ಯುಪಿ: 'ಹೆಂಡತಿಯನ್ನು ಕಳಿಸು' ಎಂದ ಬಾಸ್: ಮನನೊಂದು ವ್ಯಕ್ತಿ ಆತ್ಮಹತ್ಯೆ
ಲಕ್ನೋ ಏಪ್ರಿಲ್ 11: ತನಗೆ ವರ್ಗಾವಣೆ ಬೇಕಿದ್ದರೆ ಪತ್ನಿಯನ್ನು ಒಂದು ರಾತ್ರಿಗೆ ಕಳುಹಿಸಿ ಎಂದು ಹಿರಿಯ ಅಧಿಕಾರಿಯೊಬ್ಬರು ಕೇಳಿದ್ದಕ್ಕೆ ಉತ್ತರ ಪ್ರದೇಶದ ವಿದ್ಯುತ್ ಇಲಾಖೆಯ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಅಮಾನವೀಯ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು 45ರ ಗೋಕುಲ್ ಪ್ರಸಾದ್ ಎಂದು ಗುರುತಿಸಲಾಗಿದೆ.
ಬಾಸ್ ಮಾತಿಗೆ ಮನನೊಂದ ಗೋಕುಲ್ ಪ್ರಸಾದ್ ಲಖೀಂಪುರದ ಜೂನಿಯರ್ ಇಂಜಿನಿಯರ್ ಕಚೇರಿಯ ಹೊರಗೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಜೂನಿಯರ್ ಇಂಜಿನಿಯರ್ ನಾಗೇಂದ್ರ ಕುಮಾರ್ ಹಾಗೂ ಗುಮಾಸ್ತರನ್ನು ಅಮಾನತು ಮಾಡಲಾಗಿದ್ದು, ಪೊಲೀಸ್ ಪ್ರಕರಣ ದಾಖಲಾಗಿದೆ.
ಗೋಕುಲ್ ಪ್ರಸಾದ್ ಅವರು ಬೆಂಕಿ ಹಚ್ಚಿಕೊಂಡ ನಂತರ ಚಿತ್ರೀಕರಿಸಿದ ವಿಡಿಯೊದಲ್ಲಿ, ಅವರು ಈ ಘಟನೆಯನ್ನು ವಿವರಿಸಿದ್ದಾರೆ. ಸುಡುವ ಬೆಂಕಿ ಮೈಗೊತ್ತಿಕೊಂಡಾಗ ಅವರು ತಮ್ಮ ನೋವನ್ನು ಹೇಳಿಕೊಂಡು ಕಿರುಚಾಡಿದ್ದಾರೆ. ತಮ್ಮ ಜೂನಿಯರ್ ಇಂಜಿನಿಯರ್ ಮತ್ತು ಅವರ ಸಹಾಯಕರು ತನಗೆ ಕಿರುಕುಳ ನೀಡುತ್ತಿದ್ದರು ಮತ್ತು ಪೊಲೀಸರನ್ನು ಸಂಪರ್ಕಿಸಿದರೂ ಯಾವುದೇ ಸಹಾಯ ಸಿಕ್ಕಿಲ್ಲ ಎಂದು ಅವರು ಬಿಂಕಿ ಹಚ್ಚಿಕೊಂಡ ವೇಳೆ ಆರೋಪಿಸಿದ್ದಾರೆ.

ಇನ್ನೊಂದು ವಿಡಿಯೋದಲ್ಲಿ ಆರೋಪಿಗಳು ಕಳೆದ ಮೂರು ವರ್ಷಗಳಿಂದ ಗೋಕುಲ್‌ಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆತನ ಪತ್ನಿ ಆರೋಪಿಸಿದ್ದಾರೆ. "ಅವರು ಖಿನ್ನತೆಗೆ ಒಳಗಾಗಿದ್ದರು. ಔಷಧಿಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದರು. ಆದರೆ ನಾನು ಅವರಿಗೆ ಔಷಧಿಗಳನ್ನು ತೆಗೆದುಕೊಳ್ಳಲು ಬಿಡಲಿಲ್ಲ. ಅವರನ್ನು ಅಲಿಗಂಜ್‌ಗೆ ವರ್ಗಾಯಿಸಲಾಯಿತು. ಪ್ರಯಾಣಿಸಲು ಕಷ್ಟವಾಗುತ್ತಿತ್ತು. ಆದ್ದರಿಂದ ಅವರು ಮನೆಗೆ ವರ್ಗಾಯಿಸಲು ಕೇಳಿದರು. ಅವರು ಅವನಿಗೆ ಹೇಳಿದರು, 'ನಿಮ್ಮ ಹೆಂಡತಿಯನ್ನು ನಮ್ಮೊಂದಿಗೆ ಮಲಗುವಂತೆ ಮಾಡು. ಮತ್ತು ನಾವು ನಿಮ್ಮನ್ನು ವರ್ಗಾವಣೆ ಮಾಡುತ್ತೇವೆ" ಎಂದು ನನ್ನ ಪತಿಗೆ ಹೇಳಿದ್ದರು ಎಂದು ಪತ್ನಿ ಮನನೊಂದು ಹೇಳಿಕೊಂಡಿದ್ದಾರೆ.
ಜೊತೆಗೆ ಈ ವಿಚಾರದಲ್ಲಿ ಯಾರೂ ಅವರಿಗೆ ಸಹಾಯ ಮಾಡಲು ಮುಂದೆ ಬರಲಿಲ್ಲ ಎಂದು ಅವರು ಹೇಳಿದರು. ಅವರು ಬೆಂಕಿ ಹಚ್ಚಿಕೊಂಡಾಗಲೂ ಅವರ ಸಹಾಯಕ್ಕೆ ಯಾರೂ ಮುಂದೆ ಬಂದಿಲ್ಲ. ಜೂನಿಯರ್ ಇಂಜಿನಿಯರ್ ಅಲ್ಲೇ ನಿಂತು ನೋಡುತ್ತಿದ್ದರು ಎಂದು ಪತ್ನಿ ಹೇಳಿಕೊಂಡಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿ ಸಂಜೀವ್ ಸುಮನ್ ಮಾತನಾಡಿ, ''ಜೂನಿಯರ್ ಇಂಜಿನಿಯರ್ ವರ್ಗಾವಣೆಗೆ ಕೋರಿದಾಗ ಲೈನ್‌ಮ್ಯಾನ್ ಹಣದ ಬೇಡಿಕೆ ಮತ್ತು ಅಸಭ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ, ನಾವು ಪ್ರಕರಣ ದಾಖಲಿಸಿದ್ದೇವೆ, ಇಲಾಖಾ ಮಟ್ಟದಲ್ಲಿ ಜೂನಿಯರ್ ಎಂಜಿನಿಯರ್ ಅನ್ನು ಅಮಾನತುಗೊಳಿಸಲಾಗಿದೆ ಮತ್ತು ವಿಚಾರಣೆ ನಡೆಸಲಾಗಿದೆ. ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]












Click it and Unblock the Notifications