ಮೆಡಿಕಲ್ ಕಾಲೇಜ್‌ನಲ್ಲಿ Ragging: ತಲೆಬೋಳಿಸಿಕೊಂಡು ಸೆಲ್ಯೂಟ್ ಹೊಡೆದ ವಿದ್ಯಾರ್ಥಿಗಳು
ಲಕ್ನೋ, ಆಗಸ್ಟ್ 22: ಕಾಲೇಜುಗಳಲ್ಲಿ ರಾಗಿಂಗ್‌ನಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಪ್ರಯತ್ನಗಳು ಸಫಲವಾಗುತ್ತಿಲ್ಲ. ದೇಶದ ವಿವಿಧ ಕಾಲೇಜುಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ಉತ್ತರ ಪ್ರದೇಶದಲ್ಲಿ ಈ ರೀತಿಯ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ.
ವೈದ್ಯಕೀಯ ಕಾಲೇಜಿಗೆ ದಾಖಲಾಗಿರುವ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಗಳು ರಾಗ್ ಮಾಡಿರುವ ಘಟನೆ ಮಂಗಳವಾರ ನಡೆದಿದೆ.
ಮೊದಲ ವರ್ಷಕ್ಕೆ ದಾಖಲಾಗಿರುವ ಸುಮಾರು 150 ವಿದ್ಯಾರ್ಥಿಗಳು ತಲೆಬೋಳಿಸಿಕೊಂಡು ಬರುವಂತೆ ಹಿರಿಯ ವಿದ್ಯಾರ್ಥಿಗಳು ಬೆದರಿಸಿದ್ದಾರೆ. ಸಫಾಯ್ ಗ್ರಾಮದಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ಕಾಲೇಜಿನಲ್ಲಿ ಈ ಹೀನ ಘಟನೆ ನಡೆದಿದ್ದು, ತಲೆಬೋಳಿಸಿಕೊಂಡು ಕಾಲೇಜಿಗೆ ಸಾಲಾಗಿ ಬರುತ್ತಿರುವ ವಿದ್ಯಾರ್ಥಿಗಳ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ತಲೆ ನುಣ್ಣನೆ ಬೋಳಿಸಿಕೊಂಡ ವಿದ್ಯಾರ್ಥಿಗಳ ಗುಂಪೊಂದು ಬಿಳಿ ಕೋಟ್ ಧರಿಸಿ ನಡೆದುಕೊಂಡು ಹೋಗುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ. ಮತ್ತೊಂದು ವಿಡಿಯೋ ಕೂಡ ಹರಿದಾಡುತ್ತಿದ್ದು, ಇದರಲ್ಲಿ ಜಾಗಿಂಗ್ ಮಾಡುತ್ತಿರುವ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಗುಂಪಿಗೆ ಸೆಲ್ಯೂಟ್ ಮಾಡುತ್ತಿರುವುದು ಕಾಣಿಸುತ್ತದೆ.
ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಮೂರನೇ ವಿಡಿಯೋದಲ್ಲಿ ಸೆಕ್ಯುರಿಟಿ ಗಾರ್ಡ್ ಒಬ್ಬ ಈ ವಿದ್ಯಾರ್ಥಿಗಳ ಬಳಿ ನಿಂತಿರುವುದು ಕಾಣಿಸುತ್ತದೆ. ಆದರೆ, ರಾಗಿಂಗ್ ತಡೆಯಲು ಆತ ಯಾವುದೇ ಪ್ರಯತ್ನ ನಡೆಸುವುದು ಕಂಡುಬರುವುದಿಲ್ಲ.
'ವಿಶ್ವವಿದ್ಯಾಲಯದಲ್ಲಿ ರಾಗಿಂಗ್ ನಡೆಯದಂತೆ ನೋಡಿಕೊಳ್ಳಲು ವಿಶೇಷ ದಳವನ್ನು ಸಂಸ್ಥೆ ನಿರ್ವಹಿಸುತ್ತಿದೆ. ಇಂತಹ ಘಟನೆಗಳಲ್ಲಿ ಈ ಹಿಂದೆ ಕೆಲವು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ' ಎಂದು ಉಪ ಕುಲಪತಿ ಡಾ. ರಾಜಕುಮಾರ್ ಹೇಳಿದ್ದಾರೆ.
ಸಫಾಯಿ ಗ್ರಾಮವು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ಅವರ ತವರೂರಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications