ವಾರಣಾಸಿಯಲ್ಲಿ ಪ್ರಿಯಾಂಕಾ ಸ್ಪರ್ಧೆ ಯಾಕಿಲ್ಲ? ಸ್ಯಾಮ್ ಪಿತ್ರೋಡಾ ನೀಡಿದ ಕಾರಣ

ವಾರಣಾಸಿ, ಏಪ್ರಿಲ್ 26: ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದಕ್ಕೆ ಕಾರಣವನ್ನು ಕಾಂಗ್ರೆಸ್ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡ ನೀಡಿದ್ದಾರೆ.

"ವಾರಣಾಸಿಯಲ್ಲಿ ಸ್ಪರ್ಧಿಸಬಾರದು ಎಂಬುದು ಪ್ರಿಯಾಂಕಾ ಗಾಂಧಿ ಅವರದೇ ನಿರ್ಧಾರ. ಏಕೆಂದರೆ ಅವರ ಜವಾಬ್ದಾರಿಯೇ ಬೇರೆ. ಒಂದು ಕಡೆ ಸ್ಪರ್ಧೆಗೆ ನಿಂತರೆ ಬೇರೆ ಕಡೆ ಗಮನ ನೀಡುವುದಕ್ಕೆ ಸಾಧ್ಯವಾಗುದಿಲ್ಲ. ಒಂದೇ ಒಂದು ಕ್ಷೇತ್ರದ ಬಗ್ಗೆ ಗಮನ ಹರಿಸುವುದಕ್ಕಿಂತ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ಗಮನ ನೀಡಿ, ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕು ಎಂಬುದು ಪ್ರಿಯಾಂಕಾ ಅವರ ಅಭಿಪ್ರಾಯ" ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

"ಕಾಂಗ್ರೆಸ್ ಅವರಿಗೆ ಪ್ರಧಾನ ಕಾರ್ಯದರ್ಶಿಯ ಜವಾಬ್ದಾರಿ ನೀಡಿದೆ. ಆದ್ದರಿಂದ ಆ ಜವಾಬ್ದಾರಿಯನ್ನು ನಿಭಾಯಿಸುವ ಬಗ್ಗೆ ಅವರು ಹೆಚ್ಚಿನ ಮಹತ್ವ ನೀಡಲಿದ್ದಾರೆ. ಈ ನಿರ್ಧಾರ ಅವರ ಸ್ವಂತ ನಿರ್ಧಾರ" ಎಂದು ಪಿತ್ರೋಡಾ ಹೇಳಿದ್ದಾರೆ.

Sam Pitroda on Priyanka Gandhi Vadra not contesting from Varanasi

ವಾರಣಾಸಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ತಾವು ಸ್ಪರ್ಧೆಗೆ ಸಿದ್ಧ ಎಂದು ಅವರೂ ಹೇಳಿದ್ದರು. ಆದರೆ ಗುರುವಾರ ಪ್ರಕಟವಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಂಗ್ರೆಸ್ 2014 ರಲ್ಲಿ ಈ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಅಜಯ್ ರೈ ಅವರನ್ನೇ ಮತ್ತೆ ಕಣಕ್ಕಿಳಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+