ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ನಿಯಂತ್ರಣ ವಿಚಾರದಲ್ಲಿ ಕಾಶಿ ಮಾದರಿಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

|
Google Oneindia Kannada News

ಲಕ್ನೋ, ಮೇ 20: ತೌಕ್ತೆ ಚಂಡಮಾರುತದ ಪರಿಣಾಮದ ಬಗ್ಗೆ ಪರಿಶೀಲನೆ ನಡೆಸಲು ಬುಧವಾರ ಗುಜರಾತ್ ಪ್ರವಾಸ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಯುಪಿ ಸರ್ಕಾರ ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯಲ್ಲಿ ಕೈಗೊಂಡ ಕ್ರಮಗಳನ್ನು ಶ್ಲಾಘಿಸಿದರು.

ವರದಿಗಳ ಪ್ರಕಾರ, ವಾರಣಾಸಿಯಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಯಲಿಲ್ಲ. ಬದಲಾಗಿ ಕಂಟೈನ್‌ಮೆಂಟ್‌ ಝೋನ್‌ಗಳನ್ನು ಗುರುತಿಸಲಾಗಿದೆ. ಇದರಿಂದಾಗಿ ಸಕರಾತ್ಮಕತೆಯೊಂದಿಗೆ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಾಗಿದೆ ಎಂದು ಹೇಳಲಾಗಿದೆ.

ದೇಶದಲ್ಲಿ ಎರಡನೇ ಕೊರೊನಾ ಅಲೆ ಕಾಣಿಸಿಕೊಂಡ ಬಳಿಕ ಏಪ್ರಿಲ್‌ನಿಂದ ಕಾಶಿಯಲ್ಲಿ ಅಧಿಕಾರಿ ಎ ಕೆ ಶರ್ಮಾ ಕಾಶಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಕ್ಯಾಂಪೇನ್‌ಗಳು ನಡೆಸುತ್ತಿದ್ದಾರೆ. ಹಾಗೆಯೇ ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.

Prime minister narendra modi praises kashi model to control spread of coronavirus

ರಕ್ಷಣಾ ಸಚಿವಾಲಯವು ಕೋವಿಡ್ ಆಸ್ಪತ್ರೆಯನ್ನು ಸ್ಥಾಪನೆ ಮಾಡಿದ್ದರೂ ಕೂಡಾ ಇಲ್ಲಿನ ಆಡಳಿತವು ಮ್ಲಜನಕ ಸಿಲಿಂಡರ್‌ಗಳ ಪೂರೈಕೆ, ಸಾಂದ್ರಕಗಳ ವಿಚಾರದಲ್ಲಿ ಸೂಕ್ತ ನಿರ್ವಹಣೆ ಮಾಡಿದೆ ಎಂದು ಹೇಳಲಾಗಿದೆ.

ಇನ್ನು ಗುಜರಾತ್‌ನಲ್ಲಿ ಒಟ್ಟು 7,66,201 ಪ್ರಕರಣಗಳು ದೃಢಪಟ್ಟಿದ್ದು, 9,269 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

(ಒನ್ಇಂಡಿಯಾ ಸುದ್ದಿ)

English summary
Prime minister narendra modi praises kashi model to control spread of coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X