ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೋಗಿಯನ್ನು ಪ್ರತಿಪಕ್ಷ ನಾಯಕನನ್ನಾಗಿ ನೋಡಬೇಕು: ಟಿಕಾಯತ್

|
Google Oneindia Kannada News

ಬಿಜ್ನೋರ್, ಜನವರಿ 27:ಉತ್ತರ ಪ್ರದೇಶ ವಿಧಾನಸಭೆ ಸನ್ನಿಹಿತವಾಗುತ್ತಿದ್ದು, ಚುನಾವಣೆ ಕುರಿತು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್​ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ತರಪ್ರದೇಶ ಚುನಾವಣೆ ಬಳಿಕ ಯೋಗಿ ಆದಿತ್ಯನಾಥ್​ ಅವರನ್ನು ಪ್ರಬಲ ಪ್ರತಿಪಕ್ಷ ನಾಯಕನನ್ನಾಗಿ ನೋಡಲು ಬಯಸುತ್ತೇನೆ ಎಂದಿದ್ದಾರೆ.

ಬಿಜೆಪಿ 6ನೇ ಪಟ್ಟಿ: ಉತ್ತರ ಪ್ರದೇಶದ 5 ಹಾಲಿ ಶಾಸಕರಲ್ಲಿ ಇಬ್ಬರಿಗೆ ಕೈತಪ್ಪಿದ ಟಿಕೆಟ್!ಬಿಜೆಪಿ 6ನೇ ಪಟ್ಟಿ: ಉತ್ತರ ಪ್ರದೇಶದ 5 ಹಾಲಿ ಶಾಸಕರಲ್ಲಿ ಇಬ್ಬರಿಗೆ ಕೈತಪ್ಪಿದ ಟಿಕೆಟ್!

ಉತ್ತರಪ್ರದೇಶದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಹೊಂದಿರಬೇಕು. ಹಾಗೂ ಶಾಂತಿಯುತ ವಾತಾವರಣದಲ್ಲಿ ಚುನಾವಣೆಗಳು ನಡೆಯಬೇಕು. ಪ್ರತಿ ವ್ಯಕ್ತಿಗೂ ಅವರ ಆಯ್ಕೆಯಂತೆ ಮತ ಚಲಾಯಿಸಲು ಅವಕಾಶವಿದೆ ಎಂದು ಹೇಳಿದರು.

Rakesh Tikait Says That He Want To See CM Yogi As Leader Of Opposition

ಬುಧವಾರ ರಾಕೇಶ್ ಟಿಕಾಯತ್ ಬಿಜ್ನೋರ್ ಜಿಲ್ಲೆಯ ಹಲವು ಗ್ರಾಮಗಳಿಗೆ ತೆರಳಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿಗೆ ಮತ ನೀಡುವಂತೆ ರೈತರಲ್ಲಿ ಮನವಿ ಮಾಡಿದರು. ಟಿಕ್ರಿ ಗ್ರಾಮದಲ್ಲಿ ಟಿಕಾಯತ್, ಬಿಜೆಪಿ ವಿರುದ್ಧ ಮತ ಹಾಕಿ ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಸಿಖ್ ಸಮುದಾಯದ ರೈತರಿಗೆ ತಿಳಿಸಿದರು.

ಮುಂಬರುವ ಪಂಚ ರಾಜ್ಯಗಳ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ತಮ್ಮ ಬೆಂಬಲ ನೀಡುವುದಿಲ್ಲ ಕೆಲದಿನಗಳ ಹಿಂದೆ ಟಿಕಾಯತ್​ ಸ್ಪಷ್ಟಪಡಿಸಿದ್ದರು. ಇದೇ ವೇಳೆ, ಪ್ರತಿಪಕ್ಷ ನಾಯಕನು ಬಲಶಾಲಿಯಾಗಿರಬೇಕು. ಆ ಸ್ಥಾನಕ್ಕೆ ಯೋಗಿಜಿ ಅವರಿಗಿಂತ ಸೂಕ್ತ ವ್ಯಕ್ತಿ ಇನ್ನೊಬ್ಬರಿಲ್ಲ ಎಂದು ಟಿಕಾಯತ್​ ವ್ಯಂಗ್ಯವಾಡಿದರು.

