ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹರಿದ್ವಾರ ದ್ವೇಷದ ಭಾಷಣ: ಧಾರ್ಮಿಕ ಮುಖಂಡ ಯತಿ ನರಸಿಂಹಾನಂದ್ ಬಂಧನ

|
Google Oneindia Kannada News

ಲಕ್ನೋ ಜನವರಿ 16: ಕಳೆದ ತಿಂಗಳು ಹರಿದ್ವಾರದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆನೀಡುವ ಕಾರ್ಯಕ್ರಮವನ್ನು ಆಯೋಜಿಸಿದ್ದ ಧಾರ್ಮಿಕ ಮುಖಂಡರಲ್ಲಿ ಒಬ್ಬರಾದ ಯತಿ ನರಸಿಂಹಾನಂದ್ ಅವರನ್ನು ಶನಿವಾರ ಬಂಧಿಸಲಾಗಿದೆ. ಪ್ರಕರಣದಲ್ಲಿ ಯತಿ ನರಸಿಂಹಾನಂದ್ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯ ನಂತರ ಕಸ್ಟಡಿಗೆ ತೆಗೆದುಕೊಳ್ಳಲಾದ ಎರಡನೇ ವ್ಯಕ್ತಿಯಾಗಿದ್ದಾರೆ.

ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿ ಅವರು ಹರಿದ್ವಾರ ಧರ್ಮ ಸಂಸದ್ ಅಥವಾ ಧಾರ್ಮಿಕ ಸಭೆಯನ್ನು ಒಳಗೊಂಡ ದ್ವೇಷ ಭಾಷಣ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮೊದಲ ಆರೋಪಿಯಾಗಿದ್ದಾರೆ. ಇವರು ಮತಾಂತರಗೊಳ್ಳುವ ಮೊದಲು ವಸೀಮ್ ರಿಜ್ವಿ ಆಗಿದ್ದರು. ನರಸಿಂಹಾನಂದ ಅವರು ಹತ್ಯಾಕಾಂಡ ಮತ್ತು ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳ ಬಳಕೆಗೆ ಕರೆ ನೀಡಿದ ಭಾಷಣಗಳ ಮೇಲೆ ದಾಖಲಿಸಲಾದ ಎಫ್‌ಐಆರ್‌ಗಳಲ್ಲಿ ಹೆಸರಿಸಲಾದ 10 ಕ್ಕೂ ಹೆಚ್ಚು ಜನರಲ್ಲಿ ಸೇರಿದ್ದಾರೆ. ನರಸಿಂಹಾನಂದ ಮತ್ತು ತ್ಯಾಗಿ ಬಳಿಕ ಪೊಲೀಸರು ಮತ್ತೊಬ್ಬ ಧಾರ್ಮಿಕ ನಾಯಕಿ ಸಾಧ್ವಿ ಅನ್ನಪೂರ್ಣ ಅವರ ವಿಚಾರಣೆ ಮಾಡುವ ನಿರೀಕ್ಷೆ ಇದೆ.

ಧರ್ಮ ಸಂಸದ್ ಸಮಾವೇಶದಲ್ಲಿ ದ್ವೇಷ ಭಾಷಣ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು
ಘಟನೆ ನಡೆದ ಸುಮಾರು ಒಂದು ತಿಂಗಳ ನಂತರ ಪ್ರಕರಣದ ಮೊದಲ ಬಂಧನವು ಬುಧವಾರ ನಡೆದಿದೆ. ಪ್ರಕರಣದಲ್ಲಿ ತೆಗೆದುಕೊಂಡ ಕ್ರಮಗಳ ಕುರಿತು 10 ದಿನಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

Religious Leader Yati Narsinghanand Arrested For Haridwar Hate Speeches
ಹರಿದ್ವಾರದಲ್ಲಿ ದ್ವೇಷ ಭಾಷಣ

ಡಿಸೆಂಬರ್ 17 ರಿಂದ 20 ರವರೆಗೆ ನಡೆದ ಹರಿದ್ವಾರದ ಕಾರ್ಯಕ್ರಮದಲ್ಲಿ ಮಾಡಿದ ದ್ವೇಷ ಭಾಷಣದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ದ್ವೇಷ ಭಾಷಣದ ವಿರುದ್ಧ ಅನೇಕರ ವಿರೋಧ ವ್ಯಕ್ತವಾಗಿತ್ತು. ಇದು ಮಾಜಿ ಮಿಲಿಟರಿ ಮುಖ್ಯಸ್ಥರು, ನಿವೃತ್ತ ನ್ಯಾಯಾಧೀಶರು, ಕಾರ್ಯಕರ್ತರು ಮತ್ತು ಅಂತಾರಾಷ್ಟ್ರೀಯ ಟೆನಿಸ್ ತಾರೆ ಮಾರ್ಟಿನಾ ನವ್ರಾಟಿಲೋವಾ ಅವರಿಂದಲೂ ತೀವ್ರ ಟೀಕೆಗೆ ಗುರಿಯಾಗಿದೆ. ಕೂಡಲೇ ಕ್ಷಮೆ ಯಾಚಿಸುವಂತೆ ಒತ್ತಡಗಳನ್ನು ಹೇರಲಾಗಿತ್ತು. ಆದರೆ ಕಾರ್ಯಕ್ರಮವನ್ನು ಆಯೋಜಿಸಿದವರು ಮತ್ತು ದ್ವೇಷದ ಭಾಷಣಗಳನ್ನು ನೀಡಿದವರು ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

