ಚುನಾವಣೆಯ ಸೋಲಿಗೆ 'ಇವರೇ' ಕಾರಣ, ಪ್ರಿಯಾಂಕಾ ರೋಷ ಗುರಿ ಮಾಡಿದ್ದು ಯಾರನ್ನ?
Recommended Video
ರಾಯ್ಬರೇಲಿ, ಜೂನ್ 13: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಪ್ರದರ್ಶನಕ್ಕೆ ಕಾರಣವೇನು ಎಮಬ ಬಗ್ಗೆ ಈಗಾಗಲೇ ಸಾಕಷ್ಟು ವಿಶ್ಲೇಷಣೆಗಳು ನಡೆದಿವೆ. ಆದರೆ ಕಾಂಗ್ರೆಸ್ ಸೋಲಿಗೆ ಅಸಲಿ ಕಾರಣ ಏನು ಎಂಬ ಬಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾತನಾಡಿದ್ದಾರೆ.
ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ತಾಯಿ ಸೋನಿಯಾ ಗಾಂಧಿ ಅವರನ್ನು ಗೆಲ್ಲಿಸಿದ ಮತದಾರರಿಗೆ ಬುಧವಾರ ಕೃತಜ್ಞತೆ ಅರ್ಪಿಸಿದ ಅವರು, ನಂತರ ಪಕ್ಷದ ಸೋಲಿನ ಬಗ್ಗೆ ಮಾತನಾಡಿದರು.
"ನಾನು ಇಲ್ಲಿಗೆ ಭಾಷಣ ಮಾಡಲು ಬಂದಿಲ್ಲ. ಆದರೂ ಜನರು ನನ್ನನ್ನು ಮಾತನಾಡುವಂತೆ ಒತ್ತಾಯಿಸುತ್ತಿದ್ದಾರೆ. ನಾನು ಮಾತನಾಡಬೇಕು ಎಂದಾದರೆ ನನಗೆ ಸತ್ಯವನ್ನು ಮಾತನಾಡಲು ಬಿಡಿ. ಕಾಂಗ್ರೆಸ್ ಯಾಕೆ ಸೋಲು ಕಾಣಬೇಕಾಯಿತು ಎಂಬ ಸತ್ಯವನ್ನು ನಾನು ಬಿಚ್ಚಿಡುತ್ತೇನೆ" ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.

ಕೆಲವು ಕಾರ್ಯಕರ್ತರೇ ಕಾರಣ
"ಕಾಂಗ್ರೆಸ್ ನ ಎಲ್ಲ ಕಾರ್ಯಕರ್ತರೂ ಪಕ್ಷ ನಿಷ್ಠೆಯಿಂದ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದರೆ ಹೀಗಾಗುತ್ತಿರಲಿಲ್ಲ. ಕೆಲವರಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಿದರು, ಉಳಿದವರು ಮಾಡಲಿಲ್ಲ. ಅದೇ ನಮ್ಮ ಸೋಲಿಗೆ ಕಾರಣ. ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಗೆಲುವಿಗಾಗಿ ಪ್ರಯತ್ನವನ್ನೇ ಮಾಡದಿರುವುದೇ ಇದಕ್ಕೆ ಕಾರಣ" ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ರಾಯ್ಬರೇಲಿ ನಾಯಕರ ಬಗ್ಗೆಯೂ ಅಸಮಾಧಾನ
ರಾಯ್ಬರೇಲಿಯಲ್ಲಿ ಸೋನಿಯಾ ಗಾಂಧಿ ಅವರ ಗೆಲುವಿಗೆ ಸೋನಿಯಾ ಗಾಂಧಿ ಅವರು ಮಾತ್ರ ಕಾರಣ. ಬೇರೆ ಯಾರೂ ಅವರ ಗೆಲುವಿಗೆ ನೆರವು ನೀಡಿರಲಿಲ್ಲ ಎಂದು ರಾಯ್ಬರೇಲಿಯ ಸ್ಥಳಿಯ ನಾಯಕರ ಬಗ್ಗೆ ಪ್ರಿಯಾಂಕಾ ಗಾಂಧಿ ಅಸಮಾಧಾನ ಹೊರಹಾಕಿದರು.

ಪ್ರಿಯಾಂಕಾ ಮುಖ್ಯಮಂತ್ರಿ ಅಭ್ಯರ್ಥಿ
ಈ ನಡುವೆ, ಪ್ರಿಯಾಂಕಾ ಗಾಂಧಿ ಅವರ ನಾಯಕತ್ವದಿಂದ ಪ್ರಭಾವಿತರಾಗಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರು 2022ರ ಉತ್ತರ ಪ್ರದೇಶ ವಿಧಾನಸಬೆ ಚುನಾವಣೆಯ ಹೊತ್ತಿಗೆ ಪ್ರಿಯಾಂಕಾ ಗಾಂಧಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವಂಥ ನಾಯಕತ್ವದ ಗುಣ ಇರುವವರು ಸದ್ಯಕ್ಕೆ ಕಾಂಗ್ರೆಸ್ ನಲ್ಲಿ ಯಾರೂ ಇಲ್ಲ. ಅದೂ ಅಲ್ಲದೆ, ಲೋಕಸಭೆ ಚುನಾವಣೆಯ ಹೊತ್ತಲ್ಲಿ ಉತ್ತರ ಪ್ರದೇಶದಲ್ಲಿ ಸಾಕಷ್ಟು ಪ್ರಚಾರ ಕಾರ್ಯವನ್ನೂ ಮಾಡಿರುವ ಕಾರಣ ಪ್ರಿಯಾಂಕಾ ಗಾಂಧಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.

ಕಾಂಗ್ರೆಸ್ ಗೆದ್ದಿದ್ದು ಒಂದೇ ಒಮದು ಸ್ಥಾನ
ಉತ್ತರ ಪ್ರದೇಶದ ಎಂಬತ್ತು ಲೋಕಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಗೆದ್ದಿದ್ದು ಒಂದೇ ಒಂದು ಸ್ಥಾನವನ್ನು. ಈ ಬಾರಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೂ ಅಮೇಥಿ ಕ್ಷೇತ್ರದಲ್ಲಿ ಸೋಲುಂಡಿದ್ದರು. ಲೋಕಸಭೆ ಚುನಾವಣೆ ಘೋಷಣೆಯಾಘುತ್ತಿದಂತೆಯೇ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೂರ್ವ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿತ್ತು. ಈ ಮೂಲಕ ಅವರು ಸಕ್ರಿಯ ರಾಜಕಾರಣಕ್ಕೆ ಕಾಲಿಟ್ತಿದ್ದರಾದರೂ, ಅವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications