ಮಾಸ್ಕ್ ಹಾಕದವರಿಗೆ ದಂಡ ಹಾಕುತ್ತಿದ್ದ ಪೊಲೀಸರಿಗೆ ದಂಡ!

ಲಕ್ನೋ, ಆಗಸ್ಟ್ 11 : ಮಾಸ್ಕ್ ಹಾಕದೇ ಬೈಕ್, ಸೈಕಲ್‌ನಲ್ಲಿ ಸಂಚಾರ ನಡೆಸುತ್ತಿದ್ದ ಜನರಿಗೆ ದಂಡ ವಿಧಿಸುತ್ತಿದ್ದ ಪೊಲೀಸರಿಗೆ ದಂಡ ಹಾಕಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬುಂಡಿ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ರಸ್ತೆಯಲ್ಲಿ ಬರುವ ವಾಹನ ಸವಾರರು ಮಾಸ್ಕ್ ಹಾಕದಿದ್ದರೆ 500 ರೂ. ದಂಡ ಹಾಕುತ್ತಿದ್ದರು. ಆದರೆ, ಅವರೇ ಮಾಸ್ಕ್ ಹಾಕಿರಲಿಲ್ಲ.

ಇದನ್ನು ಗಮನಿಸಿದ್ದ ಜನರು ಫೋಟೋ ತೆಗೆದು ಎಸ್‌ಪಿಗೆ ಕಳಿಸಿದ್ದರು. ಎಸ್ಪಿ ಪರಿಶೀಲನೆಗೆ ಬಂದಾಗ ಸಿಬ್ಬಂದಿಯೇ ಮಾಸ್ಕ್ ಹಾಕದಿರುವುದು ತಿಳಿದಿದೆ. ಆದ್ದರಿಂದ ಅವರಿಗೆ 500 ರೂ. ದಂದ ಹಾಕಲಾಗಿದೆ.

Police Officer Fined For Not Wearing Mask

ಕೋವಿಡ್ ಭೀತಿ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸಂಚಾರ ನಡೆಸುವಾಗ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಉತ್ತರ ಪ್ರದೇಶ ಸರ್ಕಾರ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ.

ಜನರಿಗೆ ತಿಳುವಳಿಕೆ ಹೇಳುವ ಪೊಲೀಸರು ಸಹ ನಿಯಮಗಳನ್ನು ಪಾಲನೆ ಮಾಡಬೇಕು. ಅವರು ಕಾನೂನಿಗಿಂತ ದೊಡ್ಡವರಲ್ಲ ಎಂಬ ಸಂದೇಶವನ್ನು ಕಳಿಸಲು ಪೊಲೀಸ್ ಸಿಬ್ಬಂದಿಗೆ ದಂಡ ಹಾಕಲಾಗಿದೆ ಎಂದು ಎಸ್‌ಪಿ ಹೇಳಿದ್ದಾರೆ.

ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣ ದಾಖಲಾದ ದಿನದಿಂದ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಹ ಕರೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+