ಮೋದಿ ಹೊಗಳಿದ ಮುಲಾಯಂಗೆ ಉತ್ತರ ಪ್ರದೇಶದಲ್ಲಿ ಅದ್ಧೂರಿ ಸ್ವಾಗತ!

ಲಕ್ನೋ, ಫೆಬ್ರವರಿ 14: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರಿಗೆ ಉತ್ತರ ಪ್ರದೇಶದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ!

ಹೌದು, ಮೋದಿ ಅವರೇ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಹಾರೈಸಿದ ಮುಲಾಯಂ ಸಿಂಗ್ ಯಾದವ್ ಅವರನ್ನು ಸ್ವಾಗತಿಸುವಂಥ ಪೋಸ್ಟರ್ ಗಳು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ರಾರಾಜಿಸುತ್ತಿವೆ.

ಬುಧವಾರ ಸಂಸತ್ತಿನಲ್ಲಿ ಮಾತನಾಡುತ್ತಿದ್ದ 79 ರ ಮುಲಾಯಂ ಸಿಂಗ್ ಯಾದವ್, "ಎಲ್ಲರನ್ನೂ ಒಗ್ಗಟ್ಟಿನಿಂದ ಕೊಂಡೊಯ್ಯುತ್ತಿರುವ ನರೇಂದ್ರ ಮೋದಿ ಅವರನ್ನು ನಾನು ಅಭಿನಂದಿಸುತ್ತೇನೆ. ನನಗೆ ಭರವಸೆ ಇದೆ ನೀವು ಮತ್ತೊಮ್ಮೆ ಪ್ರಧಾನಿಯಾಗುತ್ತೀರಿ, ಅದೇ ನನ್ನ ಹಾರೈಕೆ" ಎಂದು ಅಚ್ಚರಿಯ ಹೇಳಿಕೆ ನೀಡಿದ್ದರು.

Posters in Lucknow welcomes Mulayam Singh Yadav for praising Modi

ನಂತರ ಮುಲಾಯಂ ಅವರ ಹೇಳಿಕೆಯನ್ನು ಸ್ವಾಗತಿಸಿದ್ದ ಮೋದಿ, "ನಿಮ್ಮ ಹಾರೈಕೆಗೆ ಧನ್ಯವಾದಗಳು" ಎಂದರು. ಈ ಬೆಳವಣಿಗೆ ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ತಲ್ಲಣ ಎಬ್ಬಿಸಿದ್ದರೆ, ಇತ್ತ ಉತ್ತರ ಪ್ರದೇಶದಲ್ಲಿ ಬಿಜೆಪಿ ಬೆಂಬಲಿಗರು, ಪೋಸ್ಟರ್ ಗಳನ್ನು ಹಾಕಿ ಮುಲಾಯಂ ಅವರ ಹೇಳಿಕೆಯನ್ನು ಸ್ವಾಗತಿಸಿದ್ದಾರೆ.

ನೀವು 125 ಕೋಟಿ ಭಾರತೀಯರ ಮನದಿಂಗಿತವನ್ನು ಹೇಳಿದ್ದೀರಿ, ಧನ್ಯವಾದಗಳು ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+