ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅಖಿಲೇಶ್

|
Google Oneindia Kannada News

ಲಕ್ನೋ, ಮಾರ್ಚ್ 7: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಸಮಾಜವಾದಿ ಮೈತ್ರಿಕೂಟವೇ ಮುಂದಿನ ಸರ್ಕಾರವನ್ನು ರಚಿಸಲಿದೆ ಎಂದು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಯುಪಿಯಲ್ಲಿ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಮೈತ್ರಿಕೂಟವು ರಾಜ್ಯದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಒಟ್ಟು 403 ವಿಧಾನಸಭೆ ಕ್ಷೇತ್ರಗಳಿಗೆ ಕಳೆದ ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೂ ಒಟ್ಟು ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆಯನ್ನು ನಡೆಸಲಾಗಿದೆ. ಸೋಮವಾರ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಅಂತ್ಯವಾಗಲಿದೆ. ಉತ್ತರ ಪ್ರದೇಶದಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದಂತೆ ಸಂಜೆ 6.30ರ ನಂತರ ಮತದಾನೋತ್ತರ ಸಮೀಕ್ಷೆಗಳು ಹೊರ ಬೀಳಲಿವೆ.

UP Election 2022 Voting Live: ಸಂಜೆ 5 ಗಂಟೆಯವರೆಗೆ 54.18% ಮತದಾನUP Election 2022 Voting Live: ಸಂಜೆ 5 ಗಂಟೆಯವರೆಗೆ 54.18% ಮತದಾನ

ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿ ಬಿಜೆಪಿ ನಾಶ:

ಕಳೆದ ಮಾರ್ಚ್ 3ರಂದು ಆರನೇ ಹಂತದ ಮತದಾನವನ್ನು ನಡೆಸಲಾಗಿದೆ. ಈ ವೇಳೆ ರಾಜ್ಯದ ಪೂರ್ವ ಭಾಗದಲ್ಲಿ ಭಾರತೀಯ ಜನತಾ ಪಕ್ಷವು ಸಂಪೂರ್ಣ ನೆಲಕಚ್ಚಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ರಾಜ್ಯದ ಪ್ರತಿಯೊಬ್ಬ ಬಿಜೆಪಿ ನಾಯಕರು ಸುಳ್ಳು ಪ್ರಚಾರವನ್ನು ಮಾಡಿದ್ದಾರೆ, ಬಿಜೆಪಿಯ ಹೊರತಾಗಿ ಬೇರೆ ಯಾವ ಪಕ್ಷದವರೂ ಕೂಡ ಆ ಮಟ್ಟಕ್ಕೆ ಸುಳ್ಳು ಪ್ರಚಾರವನ್ನು ಮಾಡಿಲ್ಲ. ಮತದಾನದ ದಿನಗಳು ಹತ್ತಿರ ಬರುತ್ತಿದ್ದಂತೆ ಜನರ ಮೂಲಭೂತ ಸೌಕರ್ಯಗಳಾದ ನಿರುದ್ಯೋಗ ಮತ್ತು ಬಡತನದ ವಿಷಯಗಳನ್ನು ಮರೆ ಮಾಡುತ್ತಿದ್ದಾರೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

Samajwadi Party Will Win More than 300 Seats and Form Next Govt in UP: Akhilesh Yadav

ಯುವಕರ ನಿರೀಕ್ಷೆ ಹುಸಿ:

ಕಳೆದ ಐದು ವರ್ಷಗಳಿಂದ ರಾಜ್ಯದ ಯುವಕರು ಬಿಜೆಪಿಯವರು ಆಶ್ವಾಸನೆಗಳನ್ನು ನೆರವೇರಿಸುತ್ತಾರೆಯೇ ಎಂಬ ನಿರೀಕ್ಷೆಯಲ್ಲೇ ಎದುರು ನೋಡುತ್ತಿದ್ದರು. ರೈತರನ್ನು ಹೇಗೆ ನಡೆಸಿಕೊಳ್ಳಲಾಗಿದೆ ಎಂಬುದನ್ನು ಜನರು ಮರೆಯುವುದಿಲ್ಲ. ಅವರು ಮೂಲಭೂತ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಲಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳು ಬಿಜೆಪಿಗೆ ವಿರುದ್ಧವಾಗಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತಾರೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಯುಪಿಯಲ್ಲಿ ಏಳು ಹಂತಗಳ ಚುನಾವಣೆ:

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಂದು ಮೊದಲ ಹಂತದಲ್ಲಿ ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ 58 ಸ್ಥಾನಗಳಿಗೆ ಮತದಾನ ನಡೆಯಿತು. ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ರಾಜ್ಯದ 55 ಸ್ಥಾನಗಳಿಗೆ ಮತದಾನ ನಡೆಯಿತು. ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರಂದು ಮೂರನೇ ಹಂತದಲ್ಲಿ 59 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಿತು. ಫೆಬ್ರವರಿ 23ರಂದು ನಾಲ್ಕನೇ ಹಂತದಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು. ತದನಂತರ ಫೆಬ್ರವರಿ 27ರಂದು ಐದನೇ ಹಂತದಲ್ಲಿ 60 ಸ್ಥಾನಗಳಿಗೆ ಚುನಾವಣೆ ನಡೆಯಿತು. ಮಾರ್ಚ್ 3ರಂದು ಆರನೇ ಹಂತದಲ್ಲಿ 57 ಸ್ಥಾನಗಳಿಗೆ ಮತ್ತು ಮಾರ್ಚ್ 7ರಂದು ಅಂತಿಮವಾಗಿ ಏಳನೇ ಹಂತದಲ್ಲಿ 54 ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು.

ಕಳೆದ 2017ರಲ್ಲಿ ಯುಪಿ ಮತದಾರರ ತೀರ್ಪು?:

2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಉತ್ತರಪ್ರದೇಶದಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 202 ಆಗಿದೆ.

English summary
UP Election: Samajwadi Party Will Win More than 300 Seats and Form Next Govt in UP: Akhilesh Yadav.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X