ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೊಲೀಸ್‌ ಕಸ್ಟಡಿ ಸಾವು ಪ್ರಕರಣ: ಆಗ್ರಾಕ್ಕೆ ತೆರಳುತ್ತಿದ್ದ ಪ್ರಿಯಾಂಕಾಗೆ ತಡೆ

|
Google Oneindia Kannada News

ಲಕ್ನೋ, ಅಕ್ಟೋಬರ್‌ 20: ಉತ್ತರ ಪ್ರದೇಶದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾದ ವ್ಯಕ್ತಿಯ ಕುಟುಂಬವನ್ನು ಭೇಟಿಯಾಗಲು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಲಕ್ನೋದಿಂದ ಆಗ್ರಾಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ತಡೆಯಲಾಗಿದೆ ಎಂದು ವರದಿಯಾಗಿದೆ.

25 ಲಕ್ಷ ಕಳ್ಳತನ ಮಾಡಿದ ಆರೋಪದಲ್ಲಿ ಅರುಣ್‌ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದರು. ಆದರೆ ಆ ವ್ಯಕ್ತಿಯು ಪೊಲೀಸ್‌ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾದ ವ್ಯಕ್ತಿಯ ಕುಟುಂಬವನ್ನು ಭೇಟಿಯಾಗಲು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಾಕ್ಕೆ ತೆರಳುತ್ತಿದ್ದರು. ಆದರೆ ಈ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ತಡೆಯಲಾಗಿದೆ ಎಂದು ವರದಿಯು ಹೇಳಿದೆ.

ಲಖಿಂಪುರ ಹಿಂಸಾಚಾರ: ಮೃತರ ಕುಟುಂಬವನ್ನು ಭೇಟಿಯಾದ ರಾಹು‌ಲ್‌, ಪ್ರಿಯಾಂಕಲಖಿಂಪುರ ಹಿಂಸಾಚಾರ: ಮೃತರ ಕುಟುಂಬವನ್ನು ಭೇಟಿಯಾದ ರಾಹು‌ಲ್‌, ಪ್ರಿಯಾಂಕ

ಉತ್ತರ ಪ್ರದೇಶದಲ್ಲಿ ಈ ಹಿಂದೆ ರೈತರ ಮಾರಣ ಹೋಮ ನಡೆದ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಲಖಿಂಪುರ ಖೇರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಸರ್ಕಾರವು ತಡೆದು, ಪ್ರಿಯಾಂಕರನ್ನು ಬಂಧನ ಮಾಡಿತ್ತು. ಈಗ ಪೊಲೀಸ್‌ ಕಸ್ಟಡಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಸ್ಥರನ್ನು ಭೇಟಿಯಾಗಲು ಕಾಂಗ್ರೆಸ್‌ ನಾಯಕಿ ತೆರಳಿದ ಸಂದರ್ಭದಲ್ಲಿ ತಡೆಯಲಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ.

Priyanka Gandhi Stopped From Meeting Family Of UP Man Who Died In Custody

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್‌ ಅಧಿಕಾರಿಗಳು, "ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಳಿ ಯಾವುದೇ ಅನುಮತಿ ಪತ್ರ ಇಲ್ಲದ ಕಾರಣದಿಂದಾಗಿ ನಾವು ತಡೆದಿದ್ದೇವೆ," ಎಂದು ತಿಳಿಸಿದ್ದಾರೆ.

ಈ ಕುರಿತಾಗಿ ಟ್ವೀಟ್‌ ಮಾಡಿರುವ ಪ್ರಿಯಾಂಕಾ ವಾದ್ರಾ, "ಪೊಲೀಸ್‌ ಕಸ್ಡಡಿಯಲ್ಲಿ ಅರುಣ್‌ ವಾಲ್ಮೀಕಿಯ ಸಾವು ಸಂಭವಿಸಿದೆ. ಅರುಣ್‌ನ ಕುಟುಂಬ ನ್ಯಾಯವನ್ನು ಬಯಸಿದೆ. ನಾನು ಆ ಕುಟುಂಬವನ್ನು ಭೇಟಿಯಾಗಲು ತೆರಳುತ್ತಿದ್ದೆ. ಆದರೆ ಉತ್ತರ ಪ್ರದೇಶ ಸರ್ಕಾರಕ್ಕೆ ಇದರಲ್ಲಿ ಯಾಕೆ ಭಯ?. ನನ್ನನ್ನು ಯಾಕೆ ತಡೆಯಲಾಗಿದೆ," ಎಂದು ಪ್ರಶ್ನೆ ಮಾಡಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.40ರಷ್ಟು ಟಿಕೆಟ್!ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.40ರಷ್ಟು ಟಿಕೆಟ್!

"ಇಂದು ವಾಲ್ಮೀಕಿ ಜಯಂತಿ ಆಗಿದೆ. ಪ್ರಧಾನ ಮಂತ್ರಿ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಾರೆ. ಆದರೆ ಈಗ ಆ ತತ್ವಕ್ಕೆ ದಾಳಿ ಮಾಡಿದ್ದಾರೆ,"

ಈ ಹಿಂದೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಕಾರು ರೈತರ ಮೇಲೆ ಹರಿದು ಹೋಗಿ ಸಾವು ಸಂಭವಿಸಿದೆ ಎಂದು ರೈತರು ಆರೋಪ ಮಾಡಿದ್ದಾರೆ. ಹಾಗೆಯೇ ಈ ಕಾರಿನಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾರ ಪುತ್ರ ಆಶಿಶ್‌ ಮಿಶ್ರಾ ಕೂಡಾ ಇದ್ದರು ಎಂದು ರೈತರು ದೂರಿದ್ದಾರೆ.

