ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್ ಸಿಂಗ್ ಮತ್ತು ಪುತ್ರ ಲೋಕಸಭಾ ಕಣಕ್ಕೆ

|
Google Oneindia Kannada News

ಲಖನೌ, ಮಾರ್ಚ್ 19: ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಮಾಜಿ ಕೇಂದ್ರ ಸಚಿವ ಅಜಿತ್ ಸಿಂಗ್ ಅವರು ಉತ್ತರ ಪ್ರದೇಶದ ಮುಝಫರ್ ನಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಅಜಿತ್ ಸಿಂಗ್ ಪುತ್ರ ಜಯಂತ್ ಚೌಧರಿ ಅವರೂ ಸಹ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಅವರು ಭಾಗಪತ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಇದೇ ಕ್ಷೇತ್ರದಿಂದ ಅಜಿತ್ ಸಿಂಗ್ ಮತ್ತು ಅವರ ತಂದೆ ಚೌದರಿ ಚರಣ್ ಸಿಂಗ್ ಸಹ ಚುನಾವಣೆಗೆ ನಿಂತು ಗೆದ್ದಿದ್ದರು.

ಇಟಲಿ ಅಜ್ಜಿಯನ್ನು ನೋಡಿ ವರ್ಷಗಳೇ ಆದವು : ಬಿಜೆಪಿಗೆ ಪ್ರಿಯಾಂಕಾ ಮಾತಿನೇಟುಇಟಲಿ ಅಜ್ಜಿಯನ್ನು ನೋಡಿ ವರ್ಷಗಳೇ ಆದವು : ಬಿಜೆಪಿಗೆ ಪ್ರಿಯಾಂಕಾ ಮಾತಿನೇಟು

ರಾಷ್ಟ್ರೀಯ ಲೋಕದಳ ಪಕ್ಷವು ಉತ್ತರ ಪ್ರದೇಶದಲ್ಲಿ ಎಸ್‌ಪಿ-ಬಿಎಸ್‌ಪಿ ಯ ಮೈತ್ರಿಯಲ್ಲಿನ ಪಕ್ಷವಾಗಿದೆ. ಆರ್‌ಎಲ್‌ಡಿಗೆ ಮೂರು ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದ್ದು ಅವುಗಳಲ್ಲಿ ಎರಡಲ್ಲಿ ಅಪ್ಪ-ಮಗ ಸ್ಪರ್ಧೆ ಮಾಡುತ್ತಿದ್ದಾರೆ.

RLD chief Ajit Singh contest from Muzaffarnagar

ಉತ್ತರ ಪ್ರದೇಶ ಬಿಟ್ಟು ಹೊರಬಂದರಷ್ಟೇ ರಾಹುಲ್ ಗಾಂಧಿಗೆ ಚಾನ್ಸ್? ಉತ್ತರ ಪ್ರದೇಶ ಬಿಟ್ಟು ಹೊರಬಂದರಷ್ಟೇ ರಾಹುಲ್ ಗಾಂಧಿಗೆ ಚಾನ್ಸ್?

ಉತ್ತರ ಪ್ರದೇಶದಲ್ಲಿ ಎಸ್‌ಪಿಯು 37 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಬಿಎಸ್‌ಪಿಯು 38 ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದೆ. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಎಸ್‌ಪಿ-ಬಿಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿಲ್ಲ. ಮೂರು ಕ್ಷೇತ್ರದಲ್ಲಿ ಆರ್‌ಎಲ್‌ಡಿ ಸ್ಪರ್ಧೆ ಮಾಡುತ್ತಿದೆ.

English summary
Rashtriya Lok Dal chief Ajit Singh will contest lok sabha elections from Muzaffarnagar in Uttar Pradesh. His son Jayanth Chowdri will contest from Baghpat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X