Breaking: ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ತಾಯಿಗೆ ಕಾಂಗ್ರೆಸ್ ಟಿಕೆಟ್

ಲಕ್ನೋ, ಜನವರಿ 13: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ತಾಯಿಗೆ ಕಾಂಗ್ರೆಸ್ ಟಿಕೆಟ್ ನೀಡುವುದಕ್ಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಿರ್ಧರಿಸಿದ್ದಾರೆ. ಇಂದು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಉನ್ನಾವೋ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಅವರಿಗೂ ಕೂಡ ಟಿಕೆಟ್ ಘೋಷಿಸಲಾಗಿದೆ.

"ನೀವು ಕಿರುಕುಳ ಮತ್ತು ಚಿತ್ರಹಿಂಸೆಗೆ ಬಲಿಯಾಗಿದ್ದರೆ, ಕಾಂಗ್ರೆಸ್ ನಿಮ್ಮನ್ನು ಬೆಂಬಲಿಸುತ್ತದೆ ಎಂಬ ಹೊಸ ಸಂದೇಶವನ್ನು ನಮ್ಮ ಪಟ್ಟಿ ರವಾನಿಸುತ್ತದೆ," ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶ ಚುನಾವಣೆಯ ಉಸ್ತುವಾರಿ ವಹಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

Priyanka Gandhi gives a ticket to mother of Unnao rape victim

ಉನ್ನಾವೋ ಸಂತ್ರಸ್ತೆ ತಾಯಿಗೆ ಕಾಂಗ್ರೆಸ್ ಟಿಕೆಟ್:
ಉತ್ತರ ಪ್ರದೇಶದ ಉನ್ನಾವೋದಲ್ಲಿ 2017ರಲ್ಲಿ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗಾರ್​​ಗೆ ದೆಹಲಿ ಹೈಕೋರ್ಟ್​ ಜೀವಾವಧಿ ಶಿಕ್ಷೆ ಘೋಷಿಸಿತ್ತು. ಅದೇ ಪ್ರಕರಣದ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವುದಕ್ಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಿರ್ಧರಿಸಿದ್ದಾರೆ ಎಂದು ಗೊತ್ತಾಗಿದೆ.

ಏನಿದು ಉನ್ನಾವೋ ಅತ್ಯಾಚಾರ ಪ್ರಕರಣ?:

ಕಳೆದ 2017ರ ಜೂನ್ 4ರಂದು ಉತ್ತರ ಪ್ರದೇಶದ ಉನ್ನಾವೋದಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ಜೊತೆ ಇನ್ನೂ ನಾಲ್ವರ ಹೆಸರು ಕೇಳಿ ಬಂದಿತ್ತು. ಆ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದರು. ತದನಂತರ ಕಳೆದ ವರ್ಷ ಯುವತಿ ಕೊಲೆಗೆ ಯತ್ನ ನಡೆದಿದ್ದು, ವಕೀಲರ ಜೊತೆ ಕೋರ್ಟ್‌ಗೆ ಹೋಗುತ್ತಿದ್ದ ಸಂತ್ರಸ್ತೆ ಕಾರ್​ಗೆ ಅಪಘಾತ ಮಾಡಿಸಲಾಗಿತ್ತು. ಈ ಅಪಘಾತದಲ್ಲಿ ವಕೀಲ ಮತ್ತು ಆಕೆಯ ಚಿಕ್ಕಪ್ಪ ಮೃತಪಟ್ಟಿದ್ದರು.

Priyanka Gandhi gives a ticket to mother of Unnao rape victim

2018ರಿಂದಲೂ ಸಿಬಿಐ ಈ ಪ್ರಕರಣದ ತನಿಖೆ ನಡೆಸಿದ್ದರೂ, ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ವಿರುದ್ಧ ನಡೆದ ವ್ಯವಸ್ಥಿತ ಸಂಚಿನ ಬೆನ್ನಲ್ಲೇ ಸುಪ್ರೀಂಕೋರ್ಟ್ ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿತು. ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಸದಸ್ಯರನ್ನು ವಾಯುಮಾರ್ಗದ ಮೂಲಕ ಉತ್ತರ ಪ್ರದೇಶದಿಂದ ಹೊರಗೆ ಕರೆ ತರಬೇಕೆಂದು ಸುಪ್ರೀಂ ಕೋರ್ಟ್ ಹೇಳಿತು. ನಂತರ ಈ ಪ್ರಕರಣದ ತನಿಖೆ ನಡೆಸಿದ್ದ ದೆಹಲಿ ಹೈಕೋರ್ಟ್​ ಕುಲದೀಪ್ ಸಿಂಗ್ ಸೆಂಗಾರ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತು. ಹಾಗೇ, ಸಂತ್ರಸ್ತ ಯುವತಿಯ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ನೀಡಲು ಸೂಚನೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+