ಹಾಡಹಗಲೇ ಸಮಾಜವಾದಿ ಪಕ್ಷದ ಕಾರ್ಯಕರ್ತರ ಕೊಲೆ

ಲಕ್ನೋ, ಮೇ 19: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತ ಹಾಗೂ ಆತನ ಮಗನನ್ನು ಹಾಡಹಗಲೇ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ.

ಹೊಲದ ರಸ್ತೆ ವಿಷಯವಾಗಿ ಎರಡು ಗುಂಪುಗಳ ನಡುವೆ ಜಗಳ ನಡೆದಾಗ, ಸಮಾಜವಾದಿ ಪಕ್ಷದ ಕಾರ್ಯಕರ್ತರಾದ ಚೋಟೆಲಾಲ್ ದಿವಾಕರ್ ಹಾಗೂ ಅತನ ಮಗ ಸುನೀಲ್‌ನನ್ನು ದುಷ್ಕರ್ಮಿಗಳು ಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡುವ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬರೇಲಿ ಜಿಲ್ಲೆಯ ಪತೇಪುರ್ ಶಾಮಸೋಯಿ ಎನ್ನುವ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನರೇಗಾ ಯೋಜನೆಯಡಿ ನಿರ್ಮಿಸಲಾದ ಹೊಲದ ರಸ್ತೆಯ ಬಗ್ಗೆ ಎರಡು ಗುಂಪುಗಳ ನಡುವೆ ಜಗಳ ಏರ್ಪಟ್ಟು ಈ ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಗ್ರಾಮದ ಮುಖಂಡ ಸವಿಂದರ್ ಎನ್ನುವನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ತಿಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

2 Samajwadi Party Workers Shoot Dead In Uttar Pradesh Video Goes Viral

ಘಟನೆಗೆಯ ನಂತರ ಸ್ಥಳದಲ್ಲಿ ನೂರಾರು ಸಮಾಜವಾದಿ ಕಾರ್ಯಕರ್ತರು ಸೇರಿದ್ದರಿಂದ ಉದ್ವಿಗ್ನತೆಯ ವಾತಾವರಣ ನಿರ್ಮಾಣವಾಗಿತ್ತು. ಹಾಡಹಗಲೇ ಗುಂಡು ಹಾರಿಸಿರುವ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಯಮುನಾ ಪ್ರಸಾದ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+