ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

3 ವರ್ಷಗಳಲ್ಲಿ ಶ್ರೀರಾಮ ಮಂದಿರ ನಿರ್ಮಾಣ, ದೇಣಿಗೆ ಸಂಗ್ರಹ ಕಾರ್ಯ ಸ್ಥಗಿತ

|
Google Oneindia Kannada News

ನವದೆಹಲಿ, ಮಾರ್ಚ್ 07: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಲು ಟ್ರಸ್ಟ್‌ ಮನೆ ಮನೆಗೆ ತೆರಳಿ ದೇಣಿಗೆ ಸಂಗ್ರಹಿಸುತ್ತಿದ್ದ ಕಾರ್ಯವನ್ನು ಸ್ಥಗಿತಗೊಳಿಸಿದೆ.

ಇಲ್ಲಿಯವರೆಗೆ 2,500 ಕೋಟಿ ರೂ. ಸಂಗ್ರಹವಾಗಿದೆ ಎಂದು ಟ್ರಸ್ಟ್ ತಿಳಿಸಿದೆ. ಹಾಗೆಯೇ ಮೂರು ವರ್ಷಗಳಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣವಾಗಲಿದೆ ಎಂದು ತಿಳಿಸಿದ್ದಾರೆ.

ದೇಶಾದ್ಯಂತ 9 ಲಕ್ಷ ಸ್ವಯಂಸೇವಕರು ನಾಲ್ಕು ಲಕ್ಷ ಹಳ್ಳಿಗಳ 10 ಕೋಟಿ ಮನೆಗಳಿಂದ ದೇಣಿಗೆ ಸಂಗ್ರಹಿಸಿದ್ದಾರೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಹೇಳಿದ್ದಾರೆ.

Ayodhya

ದೇಣಿಗೆ ಸಂಗ್ರಹ ಕಾರ್ಯ ನಿಲ್ಲಿಸಿದ್ದರೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಹಣ ನೀಡುತ್ತಿದ್ದಾರೆ ಎಂದಿದ್ದಾರೆ

ಅಯೋಧ್ಯೆಯಲ್ಲಿ 70 ಎಕರೆಯಲ್ಲಿ ಮಂದಿರ ನಿರ್ಮಾಣಕ್ಕೆ ಟ್ರಸ್ಟ್ ಮುಂದಾಗಿತ್ತು. ಆದರೆ ಇದೀಗ ಹೆಚ್ಚುವರಿಯಾಗಿ ಜಮೀನನ್ನು ಖರೀದಿಸಿ 107 ಎಕರೆಗೆ ವಿಸ್ತರಿಸಲು ಟ್ರಸ್ಟ್ ಇದೀಗ ಯೋಜನೆ ರೂಪಿಸಿದೆ. ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಮರ್ಯಾದಾ ಪುರುಷೋತ್ತಮ ವಿಮಾನ ನಿಲ್ದಾಣಕ್ಕೆ ಬಜೆಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರವು 101 ಕೋಟಿ ರೂ. ಮೀಸಲಿರಿಸಿದೆ.

ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ವಿಮಾನ ನಿಲ್ದಾಣಕ್ಕೆ 101 ಕೋಟಿ ರೂ ಮೀಸಲುಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ವಿಮಾನ ನಿಲ್ದಾಣಕ್ಕೆ 101 ಕೋಟಿ ರೂ ಮೀಸಲು

ವಿಶೇಷ ಪ್ರದೇಶ ಕಾರ್ಯಕ್ರಮದಡಿಯಲ್ಲಿ ಪುರ್ವಾಂಚಲದ ವಿಶೇಷ ಯೋಜನೆಗಳಿಗಾಗಿ 300 ಕೋಟಿಯನ್ನು ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.

ಹೊಸ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮಾಡಲಾಗುತ್ತಿದ್ದು, ಈ ವಿಮಾನ ನಿಲ್ದಾಣದಲ್ಲಿ ವಾಯುನೆಲೆಗಳ ಸಂಖ್ಯೆಯಲ್ಲಿ 2ರಿಂದ 6ಕ್ಕೆ ಹೆಚ್ಚಿಸಲು 2 ಸಾವಿರ ಕೋಟಿ ರೂಪಾಯಿಯನ್ನು ನೀಡಲಾಗುತ್ತಿದೆ.

English summary
Announcing a 3-year deadline for the construction of the Ram Mandir at Ayodhya, Ramjanmabhoomi Teerth Kshetra Trust chairman Champat Rai on Saturday, stated that the 45-day fund drive had been completed on February 27.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X