ಉತ್ತರ ಪ್ರದೇಶದ 403 ಕ್ಷೇತ್ರಗಳಿಗೆ 7ಹಂತದಲ್ಲಿ ಮತದಾನ ಫೆಬ್ರವರಿ 10ರಂದು ಮೊದಲ ಹಂತದ ಮತದಾನ ಫೆಬ್ರವರಿ 14ರಂದು 2ನೇ ಹಂತದ ಮತದಾನ ಫೆಬ್ರವರಿ 20ರಂದು 3ನೇ ಹಂತದ ಮತದಾನ ಫೆಬ್ರವರಿ 23ರಂದು 4ನೇ ಹಂತದ ಮತದಾನ ಫೆಬ್ರವರಿ 27ರಂದು 5ನೇ ಹಂತದ ಮತದಾನ ಮಾರ್ಚ್ 3ರಂದು 6ನೇ ಹಂತದ ಮತದಾನ ಮಾರ್ಚ್ 7ರಂದು 7ನೇ ಹಂತದ ಮತದಾನ ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.

ಚುನಾವಣೆಗೆ 900 ವೀಕ್ಷಕರ ನೇಮಕ ಮಾಡಲಾಗುವುದು. ಅಭ್ಯರ್ಥಿಗಳು ತಮ್ಮ ಅಪರಾಧ ಹಿನ್ನೆಲೆಯನ್ನು ತಿಳಿಸಬೇಕು. ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿ ಬಗ್ಗೆ ಪಕ್ಷ ಕಾರಣ ನೀಡಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಾಮಪತ್ರವನ್ನು ಸಲ್ಲಿಸಬಹುದು. ಸುವಿಧಾ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ನಾಮಪತ್ರ ಸಲ್ಲಿಕೆ ಮಾಡಬಹುದು. 5 ರಾಜ್ಯಗಳ ಚುನಾವಣಾ ನೀತಿಸಂಹಿತೆ ಜಾರಿ ಆಗಿದೆ. ಚುನಾವಣಾ ಸಿಬ್ಬಂದಿ 2 ಡೋಸ್ ಲಸಿಕೆ ಪಡೆದಿರಬೇಕು.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಜೋರಾಗಿದೆ. ಈ ಬಾರಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಸಂಪೂರ್ಣ ಬಲ ಬಂದಿದೆ. ಬುಧವಾರ ಸಂಜೆ ಪಕ್ಷವು ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ 89 ನಾಯಕರ ಹೆಸರುಗಳಿವೆ. ಚುನಾವಣೆ ಘೋಷಣೆಗೂ ಮುನ್ನವೇ ಪ್ರಿಯಾಂಕಾ ಗಾಂಧಿ ಅವರು 'ಲಡ್ಕಿ ಹೂ ಲಾಡ್ ಸಕ್ತಿ ಹೂ' ಎಂಬ ಘೋಷಣೆಯನ್ನು ನೀಡಿದ್ದು, ಹೊಸ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಹೆಸರುಗಳಿವೆ.

ಈ ಪಟ್ಟಿಯಲ್ಲಿ ಸಯಾನಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಅಂತಾರಾಷ್ಟ್ರೀಯ ಶೂಟರ್ ಪೂನಂ ಪಂಡಿತ್ ಹೆಸರು ಸೇರಿದೆ. ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಸಮಯದಲ್ಲಿ ಅವರು ಮುನ್ನಲೆಯಲ್ಲಿದ್ದರು. ನಂತರ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತು. ಈ ಹೋರಾಟದಲ್ಲಿ ಪೂನಂ ಪಂಡಿತ್ ಸಕ್ರಿಯವಾಗಿ ಭಾಗವಹಿಸಿದರು.

5 ರಾಜ್ಯಗಳಲ್ಲಿ 2,15,368 ಮತಗಟ್ಟೆ ಸ್ಥಾಪಿಸಲಾಗುವುದು. ಪ್ರತಿ ಮತಗಟ್ಟೆಯಲ್ಲಿ 1,250 ಜನ ಮತ ಚಲಾಯಿಸಬಹುದು. 80 ವರ್ಷ ಮೇಲ್ಪಟ್ಟವರು, ವಿಕಲ ಚೇತನರು, ಕೊರೊನಾ ಸೋಂಕಿತರಿಗೆ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮಾಹಿತಿ ನೀಡಿದ್ದಾರೆ.

Recommended Video

ಮೈಕ್‌ ಆಫ್‌ ಆಗಿದೆ ಎಂದು ಕೆಟ್ಟ ಶಬ್ದದಿಂದ ಪತ್ರಕರ್ತನಿಗೆ ಬೈದ Joe Biden | Oneindia Kannada

ಮಣಿಪುರ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ ಮಾಡಲಾಗಿದೆ. 5 ರಾಜ್ಯಗಳಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ.

English summary
Farmers’ leader and Bhartiya Kisan Union national spokesperson Rakesh Tikait who was on a door-to-door campaign in western Uttar Pradesh to change the electoral atmosphere for upcoming UP polls said that he wants to see Yogi Aditayanth in the role of strong opposition leader.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X