ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹತ್ರಾಸ್ ಸಂತ್ರಸ್ತೆ ಕುಟುಂಬದ ಭೇಟಿಗೆ ರಾಹುಲ್ ಗಾಂಧಿ ಸೇರಿ ಐವರಿಗೆ ಅನುಮತಿ

|
Google Oneindia Kannada News

ಲಕ್ನೋ, ಅಕ್ಟೋಬರ್ 03: ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಕುಟುಂಬದವರ ಭೇಟಿಗೆ ರಾಹುಲ್ ಗಾಂಧಿ ಸೇರಿ ಐವರು ಕಾಂಗ್ರೆಸ್ ನಾಯಕರಿಗೆ ಅನುಮತಿ ದೊರೆತಿದೆ.

ನಿನ್ನೆಯಷ್ಟೇ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ರಾಹುಲ್‌ ಗಾಂಧಿ ನಿಯೋಗದಿಂದ ಹತ್ರಾಸ್ ಸಂತ್ರಸ್ತೆಯ ಕುಟುಂಬದವರ ಭೇಟಿ ರಾಹುಲ್‌ ಗಾಂಧಿ ನಿಯೋಗದಿಂದ ಹತ್ರಾಸ್ ಸಂತ್ರಸ್ತೆಯ ಕುಟುಂಬದವರ ಭೇಟಿ

ಕಳೆದ ಗುರುವಾರ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಹತ್ರಾಸ್ ಗೆ ತೆರಳುತ್ತಿದ್ದ ಈ ಇಬ್ಬರು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದರು.

Rahul Gandhi, 4 Other Congress Representatives Allowed To Proceed To Hathras

ಹತ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ವೆಗಿಸದ ಹೀನ ಕೃತ್ಯಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಇಂದು ಮತ್ತೆ ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಕಾರನ್ನು ದೆಹಲಿ- ನೋಯ್ಡಾ ಗಡಿಯಲ್ಲಿಯೇ ಉತ್ತರ ಪ್ರದೇಶ ಪೊಲೀಸರು ತಡೆದರು.

ಆದರೆ ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದರು.ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಐವರಿಗೆ ಮಾತ್ರ ಹತ್ರಾಸ್ ಗೆ ತೆರಳಲು ಅನುಮತಿ ನೀಡಲಾಗಿದೆ.

English summary
Congress leader Rahul Gandhi and party general secretary Priyanka Gandhi Vadra and two other leaders - Adhir Ranjan Chowdhury, KC Venugopal - have been allowed by the policemen at the toll plaza on the Delhi-Noida Direct (DND) to proceed to Hathras in Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X