ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಚುನಾವಣೆ ಬಂದಾಗ ಮಾತ್ರ ಅಖಿಲೇಶ್ ಯಾದವ್ ಎಚ್ಚರಗೊಳ್ಳುತ್ತಾರೆಯೇ?: ಪ್ರಿಯಾಂಕಾ ಗಾಂಧಿ ಪ್ರಶ್ನೆ

|
Google Oneindia Kannada News

ಲಕ್ನೋ, ಡಿಸೆಂಬರ್ 3: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಚುನಾವಣಾ ಸಮಯದಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ಕಳೆದ 2020ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ಸಂದರ್ಭದಲ್ಲಿ ದೌರ್ಜನ್ಯ ನಡೆದಾಗ ಅವರು ಎಲ್ಲಿದ್ದರು ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಪರ ಪ್ರತಿಜ್ಞಾ ರ್ಯಾಲಿ ನಡೆಸಿದ ಪ್ರಿಯಾಂಕಾ ಗಾಂಧಿ, ಬಿಜೆಪಿ ಸೇರಿದಂತೆ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಜಾತಿ ಮತ್ತು ಧರ್ಮದ ಆಧಾರದಲ್ಲಿ ರಾಜಕಾರಣವನ್ನು ನಡೆಸುತ್ತಿವೆ ಎಂದು ಆರೋಪಿಸಿದರು. ಈ ಪಕ್ಷಗಳು ಇಂತಹ ರಾಜಕೀಯದ ಮೂಲಕ ಮತಗಳನ್ನು ಪಡೆದುಕೊಂಡು ಅಧಿಕಾರ ನಡೆಸುವ ಅವಕಾಶವನ್ನು ಪಡೆದುಕೊಳ್ಳಬಹುದು ಎಂದು ತಿಳಿದುಕೊಂಡಿವೆ.

ಉ.ಪ್ರ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ: ಪ್ರಿಯಾಂಕಾ ಗಾಂಧಿಉ.ಪ್ರ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ: ಪ್ರಿಯಾಂಕಾ ಗಾಂಧಿ

ಬಿಜೆಪಿಯು ಸ್ವಸ್ಥ ಸಮಾಜದಲ್ಲಿ ಗಲಭೆಯನ್ನು ಸೃಷ್ಟಿಸಿ ಭಾರತೀಯ ಜನತಾ ಪಕ್ಷವು ಮತ್ತೆ ಗೆಲುವು ಸಾಧಿಸುತ್ತದೆ ಎಂದು ಕೆಲವರು ಹೇಳುವುದನ್ನು ನಾನೂ ಕೇಳಿದ್ದೇನೆ. ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷ ಎನಿಸಿಕೊಂಡಿರುವ ಪಕ್ಷದ ನಾಯಕರು ವಾಸ್ತವದ ಸಮಸ್ಯೆಗಳು ಹಾಗೂ ಅಭಿವೃದ್ಧಿಯ ಆಧಾರದ ಮೇಲೆ ಏಕೆ ಅಜೆಂಡಾವನ್ನು ರೂಪಿಸುತ್ತಿಲ್ಲ," ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಜಾತಿ ಮತ್ತು ಧರ್ಮ ಆಧಾರಿತ ರಾಜಕಾರಣ

ರಾಜ್ಯದಲ್ಲಿ ಜಾತಿ ಮತ್ತು ಧರ್ಮ ಆಧಾರಿತ ರಾಜಕಾರಣ

ಭಾರತೀಯ ಜನತಾ ಪಕ್ಷದಂತೆ ಬಹುಜನ ಸಮಾಜವಾದಿ ಪಕ್ಷ ಹಾಗೂ ಸಮಾಜವಾದಿ ಪಕ್ಷಗಳಿಗೂ ಅದೇ ರೀತಿಯ ರಾಜಕಾರಣ ಇಷ್ಟವಾಗುತ್ತದೆ. ಆದ್ದರಿಂದಲೇ ಜಾತಿ ಮತ್ತು ಧರ್ಮ ಆಧಾರಿತ ರಾಜಕಾರಣ ಮಾಡಲು ಹೊರಟಿವೆ ಎಂದು ಪ್ರಿಯಾಂಕಾ ಗಾಂಧಿ ದೂಷಿಸಿದರು.

