ಪ್ರಧಾನಿ ಮೋದಿ, ಯೋಗಿ ಅವರನ್ನು ಹಾಡಿ ಹೊಗಳಿದ ಶಾಲಾ ಮಕ್ಕಳ ವಿಡಿಯೋ ವೈರಲ್: ತನಿಖೆ
ಸಿದ್ಧಾರ್ಥನಗರ (ಯುಪಿ) ಜನವರಿ 27: ಗಣರಾಜ್ಯೋತ್ಸವದಂದು ಶಾಲಾ ಮಕ್ಕಳು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಾಂಶುಪಾಲರು ಮತ್ತು ಶಿಕ್ಷಕರು ಹೊಗಳಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಜಿಲ್ಲಾ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮಕ್ಕಳು ಪ್ರಧಾನಿ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿದೆ. ಸಿದ್ಧಾರ್ಥನಗರ ಜಿಲ್ಲೆಯ ಸೊಹ್ರತ್‌ಗಢ್ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕ್ಲಿಪ್‌ನಲ್ಲಿ ರಾಷ್ಟ್ರಗೀತೆಯನ್ನು ಹಾಡಿದ ನಂತರ ವಿದ್ಯಾರ್ಥಿಗಳು ಶಿಕ್ಷಕರ ನಿರ್ದೇಶನದ ಮೇರೆಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರ ಹೆಸರಿನಲ್ಲಿ ಘೋಷಣೆಗಳನ್ನು ಕೂಗಿತ್ತಾರೆ. ಆ ಮೂಲಕ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಪ್ರಸ್ತುತ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಿದ್ಧಾರ್ಥನಗರದ ಜಿಲ್ಲಾಧಿಕಾರಿ ದೀಪಕ್ ಮೀನಾ ಅವರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿದುಕೊಂಡರು. "ನಾವು ವಿಷಯದ ಅರಿವನ್ನು ತೆಗೆದುಕೊಂಡಿದ್ದೇವೆ ಮತ್ತು ಅದರ ಬಗ್ಗೆ ತನಿಖೆ ನಡೆಸಲು BSA (ಮೂಲ ಶಿಕ್ಷಾ ಅಧಿಕಾರಿ) ಗೆ ನಿರ್ದೇಶಿಸಿದ್ದೇವೆ. ಯಾರೇ ತಪ್ಪಿತಸ್ಥರೆಂದು ಕಂಡುಬಂದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಅವರು ಹೇಳಿದರು.

ವಿಡಿಯೋವನ್ನು ಹಂಚಿಕೊಂಡ ಅಖಿಲೇಶ್ ಯಾದವ್ ಅವರು ಸರ್ಕಾರ ಘೋಷಿಸಿದಂತೆ ಕೋವಿಡ್ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸುವ ಎಲ್ಲಾ ಪಕ್ಷಗಳ ವಿರುದ್ಧ ಉನ್ನತ ಚುನಾವಣಾ ಸಂಸ್ಥೆ ಏಕರೂಪವಾಗಿ ಕಾರ್ಯನಿರ್ವಹಿಸಬೇಕೆಂದು ಒತ್ತಾಯಿಸಿದ್ದರು. ಕೋವಿಡ್ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕೆಲ ದಿನಗಳ ಹಿಂದೆ ಸಮಾಜವಾದಿ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ಆದರೆ ಅಮ್ರೋಹಾಲ್ಲಿ ಬಿಜೆಪಿ ಶಾಸಕ ಮಹೇಂದ್ರ ಖರಗ್ವಂಶಿ ಚುನಾವಣಾ ಮೆರವಣಿಗೆ ನಡೆಸಿ, ನೀತಿ ಸಂಹಿತೆ ಮತ್ತು ಕೊರೋನಾ ಮಾರ್ಗಸೂಚಿಗಳನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ಅಖಿಲೇಶ್ ಟ್ವೀಟ್ ಮಾಡಿದ್ದರು.
ಅಖಿಲೇಶ್ ಯಾದವ್ ಅವರು ಚುನಾವಣಾ ಆಯೋಗವು ಪಕ್ಷಪಾತ ಮಾಡುತ್ತಿದೆ ಎಂದು ಆರೋಪಿಸಿ ಈ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಕೊರೊನಾ ಹರಡುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಕಚೇರಿ ಮತ್ತು ಕಾರ್ಯಕ್ರಮಗಳ ಮೇಲೆ ಸಂಪೂರ್ಣ ನಿಷೇಧವಿದೆ. ಆದರೆ ಬಿಜೆಪಿ ವಿಚಾರದಲ್ಲಿ ಚುನಾವಣಾ ಆಯೋಗ ಮೌನವಾಗಿದೆ ಎಂದು ಅಮ್ರೋಹಾದ ಬಿಜೆಪಿ ಅಭ್ಯರ್ಥಿ ವಿರುದ್ಧ ಲೇವಡಿ ಮಾಡಿದ್ದರು. ಬಳಿಕ ಚುನಾವಣಾ ಆಯೋಗ ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆಯನ್ನು ನೀಡಿತ್ತು.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ಮತ್ತು ಮಾರ್ಚ್ 7 ರ ನಡುವೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 58 ಸ್ಥಾನಗಳಿಗೆ ಮತದಾನ ನಡೆದರೆ, 55 ಸ್ಥಾನಗಳು ಮತ್ತು 59 ಸ್ಥಾನಗಳು ಕ್ರಮವಾಗಿ ಎರಡನೇ ಹಂತ ಮತ್ತು ಮೂರನೇ ಹಂತದಲ್ಲಿ ಆಗಲಿವೆ. ಮಾರ್ಚ್ 10 ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ.












Click it and Unblock the Notifications