ಈ ಮೃತ ರೈತರ ಕುಟುಂಬಸ್ಥರನ್ನು ಭೇಟಿಯಾಗಲು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಲಖಿಂಪುರ ಖೇರಿಗೆ ತೆರಳಿದ್ದ ಸಂದರ್ಭದಲ್ಲಿ ಪೊಲೀಸರು ಪ್ರಿಯಾಂಕ ವಾದ್ರಾರನ್ನು ತಡೆದು ಬಂಧನ ಮಾಡಿದ್ದರು. ಈ ವಿಚಾರದಲ್ಲಿ ಕಾಂಗ್ರೆಸ್‌ ಪ್ರತಿಭಟನೆಗಳನ್ನು ನಡೆಸಿದ್ದವು.

ಅಕ್ಟೋಬರ್‌ 4 ರಂದು ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಬುಧವಾರ ಸೀತಾಪುರ ಗೆಸ್ಟ್‌ ಹೌಸ್‌ನಿಂದ ಬಿಡುಗಡೆ ಮಾಡಲಾಗಿತ್ತು. ಆ ಬಳಿಕ ಕಾಂಗ್ರೆಸ್‌ ನಾಯಕರುಗಳಾದ ಪ್ರಿಯಾಂಕ ಹಾಗೂ ರಾಹುಲ್‌ ಮೃತ ರೈತರ ಕುಟುಂಬಸ್ಥರನ್ನು ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಈಗ, ಮೃತ ರೈತರ ಕುಟುಂಬಸ್ಥರನ್ನು ಭೇಟಿಯಾಗಲು ಅವಕಾಶ ನೀಡದ ಉತ್ತರ ಪ್ರದೇಶ ಸರ್ಕಾರ ಈಗ ಪೊಲೀಸ್‌ ಕಸ್ಟಡಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಸ್ಥರನ್ನು ಭೇಟಿಯಾಗಲು ಕೂಡಾ ಬಿಡುತ್ತಿಲ್ಲ ಎಂದು ದೂರಿದೆ.

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಡುವೆ ಉತ್ತರ ಪ್ರದೇಶದಲ್ಲಿ ಹಲವಾರು ರಾಜಕೀಯ ಬೆಳವಣಿಗೆಗಳು ಸಂಭವಿಸುತ್ತಿದೆ. ಕಾಂಗ್ರೆಸ್‌, ಬಿಜೆಪಿ, ಬಿಎಸ್‌ಪಿ, ಎಸ್‌ಪಿ ಸೇರಿದಂತೆ ಎಲ್ಲಾ ಪಕ್ಷಗಳು ಉತ್ತರ ಪ್ರದೇಶದಲ್ಲಿ ಮುಂದಿನ ಚುನಾವಣೆಗಾಗಿ ಈಗಲೇ ತಯಾರಿಯನ್ನು ಮಾಡಿಕೊಳ್ಳುತ್ತಿದೆ.

ಕಾಂಗ್ರೆಸ್‌ ಉತ್ತರ ಪ್ರದೇಶ ಸರ್ಕಾರದ ಕೊರೊನಾ ನಿರ್ವಹಣೆಯಲ್ಲಿನ ವೈಫಲ್ಯ, ರೈತರ ಮೇಲಿನ ದೌರ್ಜನ್ಯ, ಕಸ್ಟಡಿ ಸಾವು ಪ್ರಕರಣಗಳು, ದಲಿತರ ಮೇಲೆ ದೌರ್ಜನ್ಯ ಮೊದಲಾದ ಘಟನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಬಿಜೆಪಿ ವಿರು‌ದ್ಧ ಅಲೆಯನ್ನು ಎಬ್ಬಿಸುವ ಪ್ರಯತ್ನವನ್ನು ಮಾಡುತ್ತಿದೆ. ಈ ನಡುವೆ ಬಿಜೆಪಿ ಮಾತ್ರ ಇತ್ತೀಚೆಗೆ ನಡೆದ ಸಚಿವ ಸಂಪುಟ ಪುನರ್‌ ರಚನೆಯಲ್ಲಿ ಎಲ್ಲಾ ಸಮುದಾಯದ ಜನರಿಗೆ ಸಚಿವ ಸ್ಥಾನವನ್ನು ನೀಡುವ ಮೂಲಕ ತನ್ನ ಅಧಿಕಾರ ಉಳಿಸಿಕೊಳ್ಳುವ ಚಾಣಾಕ್ಷ್ಯ ನಡೆಯನ್ನು ಮುಂದಿಟ್ಟಿದೆ.

(ಒನ್‌ಇಂಡಿಯಾ ಸುದ್ದಿ)

English summary
Congress Leader Priyanka Gandhi Stopped From Meeting Family Of UP Man Who Died In Custody.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X