ಸಮಾಜವಾದಿ ಪಕ್ಷದ ಮುಖ್ಯಸ್ಥನಿಗೆ ಪ್ರಿಯಾಂಕಾ ಸವಾಲು

ಸಮಾಜವಾದಿ ಪಕ್ಷದ ಮುಖ್ಯಸ್ಥನಿಗೆ ಪ್ರಿಯಾಂಕಾ ಸವಾಲು

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜ್ನೋರ್ ಪ್ರದೇಶದಲ್ಲಿ 19 ವರ್ಷದ ಯುವಕನೊಬ್ಬ ಪ್ರಾಣ ಬಿಟ್ಟಿದ್ದು, ಪೊಲೀಸ್ ಫೈರಿಂಗ್ ವೇಳೆ ಮತ್ತೊಬ್ಬರು ಮೃತಪಟ್ಟಿದ್ದರು. ಆದರೆ ಈ ಸಂಬಂಧ ಇದುವರೆಗೂ ಯಾರ ವಿರುದ್ಧವೂ ಕ್ರಮ ತೆಗೆದುಕೊಂಡಿಲ್ಲ. "ಅವರ ಮನೆಗಳಿಗೆ ಅಖಿಲೇಶ್ ಯಾದವ್ ಭೇಟಿ ನೀಡಿದ್ದಾರೆಯೇ?, ಸೋನಭದ್ರಾದಲ್ಲಿ 13 ಆದಿವಾಸಿಗಳು ಮೃತಪಟ್ಟಿದ್ದು, ಅವರ ಮನೆಗೆ ಅಖಿಲೇಶ್ ಭೇಟಿ ಕೊಟ್ಟಿದ್ದರೇ?, ಉನ್ನಾವೋ ಮತ್ತು ಹತ್ರಾಸ್ ಪ್ರದೇಶಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಲಾಗಿತ್ತು, ಅಲ್ಲಿಗೆ ಅಖಿಲೇಶ್ ಹೋಗಿದ್ದರೇ, ರೈತರು ಸೇರಿದಂತೆ ಹಲವು ಮೃತಪಟ್ಟ ಲಖೀಂಪುರ್ ಖೇರಿ ಅಪಘಾತ ನಡೆದ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದರೇ?, ಚುನಾವಣೆ ಸಂದರ್ಭಗಳಲ್ಲಿ ಮಾತ್ರ ಅವರು ರಾಜ್ಯದಲ್ಲಿ ಸುತ್ತಾಡುತ್ತಾರೆ, ಅವರ ಪಕ್ಷ ಇರುವುದನ್ನು ನೆನಪಿಸುತ್ತಾರೆ," ಎಂದು ಪ್ರಿಯಾಂಕಾ ಗಾಂಧಿ ಕಿಡಿ ಕಾರಿದರು.

ದಲಿತರ ಮೇಲೆ ದೌರ್ಜನ್ಯ ನಡೆದಾಗ ಸಮಾಜವಾದಿ ಪಕ್ಷ ಎಲ್ಲಿತ್ತು?

ದಲಿತರ ಮೇಲೆ ದೌರ್ಜನ್ಯ ನಡೆದಾಗ ಸಮಾಜವಾದಿ ಪಕ್ಷ ಎಲ್ಲಿತ್ತು?

ಉತ್ತರ ಪ್ರದೇಶದ ಆಗ್ರಾ, ಅಲಹಾಬಾದ್ ಮತ್ತು ಹತ್ರಾಸ್ ಪ್ರದೇಶಗಳಲ್ಲಿ ದಲಿತರ ಮೇಲೆ ದೌರ್ಜನ್ಯಗಳು ನಡೆದಾಗ ಬಹುಜನ ಸಮಾಜವಾದಿ ಪಕ್ಷದ ನಾಯಕರು ಏಕೆ ಮೌನವಾಗಿದ್ದರು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದರು. "ಅವರು ಏಕೆ ಧ್ವನಿ ಎತ್ತಲಿಲ್ಲ, ಬಿಎಸ್‌ಪಿ ನಾಯಕರು ಹೇಳಿಕೆ ನೀಡುವಾಗ ಬಿಜೆಪಿಯವರಂತೆ ಏಕೆ ಮಾತನಾಡುತ್ತಿದ್ದಾರೆ. ಏಕೆಂದರೆ ಅಂತಿಮವಾಗಿ ಸಮಸ್ಯೆ ಮತ್ತು ಹೋರಾಟಗಳ ಮೂಲಕ ನಡೆಸುವ ರಾಜಕೀಯದಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವರೆಲ್ಲ ತಿಳಿದುಕೊಂಡಿದ್ದಾರೆ. ಅವರೆಲ್ಲರೂ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಮತ ಕೇಳಬಹುದು ಎಂದುಕೊಂಡಿದ್ದಾರೆ," ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

