar Pradesh Poll Campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X