ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಬರಿ ಪ್ರಚಾರ ಅಷ್ಟೆ': ಮೋದಿ ಯೋಜನೆ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

|
Google Oneindia Kannada News

ಲಕ್ನೌ, ಜೂನ್ 27: ಶುಕ್ರವಾರ ಪ್ರಧಾನಿ ಮೋದಿ ಉದ್ಘಾಟಿಸಿದ ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಗರ್ ಅಭಿಯಾನ್ 'ಬರಿ ಪ್ರಚಾರಕ್ಕೆ ಸೀಮಿತ ಅಷ್ಟೇ' ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.

Recommended Video

ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು. | Andhra Pradesh | Oneindia Kannada

'ವಲಸೆ ಕಾರ್ಮಿಕರಿಗೆ ಉದ್ಯೋಗ ಒದಗಿಸುತ್ತದೆ ಎಂದು ಶುಕ್ರವಾರ ಉದ್ಯೋಗ ಯೋಜನೆ ಆರಂಭಿಸಲಾಗಿದೆ. ಆದರೆ, ಮೊದಲು ವಲಸೆ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳಿಗೆ ಉತ್ತರ ನೀಡಬೇಕಿದೆ' ಎಂದು ಪ್ರಿಯಾಂಕಾ ಆಗ್ರಹಿಸಿದ್ದಾರೆ.

1.25 ಕೋಟಿ ಉದ್ಯೋಗ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ1.25 ಕೋಟಿ ಉದ್ಯೋಗ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

''ಬುಂದೇಲ್‌ಖಂಡ್‌ನಲ್ಲಿ ವಲಸೆ ಬಂದ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ನಮ್ಮ ಮುಂದೆ ಇವೆ. ಕಾನ್ಪುರದಲ್ಲಿ ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆಯ ದುರಂತ ಘಟನೆಗಳು ಬೆಳಕಿಗೆ ಬಂದಿವೆ. ಇಂತಹ ಪರಿಸ್ಥಿತಿಯಲ್ಲಿ ಯುಪಿ ಸರ್ಕಾರ ಏನು ಮರೆಮಾಡಲು ಪ್ರಯತ್ನಿಸುತ್ತಿದೆ? ಪ್ರಚಾರದಿಂದ ಉದ್ಯೋಗ ಸಾಧ್ಯನಾ? ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

Priyanka Gandhi hits out at BJP govt in UP over employment generation programme

ಅಂದ್ಹಾಗೆ, ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಗರ್ ಅಭಿಯಾನ್ ಯೋಜನೆಯೂ ಜೂನ್ 20 ರಂದು ಪ್ರಧಾನಿ ಪ್ರಾರಂಭಿಸಿದ 'ಗರಿಬ್ ಕಲ್ಯಾಣ್ ರೋಜರ್ ಅಭಿಯಾನ'ದ ಭಾಗವಾಗಿ ಕಾರ್ಯನಿರ್ವಹಿಸಲಿದೆ. ದೇಶದ ಆರು ರಾಜ್ಯಗಳ 116 ಜಿಲ್ಲೆಗಳಿಗೆ ಈ ಯೋಜನೆ ವಿಸ್ತರಿಸಲಾಗಿದೆ.

ಲಾಕ್‌ಡೌನ್‌ ಸಮಯದಲ್ಲಿ ಸುಮಾರು 30 ಲಕ್ಷ ಕಾರ್ಮಿಕರು ಉತ್ತರ ಪ್ರದೇಶಕ್ಕೆ ಹಿಂತಿರುಗಿದ್ದಾರೆ ಎಂಬ ಮಾಹಿತಿ ಇದೆ. ಆತ್ಮ ನಿರ್ಭರ್ ಉತ್ತರ ಪ್ರದೇಶ ರೋಜ್ಗರ್ ಅಭಿಯಾನ್ ಅಡಿಯಲ್ಲಿ ಉತ್ತರ ಪ್ರದೇಶದ 31 ಜಿಲ್ಲೆಗಳು ಒಳಗೊಂಡಿದ್ದು, ಎಲ್ಲರಿಗೂ ಕೆಲಸ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ವಿವರಿಸಿದ್ದಾರೆ.

English summary
Congress leader Priyanka Gandhi hits out at BJP govt in UP over employment generation programme launched by PM Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X