ಯುದ್ಧ ಗೆಲ್ಲಲು ಹೋರಾಟ ಮಾಡಲೇಬೇಕು

ಯುದ್ಧ ಗೆಲ್ಲಲು ಹೋರಾಟ ಮಾಡಲೇಬೇಕು

ಹೋರಾಟವಿಲ್ಲದೇ ಗೆಲ್ಲುವ ಯುದ್ಧವಿಲ್ಲ ಎಂದು ಒತ್ತಿ ಹೇಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, "ಹೋರಾಟ ಇಲ್ಲದಿದ್ದಾಗ ಗೆಲುವು ಹೇಗೆ ಸಾಧ್ಯ? ಎಲ್ಲರೂ ತಮಗೆ ಅವಶಾಕ ಸಿಕ್ಕಾಗ ಆಡಳಿತ ನಡೆಸುವುದು, ಲೂಟಿ ಹೊಡೆಯುವ ಬಗ್ಗೆಯೇ ಯೋಚಿಸುತ್ತಾರೆ. ಅವರ ಐದು ವರ್ಷಗಳ ಆಡಳಿತದ ನಂತರ ನಾವು ಅನಗತ್ಯ ವಿಷಯಗಳನ್ನು ಎತ್ತಿ ಆಳುತ್ತಿದ್ದೇವೆ ಎಂದು ತಿಳಿದುಕೊಂಡಿರುತ್ತಾರೆ. ನಾನು ನಿಮಗೆ ಬದಲಾಗಲು ಅವಕಾಶ ನೀಡುತ್ತೇನೆ. ರಾಜಕೀಯ, ನೀವು ನಿಮ್ಮ ಅಭಿವೃದ್ಧಿ ವಿಷಯಗಳಲ್ಲಿ ನಾಯಕರನ್ನು ಉತ್ತರದಾಯಿಯನ್ನಾಗಿ ಮಾಡಬೇಕು ಮತ್ತು ರಾಜಕೀಯವನ್ನು ಅಭಿವೃದ್ಧಿ ಆಧಾರಿತವಾಗಿಸಬೇಕು" ಎಂದು ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಈ ಹಿಂದೆ ಮತದಾರರ ತೀರ್ಪು

ಉತ್ತರ ಪ್ರದೇಶದಲ್ಲಿ ಈ ಹಿಂದೆ ಮತದಾರರ ತೀರ್ಪು

ಕಳೆದ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಮತ್ತು ಕಾಂಗ್ರೆಸ್ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದ್ದವು. ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಸಮಾಜವಾದಿ ಪಕ್ಷವು 311 ಕ್ಷೇತ್ರಗಳಲ್ಲಿ ಕಣಕ್ಕೆ ಇಳಿದಿತ್ತು. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿತ್ತು. ಇನ್ನೊಂದು ಕಡೆ 277 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ ಆರ್‌ಎಲ್‌ಡಿ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲವು ಸಾಧಿಸಿತ್ತು. ರಾಜ್ಯದ ಒಟ್ಟು 403 ಸ್ಥಾನಗಳ ಪೈಕಿ ಬಿಜೆಪಿ 312 ರಲ್ಲಿ ಗೆಲುವು ದಾಖಲಿಸಿತ್ತು. ಈ ಪಕ್ಷ ಶೇ. 39.67ರಷ್ಟು ಮತವನ್ನು ಪಡೆದುಕೊಂಡಿತ್ತು. ಅಂದು ಸಮಾಜವಾದಿ ಪಕ್ಷವು 47 ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷ (BSP) 19 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

English summary
Uttar Pradesh Assembly Election: Samajwadi Party chief Akhilesh Yadav Will active during the election time only, Says Priyanka Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X