ವಾರಣಾಸಿಯಿಂದ ಮೋದಿ ವಿರುದ್ಧ ಪ್ರಿಯಾಂಕಾ ಸ್ಪರ್ಧೆ ಇನ್ನೂ 50:50
ಲಕ್ನೋ, ಏ.24: ಕಾಂಗ್ರೆಸ್ ಉಪಾಧ್ಯಕ್ಷೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಸ್ಪರ್ಧಿಸುವುದು 50:50 ಅಷ್ಟೇ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
2019ರ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಅವರ ವಿರುದ್ಧ ಸ್ಪರ್ಧೆ ಬಹುತೇಕ ಖಚಿತವಾಗಿತ್ತು.
ಇದೀಗ ಕಾಂಗ್ರೆಸ್ ಮುಖಂಡರ ಮಧ್ಯೆಯೇ ಈ ಕುರಿತು ಚರ್ಚೆ ನಡೆಯುತ್ತಿದ್ದು, ಪ್ರಿಯಾಂಕಾ ವಾರಣಾಸಿಯಿಂದ ಸ್ಪರ್ಧಿಸುವ ಸಾಧ್ಯತೆ ಶೇ.50ರಷ್ಟಿದೆ ಎನ್ನುವ ಮಾಹಿತಿ ಕೂಡ ಉನ್ನತ ಮೂಲಗಳಿಂದ ಲಭ್ಯವಾಗಿದೆ.

ಮೊಟ್ಟ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಿರುವ ಪ್ರಿಯಾಂಕಾ ಅವರನ್ನು ಬೇರೆ ಕ್ಷೇತ್ರದಲ್ಲಿ ನಿಲ್ಲಿಸುವ ಕುರಿತು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಲಹೆ ನೀಡಿದ್ದಾರೆ. ಆದರೆ ನನಗೆ ಸೋಲು ಅಥವಾ ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಎಂದು ಪ್ರಿಯಾಂಕಾ ಹೇಳಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಈ ಮೊದಲು ಎಸ್‌ಪಿ, ಬಿಎಸ್‌ಪಿ ವಾರಣಾಸಿಯಿಂದ ತಮ್ಮ ಅಭ್ಯರ್ಥಿಗಳನ್ನು ಹಿಂಪಡೆದಿತ್ತು. ಇದೀಗ ಸೋಮವಾರ ಏಕಾಏಕಿ ಸಮಾಜವಾದಿ ಪಕ್ಷದಿಂದ ಶಾಲಿನಿ ಯಾದವ್ ಅವರನ್ನು ಕಣಕ್ಕಿಳಿಸಿದೆ. ಇದೆಲ್ಲವೂ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಒಂದೆಡೆ ಇದು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾಗೆ ಶಾಕ್ ಎಂದೇ ಹೇಳಲಾಗುತ್ತಿದ್ದರೂ ಇನ್ನೊಂದೆಡೆ ಪ್ರಿಯಾಂಕಾ ವಾರಣಾಸಿಯಿಂದ ಸ್ಪರ್ಧಿಸುತ್ತಿಲ್ಲ ಹೀಗಾಗಿ ಸಮಾಜವಾದಿ ಪಕ್ಷ ತನ್ನ ಅಭ್ಯರ್ಥಿಯನ್ನು ಮತ್ತೆ ಕಣಕ್ಕಿಳಿಸಿದೆ ಎನ್ನುವ ಮಾತುಗಳೂ ಕೇಳಿಬರುತ್ತಿದೆ.












Click it and Unblock the Notifications