ಮಹಾಮೈತ್ರಿಕೂಟದಲ್ಲಿ ಬಿರುಗಾಳಿ ಎಬ್ಬಿಸಿದ ಪ್ರಿಯಾಂಕಾ ಗಾಂಧಿ ಹೇಳಿಕೆ

ಅಮೇಥಿ, ಮಾರ್ಚ್ 28: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಯೊಂದು ಇದೀಗ ಮಹಾಮೈತ್ರಿಕೂಟ ಮತ್ತು ಕಾಂಗ್ರೆಸ್ ನ ಮಿತ್ರಪಕ್ಷಗಳಲ್ಲಿ ಬಿರುಗಾಳಿ ಎಬ್ಬಿಸುವ ಲಕ್ಷಣಗಳು ಕಾಣಿಸುತ್ತಿವೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಉತ್ತರ ಪ್ರದೇಶದ ಅಮೇಥಿಯಲ್ಲಿ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಗೆದ್ದರೆ ರಾಹುಲ್ ಗಾಂಧಿ ಅವರು ಪ್ರಧಾನಿಯಾಗುತ್ತಾರೆ ಎಂದರು.

"ನಾವು 2019 ರ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತೇವೆ ಮತ್ತು ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ" ಎಂದು ರಾಹುಲ್ ಗಾಂಧಿ ಕ್ಷೇತ್ರವಾದ ಅಮೇಥಿಯಲ್ಲಿ ಪ್ರಿಯಾಂಕಾ ಗಾಂಧಿ ಹೇಳಿದರು.

Rahul Gandhi will become PM after Congress wins: Priyanka Gandhi

ಅಕಸ್ಮಾತ್ ಕಾಂಗ್ರೆಸ್ ಗೆದ್ದರೆ ಸರಿ, ಆದರೆ ಮಹಾಮೈತ್ರಿಕೂಟದ ಬೆಂಬಲದಿಂದ ಸರ್ಕಾರ ರಚನೆಯಾದರೆ ಆಗ ಪ್ರಧಾನಿಯಾಗುವವರು ಯಾರು? ಆ ಪಟ್ಟಿಯಲ್ಲಿ ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿ, ಮಾಯಾವತಿ ಸೇರಿದಂತೆ ಹಲವರ ಹೆಸರಿದೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಪ್ರಿಯಾಂಕಾ ಗಾಂಧಿ ಅವರು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸುವುದಿಲ್ಲ ಎನ್ನಲಾಗಿತ್ತು. ಆದರೆ ಪಕ್ಷ ಬಯಸಿದರೆ, ಅಗತ್ಯವಿದ್ದರೆ ಸ್ಪರ್ಧಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+