ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಕೀಯ ಇನ್ನಿಂಗ್ಸ್ ಆರಂಭಕ್ಕೂ ಮುನ್ನ ಕುಂಭಮೇಳಕ್ಕೆ ಪ್ರಿಯಾಂಕಾ ಗಾಂಧಿ

|
Google Oneindia Kannada News

ಲಕ್ನೋ, ಜನವರಿ 27: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಮೊಮ್ಮಗಳು ಪ್ರಿಯಾಂಕಾ ಗಾಂಧಿ ಅವರು ರಾಜಕೀಯ ಇನ್ನಿಂಗ್ಸ್ ಆರಂಭಕ್ಕೂ ಮುನ್ನ ಪ್ರಯಾಗ್ ರಾಜ್ ನಲ್ಲಿ ನಡೆದಿರುವ ಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ 04ರಂದು ಸೋದರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆಗೂಡಿ, ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಳ್ಳುವ ಕಾರ್ಯಕ್ರಮ ನಿಗದಿಯಾಗಿದೆ.

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರಪ್ರದೇಶದಲ್ಲಿ ರಾಜಕೀಯವಾಗಿ ಪಕ್ಷವನ್ನು ಉಳಿಸಿ, ಬೆಳಸಲು ಮೃದು ಹಿಂದುತ್ವ ಧೋರಣೆ ಅನುಸರಿಸಬೇಕಿದೆ ಎಂದು ಹಿರಿಯ ಕಾಂಗ್ರೆಸ್ಸಿಗರು ಸಲಹೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿರುವ ಪ್ರಿಯಾಂಕಾ ಅವರು ಹಿಂದುಗಳ ಪವಿತ್ರ ಮೇಳ ಕುಂಭಮೇಳಕ್ಕೆ ಭೇಟಿ ನೀಡುತ್ತಿದ್ದಾರೆ.

Priyanka Gandhi likely to begin political innings with holy dip at Kumbh on Feb 4

ಪ್ರಯಾಗರಾಜ್​ನಲ್ಲಿ ನಡೆದಿರುವ ಕುಂಭಮೇಳಕ್ಕೆ ಭೇಟಿ ನೀಡಿ, ಪುಣ್ಯಸ್ನಾನ ಮಾಡಿದ ಬಳಿಕ ಪೂರ್ವ ಉತ್ತರಪ್ರದೇಶದ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ. ಫೆಬ್ರವರಿ 04ರಂದು ಪುಣ್ಯಸ್ನಾನಕ್ಕೆ ಅವಕಾಶ ಸಿಗದಿದ್ದರೆ, ವಸಂತ ಪಂಚಮಿ (ಫೆ.10)ಯಂದು ಪುಣ್ಯ ಸ್ನಾನ ಮಾಡಲು ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಚಿಂತನೆ ನಡೆಸಿದ್ದಾರೆ.2001ರಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯಸ್ನಾನ ಮಾಡಿದ್ದರು.

English summary
Priyanka Gandhi, who has been appointed Congress General Secretary for Uttar Pradesh East, is expected to begin her formal political career with a holy dip in the Ganga at the Kumbh Mela on February 4.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X