• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉತ್ತರ ಪ್ರದೇಶ: ತೈಲ ಟ್ಯಾಂಕರ್ ಕಾರು ಅಪಘಾತದಲ್ಲಿ 7 ಜನ ಸಾವು

|

ಲಕ್ನೋ, ಫೆಬ್ರವರಿ.24: ಉತ್ತರ ಪ್ರದೇಶದ ನೌಝೀಲ್ ಪೊಲೀಸ್ ಠಾಣೆ ಬಳಿಯೇ ಯಮುನಾ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಮತ್ತು ಕಾರಿನ ನಡುವೆ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಯಮುನಾ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಕಾರು ಮತ್ತು ತೈಲ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮತ್ತು ಸಾವನ್ನಪ್ಪಿದ್ದಾರೆ ಎಂದು ಮಧುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್ ತಿಳಿಸಿದ್ದಾರೆ.

ಮಧ್ಯಪ್ರದೇಶ: ಕಾಲುವೆಗೆ ಬಸ್ ಉರುಳಿ 32 ಮಂದಿ ಪ್ರಯಾಣಿಕರ ಸಾವು

ಆಗ್ರಾದ ಕಡೆಗೆ ಹೊರಟಿದ್ದ ತೈಲ ಟ್ಯಾಂಕರ್ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಡಿವೈಡರ್ ಮತ್ತು ಟ್ಯಾಂಕರ್ ಮಧ್ಯೆ ಕಾರು ಸಿಲುಕಿದ ಹಿನ್ನೆಲೆ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತದೇಹಗಳ ಮರಣೋತ್ತರ ಪರೀಕ್ಷೆ:

ಉತ್ತರ ಪ್ರದೇಶ ಯಮುನಾ ಹೆದ್ದಾರಿ ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರಿಸಲಾಗುತ್ತದೆ ಎಂದು ಮಧುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್ ಹೇಳಿದ್ದಾರೆ.

English summary
Seven Killed As Oil Tanker Collides With Car On Yamuna Expressway In Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X