ಅಭಿವೃದ್ಧಿಗಾಗಿ ಸುಧಾರಣೆ ಅಗತ್ಯ, ಹಳೆಯ ಕಾನೂನುಗಳು ಹೊರೆಯಾಗುತ್ತಿವೆ: ಪ್ರಧಾನಿ ಮೋದಿ
ಲಕ್ನೋ, ಡಿಸೆಂಬರ್ 7: ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿರುವುದರ ನಡುವೆಯೇ, ಅಭಿವೃದ್ಧಿಗೆ ಸುಧಾರಣೆಗಳು ಅಗತ್ಯವಾಗಿವೆ ಮತ್ತು ಕಳೆದ ಶತಮಾನದಿಂದ ಇರುವ ಕೆಲವು ಕಾನೂನುಗಳು ಈಗ ಹೊರೆಯಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಗ್ರಾ ಮೆಟ್ರೋ ರೈಲು ಯೋಜನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಪ್ರಧಾನಿ, ತಮ್ಮ ಸರ್ಕಾರ ನಡೆಸುತ್ತಿರುವ ಅಭಿವೃದ್ಧಿಗಳು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತಿವೆ ಎಂದಿದ್ದಾರೆ.
ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ಮಂಗಳವಾರ ಭಾರತ್ ಬಂದ್ಗೆ ಕರೆ ನೀಡಿವೆ. ಈ ಸಂದರ್ಭದಲ್ಲಿ ಸುಧಾರಣೆಗಾಗಿ ಕಾನೂನಿನ ಬದಲಾವಣೆಗಳ ಅಗತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
'ಅಭಿವೃದ್ಧಿಗೆ ಸುಧಾರಣೆಗಳು ಅಗತ್ಯ. ಹೊಸ ವ್ಯವಸ್ಥೆಗೆ ಮತ್ತು ಹೊಸ ಸೌಲಭ್ಯಗಳನ್ನು ನೀಡಲು ಸುಧಾರಣೆಗಳು ಬಹಳ ಅವಶ್ಯಕವಾಗಿವೆ. ಹಿಂದಿನ ಶತಮಾನದ ಕಾನೂನುಗಳನ್ನು ಇರಿಸಿಕೊಂಡು ಮುಂದಿನ ಶತಮಾನವನ್ನು ನಾವು ಕಟ್ಟಲು ಸಾಧ್ಯವಿಲ್ಲ' ಎಂದು ಮೋದಿ ಹೇಳಿದ್ದಾರೆ.

'ಕೆಲವು ಕಾನೂನುಗಳು ಕಳೆದ ಶತಮಾನದಲ್ಲಿ ಒಳ್ಳೆಯದ್ದು ಎನಿಸಿಕೊಂಡಿದ್ದವು. ಆದರೆ ಅವು ಈಗಿನ ಶತಮಾನದಲ್ಲಿ ಹೊರೆಯಾಗಿ ಪರಿಣಮಿಸಿವೆ. ಸುಧಾರಣೆ ಎನ್ನುವುದು ನಿರಂತರ ಪ್ರಕ್ರಿಯೆಯಾಗಬೇಕು' ಎಂದು ತಿಳಿಸಿದ್ದಾರೆ.
ತಮ್ಮ ಸರ್ಕಾರವು ಆಮೂಲಾಗ್ರ ಸುಧಾರಣೆಗಳನ್ನು ನಡೆಸುತ್ತಿದೆ ಎಂದು ಮೋದಿ ಹೇಳಿಕೊಂಡಿದ್ದಾರೆ. 'ಈ ಮುಂಚೆ ಸುಧಾರಣೆಗಳು ತುಂಡು ತುಂಡಾದ ಸ್ವರೂಪಗಳಲ್ಲಿ ಅಥವಾ ಕೆಲವು ವಲಯಗಳನ್ನು ಮತ್ತು ವಿಭಾಗಗಳನ್ನು ಗಮನದಲ್ಲಿರಿಸಿಕೊಂಡು ನಡೆಯುತ್ತಿದ್ದವು' ಎಂದಿದ್ದಾರೆ.
'ಸರ್ಕಾರದ ಈ ಪ್ರಯತ್ನಗಳಿಗಾಗಿ ಬಡ ಮತ್ತು ಮಧ್ಯಮ ವರ್ಗದ ಜನರು ಇತ್ತೀಚಿನ ವರ್ಷಗಳಲ್ಲಿ ತಮ್ಮ ಅಭೂತಪೂರ್ವ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಅವರ ಬೆಂಬಲವು ಹೊಸ ಕೆಲಸಗಳನ್ನು ಮಾಡಲು ಮತ್ತು ಹೊಸ ಹೆಜ್ಜೆಗಳನ್ನು ಇರಿಸಲು ನನಗೆ ಧೈರ್ಯ ನೀಡುತ್ತಿದೆ' ಎಂದು ಹೇಳಿದ್ದಾರೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ











Click it and Unblock the Notifications