ಉತ್ತರ ಪ್ರದೇಶದ : ಪ್ರತಿಭಟನೆ ವೇಳೆ ಹಿಂಸಾಚಾರ, ಪೊಲೀಸ್ ಸಾವು
ಲಕ್ನೋ, ಡಿಸೆಂಬರ್ 03 : ಉತ್ತರ ಪ್ರದೇಶದ ಬುಲಂದರ್‌ಶೆಹರ್‌ನಲ್ಲಿ ಹಿಂಸಾಚಾರ ನಡೆದಿದ್ದು ಒಬ್ಬರು ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ. ಗಲಭೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದು, ಒಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.
ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಸೋಮವಾರ ಪ್ರತಿಭಟನೆ ನಡೆಯುತ್ತಿತ್ತು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾನಿರತರು ಪೊಲೀಸ್ ವಾಹನ ಮತ್ತು ಠಾಣೆಗೆ ಬೆಂಕಿ ಹಚ್ಚಿದರು.
ಈ ಹಿಂಸಾಚಾರದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸುಭೋದ್ ಕುಮಾರ್ ಸಿಂಗ್ ಎನ್ನುವವರು ಮೃತಪಟ್ಟಿದ್ದಾರೆ. ಬುಲಂದರ್‌ಶೆಹರ್ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಮಿರತ್ ಎಡಿಜಿ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಿದ್ದಾರೆ. ಯಾವ-ಯಾವ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಪ್ರತಿಭಟನೆ ವೇಳೆ ಜನರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಇದೇ ಹಿಂಸಾಚಾರಕ್ಕೆ ಕಾರಣವಾಯಿತೇ? ಎಂಬುದು ಇನ್ನೂ ತಿಳಿದಿಲ್ಲ. ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.












Click it and Unblock the Notifications