ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೆಡಿಕಲ್ ಕಾಲೇಜ್‌ನಲ್ಲಿ Ragging: ತಲೆಬೋಳಿಸಿಕೊಂಡು ಸೆಲ್ಯೂಟ್ ಹೊಡೆದ ವಿದ್ಯಾರ್ಥಿಗಳು

|
Google Oneindia Kannada News

ಲಕ್ನೋ, ಆಗಸ್ಟ್ 22: ಕಾಲೇಜುಗಳಲ್ಲಿ ರಾಗಿಂಗ್‌ನಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಪ್ರಯತ್ನಗಳು ಸಫಲವಾಗುತ್ತಿಲ್ಲ. ದೇಶದ ವಿವಿಧ ಕಾಲೇಜುಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ಉತ್ತರ ಪ್ರದೇಶದಲ್ಲಿ ಈ ರೀತಿಯ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ.

ವೈದ್ಯಕೀಯ ಕಾಲೇಜಿಗೆ ದಾಖಲಾಗಿರುವ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಗಳು ರಾಗ್ ಮಾಡಿರುವ ಘಟನೆ ಮಂಗಳವಾರ ನಡೆದಿದೆ.

ಜಾತಿ ನಿಂದನೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವೈದ್ಯೆಜಾತಿ ನಿಂದನೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವೈದ್ಯೆ

ಮೊದಲ ವರ್ಷಕ್ಕೆ ದಾಖಲಾಗಿರುವ ಸುಮಾರು 150 ವಿದ್ಯಾರ್ಥಿಗಳು ತಲೆಬೋಳಿಸಿಕೊಂಡು ಬರುವಂತೆ ಹಿರಿಯ ವಿದ್ಯಾರ್ಥಿಗಳು ಬೆದರಿಸಿದ್ದಾರೆ. ಸಫಾಯ್ ಗ್ರಾಮದಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ಕಾಲೇಜಿನಲ್ಲಿ ಈ ಹೀನ ಘಟನೆ ನಡೆದಿದ್ದು, ತಲೆಬೋಳಿಸಿಕೊಂಡು ಕಾಲೇಜಿಗೆ ಸಾಲಾಗಿ ಬರುತ್ತಿರುವ ವಿದ್ಯಾರ್ಥಿಗಳ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

Ragging In Uttar Pradesh Medical College Students Shave Head Salute Seniors

ತಲೆ ನುಣ್ಣನೆ ಬೋಳಿಸಿಕೊಂಡ ವಿದ್ಯಾರ್ಥಿಗಳ ಗುಂಪೊಂದು ಬಿಳಿ ಕೋಟ್ ಧರಿಸಿ ನಡೆದುಕೊಂಡು ಹೋಗುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ. ಮತ್ತೊಂದು ವಿಡಿಯೋ ಕೂಡ ಹರಿದಾಡುತ್ತಿದ್ದು, ಇದರಲ್ಲಿ ಜಾಗಿಂಗ್ ಮಾಡುತ್ತಿರುವ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಗುಂಪಿಗೆ ಸೆಲ್ಯೂಟ್ ಮಾಡುತ್ತಿರುವುದು ಕಾಣಿಸುತ್ತದೆ.

ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಮೂರನೇ ವಿಡಿಯೋದಲ್ಲಿ ಸೆಕ್ಯುರಿಟಿ ಗಾರ್ಡ್ ಒಬ್ಬ ಈ ವಿದ್ಯಾರ್ಥಿಗಳ ಬಳಿ ನಿಂತಿರುವುದು ಕಾಣಿಸುತ್ತದೆ. ಆದರೆ, ರಾಗಿಂಗ್ ತಡೆಯಲು ಆತ ಯಾವುದೇ ಪ್ರಯತ್ನ ನಡೆಸುವುದು ಕಂಡುಬರುವುದಿಲ್ಲ.

ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್: ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಬಂಧನ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್: ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಬಂಧನ

'ವಿಶ್ವವಿದ್ಯಾಲಯದಲ್ಲಿ ರಾಗಿಂಗ್ ನಡೆಯದಂತೆ ನೋಡಿಕೊಳ್ಳಲು ವಿಶೇಷ ದಳವನ್ನು ಸಂಸ್ಥೆ ನಿರ್ವಹಿಸುತ್ತಿದೆ. ಇಂತಹ ಘಟನೆಗಳಲ್ಲಿ ಈ ಹಿಂದೆ ಕೆಲವು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ' ಎಂದು ಉಪ ಕುಲಪತಿ ಡಾ. ರಾಜಕುಮಾರ್ ಹೇಳಿದ್ದಾರೆ.

ಸಫಾಯಿ ಗ್ರಾಮವು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ಅವರ ತವರೂರಾಗಿದೆ.

English summary
First year medical students were forced to shave their head and salute their senior in Uttar Pradesh University of medical sciences.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X