ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಭೀಕರ ಅಪಘಾತ ಒಂದೇ ಕುಟುಂಬದ 7 ಮಂದಿ ಸಾವು, ಮೋದಿ ಸಂತಾಪ

|
Google Oneindia Kannada News

ಲಕ್ನೋ, ಮೇ 07; ಮಥುರಾದ ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ 7 ಜನರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಶನಿವಾರ ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳದಲ್ಲಿಯೇ ಮೂವರು ಪುರುಷರು, ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.

ಮಂಗಳೂರು ಅಪಘಾತ: ದುರಂತದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮೃತ ಮಹಿಳೆಮಂಗಳೂರು ಅಪಘಾತ: ದುರಂತದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮೃತ ಮಹಿಳೆ

ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಶುಕ್ರವಾರ ವಿವಾಹ ಸಮಾರಂಭಕ್ಕಾಗಿ ಹೋಗಿದ್ದ ಎಲ್ಲರೂ ಶನಿವಾರ ಬೆಳಗ್ಗೆ ನೋಯ್ಡಾಕ್ಕೆ ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ. ಆದರೆ ಕಾರಿಗೆ ಡಿಕ್ಕಿ ಹೊಡೆದ ವಾಹನ ಯಾವುದು? ಎಂಬುದು ಪತ್ತೆಯಾಗಿಲ್ಲ.

ಯಮುನಾ ಎಕ್ಸ್​​ಪ್ರೆಸ್​ ವೇಗೆ ಮಾಜಿ ಪ್ರಧಾನಿ ಹೆಸರಿಡಲು ಮುಂದಾದ ಆದಿತ್ಯನಾಥ್ ಸರ್ಕಾರ!?ಯಮುನಾ ಎಕ್ಸ್​​ಪ್ರೆಸ್​ ವೇಗೆ ಮಾಜಿ ಪ್ರಧಾನಿ ಹೆಸರಿಡಲು ಮುಂದಾದ ಆದಿತ್ಯನಾಥ್ ಸರ್ಕಾರ!?

Road Accident In Yamuna Expressway 7 From Same Family Killed

ಅಪಘಾತದಲ್ಲಿ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಥುರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ.

ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಮೋರಿಗೆ ಉರುಳಿದ ಬಸ್; 29 ಮಂದಿ ಸಾವು ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಮೋರಿಗೆ ಉರುಳಿದ ಬಸ್; 29 ಮಂದಿ ಸಾವು

ನರೇಂದ್ರ ಮೋದಿ ಸಂತಾಪ; ರಸ್ತೆ ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. "ಉತ್ತರ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ" ಎಂದು ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ನೀಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

English summary
7 people died and two were injured in a car accident on the Yamuna Expressway in Mathura . All those who died were members of the same family. PM Narendra Modi expressed his condolences to the families of the victims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X