ಅಮೇಥಿಯಿಂದ ಇಂದು ನಾಮಪತ್ರ ಸಲ್ಲಿಸಲಿರುವ ರಾಹುಲ್ ಗಾಂಧಿ

ಅಮೇಥಿ, ಏಪ್ರಿಲ್ 10: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

2014 ಲೋಕಸಭೆ ಚುನಾವಣೆ : ಒಂದು ವಿಶ್ಲೇಷಣೆ

ಕಳೆದ 15 ವರ್ಷಗಳಿಂದ ಅಮೇಥಿಯಿಂದಲೇ ಲೋಕಸಭೆ ಅಖಾಡಕ್ಕಿಳಿಯುತ್ತಿರುವ ರಾಹುಲ್ ಗಾಂಧಿ, ಪ್ರತಿಬಾರಿಯೂ ಗೆಲುವು ಕಂಡಿದ್ದಾರೆ. ಈ ಬಾರಿ ಅಮೇಥಿಯೊಂದಿಗೆ ಕೇರಳದ ವಯನಾಡಿನಿಂದಲೂ ಅವರು ಸ್ಪರ್ಧಿಸುತ್ತಿದ್ದಾರೆ.

ರಾಹುಲ್ ಗಾಂಧಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದು, ಅವರಿಗೆ ಉತ್ತರ ಪ್ರದೇಶದ ಕಾಂಗ್ರೆಸ್ ಮುಖಂಡರು ಜೊತೆಯಾಗಲಿದ್ದಾರೆ.

Rahul Gandhi to file his nomination today from Amethi

ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿಯಿಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಸ್ಪರ್ಧಿಸುತ್ತಿದ್ದು, 2014 ರಲ್ಲೂ ಇರಾನಿ ಅವರು ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಸ್ಮೃತಿ ಇರಾನಿ ಅವರು ಗುರುವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. 2014 ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರಿಗೆ 408,651 ಮತಗಳನ್ನು ಪಡೆದು 107,903 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯ ಫೈರ್ ಬ್ರಾಂಡ್ ನಾಯಕಿ ಸ್ಮೃತಿ ಇರಾನಿ ಅವರು 300,748 ಮತಗಳನ್ನು ಪಡೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+