ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಕಾಸ್ ದುಬೆ ಸಾವು; ಯುಪಿ ಸರ್ಕಾರಕ್ಕೆ ಸುಪ್ರೀಂ ಮಹತ್ವದ ಸೂಚನೆ

|
Google Oneindia Kannada News

ಲಕ್ನೋ, ಜುಲೈ 20 : ರೌಡಿ ಶೀಟರ್ ವಿಕಾಸ್ ದುಬೆ ಎನ್ ಕೌಂಟರ್ ಬಗ್ಗೆ ತನಿಖೆ ನಡೆಸಲು ಸಮಿತಿಯೊಂದನ್ನು ಉತ್ತರ ಪ್ರದೇಶ ಸರ್ಕಾರ ರಚನೆ ಮಾಡಿದೆ. ಈ ಸಮಿತಿಯ ಸದಸ್ಯರಲ್ಲಿ ಬದಲಾವಣೆ ಮಾಡುವಂತೆ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದೆ.

ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ವಿಕಾಸ್ ದುಬೆ ಎನ್‌ ಕೌಂಟರ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಸಮಿತಿಯ ಸದಸ್ಯರನ್ನು ಬದಲಾವಣೆ ಮಾಡಿ ಎಂದು ಮುಖ್ಯ ನ್ಯಾಯಮೂರ್ತಿಗಳು ಸರ್ಕಾರಕ್ಕೆ ಸೂಚಿಸಿದರು.

ರೌಡಿ ವಿಕಾಸ್ ದುಬೆ ಹತ್ಯೆ 'ನಕಲಿ ಎನ್‌ಕೌಂಟರ್‌' ಅಲ್ಲ: ಪೊಲೀಸರ ಮಾಹಿತಿ ರೌಡಿ ವಿಕಾಸ್ ದುಬೆ ಹತ್ಯೆ 'ನಕಲಿ ಎನ್‌ಕೌಂಟರ್‌' ಅಲ್ಲ: ಪೊಲೀಸರ ಮಾಹಿತಿ

ಒಬ್ಬರು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಒಬ್ಬರು ನಿವೃತ್ತ ಪೊಲೀಸ್ ಅಧಿಕಾರಿಯನ್ನು ಸಮಿತಿಗೆ ಸೇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ. ಇದಕ್ಕೆ ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದ್ದು, ಸಮಿತಿಯಲ್ಲಿ ಬದಲಾವಣೆ ಮಾಡುವುದಾಗಿ ಹೇಳಿದೆ.

ವಿಕಾಸ್ ದುಬೆ ಎನ್ ಕೌಂಟರ್; ಪೊಲೀಸರ ಮುಂದೆ 5 ಪ್ರಶ್ನೆಗಳು ವಿಕಾಸ್ ದುಬೆ ಎನ್ ಕೌಂಟರ್; ಪೊಲೀಸರ ಮುಂದೆ 5 ಪ್ರಶ್ನೆಗಳು

SC Asks UP Govt To Rework A Committee Probing Death Of Vikas Dubey

ಪ್ರಸ್ತುತ ಸಮಿತಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿದ್ದಾರೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಒಬ್ಬರು ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಸೇರಿಸಿ ಸಮಿತಿಯನ್ನು ಪುನರ್ ರಚನೆ ಮಾಡಲಾಗುತ್ತದೆ ಎಂದು ಸರ್ಕಾರ ಕೋರ್ಟ್‌ಗೆ ಹೇಳಿತು.

ಉತ್ತರ ಪ್ರದೇಶವನ್ನು ಬೆಚ್ಚಿ ಬೀಳಿಸಿದ ರೌಡಿ ವಿಕಾಸ್ ದುಬೆ ಯಾರು? ಉತ್ತರ ಪ್ರದೇಶವನ್ನು ಬೆಚ್ಚಿ ಬೀಳಿಸಿದ ರೌಡಿ ವಿಕಾಸ್ ದುಬೆ ಯಾರು?

8 ಪೊಲೀಸರ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿತ್ತು. ಆತನನ್ನು ಕಾನ್ಪುರಕ್ಕೆ ಕರೆತರುವಾಗ ಕಾರು ಪಲ್ಟಿಯಾಗಿತ್ತು. ಆಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದ.

ಈ ಎನ್ ಕೌಂಟರ್ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

English summary
Supreme Court directed Uttar Pradesh government to rework a committee which probing the death of gangster Vikas Dubey. Court asked to add former Supreme Court judge and a retired police officer to committee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X