• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರಿಯಾಂಕಾ ಗಾಂಧಿಗೆ ಉತ್ತರಪ್ರದೇಶ ಉಸ್ತುವಾರಿ?

|

ಲಕ್ನೋ, ಸೆಪ್ಟೆಂಬರ್ 4: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ ಆರಂಭಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಉತ್ತರ ಪ್ರದೇಶ ರಾಜ್ಯದ ಸಂಪೂರ್ಣ ಉಸ್ತುವಾರಿ ವಹಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಪ್ರಸ್ತುತ ಪ್ರಯಾಂಕಾ ಅವರು ಉತ್ತರ ಪ್ರದೇಶ (ಪೂರ್ವ) ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಪ್ರಿಯಾಂಕಾ ಅವರ ಹೊಸ ನೇಮಕದ ಬಗ್ಗೆ ಶೀಘ್ರದಲ್ಲೇ ಪಕ್ಷ ಅಧಿಕೃತ ಘೋಷಣೆ ಮಾಡಲಿದೆ.

ಪ್ರಧಾನಿ ಮೋದಿಗೆ ಏನಿದು ಪ್ರಿಯಾಂಕ ಗಾಂಧಿಯ ಗಂಭೀರ ಪ್ರಶ್ನೆ?

ಪಕ್ಷವನ್ನು ಬೇರುಮಟ್ಟದಿಂದ ಗಟ್ಟಿಗೊಳಿಸಲು ಪ್ರಿಯಾಂಕಾ ಅವರು ಈಗಿನಿಂದಲೇ ಜಿಲ್ಲಾ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ.ಪಕ್ಷದ ಹಿರಿಯ ನಾಯಕರೊಬ್ಬರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳೊಂದಿಗೆ ಕಾಂಗ್ರೆಸ್ ಹಿರಿಯ ನಾಯಕರನ್ನು ಪ್ರಿಯಾಂಕಾ ಭೇಟಿಯಾಗಿದ್ದಾರೆ.

ಅಲ್ಲದೇ ಜಿಲ್ಲಾ ಮಟ್ಟದ ಕಾಂಗ್ರೆಸ್ ನಾಯಕರನ್ನೂ ಬೇಟಿಯಾಗಿದ್ದು, ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

2022ರಂದು ಉತ್ತರಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಪಕ್ಷವನ್ನು ಬೇರುಮಟ್ಟದಿಂದ ಗಟ್ಟಿಗೊಳಿಸಲು ಪ್ರಿಯಾಂಕಾ ಗಾಂಧಿ ಅವರು ಈಗಿನಿಂದಲೇ ಜಿಲ್ಲಾ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ.

English summary
Priyanka Will Soon Take Over Full Responsibility Of The Party In Uttar Pradesh, The Congress is set to form a new regional committee for Uttar Pradesh under the leadership of Priyanka Gandhi, by giving her charge of the entire state instead of just eastern UP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X