Religious Leader Yati Narsinghanand Arrested For Haridwar Hate Speeches
"ನಾನು ಹೇಳಿದ್ದಕ್ಕೆ ನಾನು ನಾಚಿಕೆಪಡುವುದಿಲ್ಲ. ನಾನು ಪೊಲೀಸರಿಗೆ ಹೆದರುವುದಿಲ್ಲ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ" ಎಂದು ಪ್ರಬೋಧಾನಂದ ಗಿರಿ ಹೇಳಿದ್ದರು. ಇದರಿಂದ ಮತ್ತಷ್ಟು ಆಕ್ರೋಶಕ್ಕೆ ಪ್ರಕರಣ ಗುರಿಯಾಗಿದೆ. ಡಿಸೆಂಬರ್ 23 ರಂದು ಪ್ರಬೋಧಾನಂದ ಗಿರಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರಾಖಂಡದ ಅವರ ಸಹವರ್ತಿ ಪುಷ್ಕರ್ ಧಾಮಿ ಸೇರಿದಂತೆ ಬಿಜೆಪಿ ನಾಯಕರೊಂದಿಗೆ ಆಗಾಗ್ಗೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹರಿದ್ವಾರ ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರ್ಮಿಕ ಮುಖಂಡರಲ್ಲಿ ಒಬ್ಬರಾದ ಯತಿ ನರಸಿಂಹಾನಂದ್ ಅವರ ಸಹವರ್ತಿ ಆರೋಪಿ ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿಯನ್ನು ಈಗಾಗಲೇ ಬಂಧಿಸಲಾಗಿದೆ. ತ್ಯಾಗಿ ಅವರನ್ನು ಗುರುವಾರ ಹರಿದ್ವಾರ ಜಿಲ್ಲೆಯ ರೂರ್ಕಿಯಲ್ಲಿ ಬಂಧಿಸಲಾಗಿದೆ. ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿ ಬಂಧನದ ವೇಳೆ ಯತಿ ನರಸಿಂಹಾನಂದ್ ಅವರು "ತುಮ್ ಸಬ್ ಮಾರೋಗೆ (ನೀವೆಲ್ಲರೂ ಸಾಯುತ್ತೀರಿ)" ಎಂದು ಪೊಲೀಸ್ ಅಧಿಕಾರಿಗಳಿಗೆ ಶಾಪ ಹಾಕಿದ್ದಾರೆ.

Religious Leader Yati Narsinghanand Arrested For Haridwar Hate Speeches
ಅಧಿಕಾರಿಗಳು ತ್ಯಾಗಿ ಬಂಧನಕ್ಕೆ ಒತ್ತಾಯಿಸುತ್ತಿದ್ದಂತೆ, "ತುಮ್ ಸಬ್ ಮಾರೋಗೇ, ಅಪ್ನೆ ಬಚ್ಚೋ ಕೋ ಭೀ...(ನೀವೆಲ್ಲರೂ ಸಾಯುತ್ತೀರಿ, ನಿಮ್ಮ ಮಕ್ಕಳೂ ಸಹ...)" ಎಂದು ಯತಿ ನರಸಿಂಹಾನಂದ್ ಹೇಳಿದ್ದಾರೆ. ಇನ್ನೂ ಮುಸ್ಲಿಂ ಸಮುದಾಯ ವಿರುದ್ಧ ದ್ವೇಷದ ಭಾಷಣ ಮಾಡಿ ಮಾರಣಹೋಮಕ್ಕೆ ಪ್ರಚೋದನೆ ನೀಡುವ ಧರ್ಮ ಸಂಸದ್‌ನಂತ ಕಾರ್ಯಕ್ರಮಗಳನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಂ ವಿದ್ವಾಂಸರ ಒಕ್ಕೂಟ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಜಮೀಯತ್‌- ಉಲ್‌- ಉಲಾಮಾ - ಹಿಂದ್‌ ಎನ್ನುವ ಮುಸ್ಲಿಂ ನಾಯಕರ ಸಂಘಟನೆ ಈ ಬಗ್ಗೆ ಸೋಮವಾರ ಸರ್ವೋಚ್ಚ ನ್ಯಾಯಾಯಲಕ್ಕೆ ಅರ್ಜಿ ಸಲ್ಲಿಸಿದ್ದು, ಇಂಥ ಕಾರ್ಯಕ್ರಮಗಳನ್ನು ನಿಷೇಧಿಸಬೇಕು. ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದೆ.

English summary
Yati Narsinghanand one of the religious leaders who organised an event in Haridwar last month that called for the genocide of Muslims was arrested on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X