• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉತ್ತರ ಪ್ರದೇಶ ಚುನಾವಣೆ; ಶೋಭಾ ಕರಂದ್ಲಾಜೆಗೆ ಮಹತ್ವದ ಹುದ್ದೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 08; 2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಿದ್ಧತೆಯನ್ನು ಬಿಜೆಪಿ ಆರಂಭಿಸಿದೆ. ಐವರು ಕೇಂದ್ರ ನಾಯಕರನ್ನು ಬಿಜೆಪಿ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಇವರಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಸೇರಿದ್ದಾರೆ.

ಬುಧವಾರ ಬಿಜೆಪಿ ಈ ಕುರಿತು ಆದೇಶ ಹೊರಡಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಇವರ ಜೊತೆ ಐವರು ಸಹ ಉಸ್ತುವಾರಿಗಳನ್ನು ನೇಮಿಸಲಾಗಿದೆ.

ಭತ್ತದ ಗದ್ದೆಗಿಳಿದು ಕಳೆ ತೆಗೆದ ಸಚಿವೆ ಶೋಭಾ ಕರಂದ್ಲಾಜೆ ಭತ್ತದ ಗದ್ದೆಗಿಳಿದು ಕಳೆ ತೆಗೆದ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.

ವ್ಯಕ್ತಿಚಿತ್ರ: ಕೇಂದ್ರ ಸಚಿವೆ, ಹೋರಾಟಗಾರ್ತಿ ಸಂಸದೆ ಶೋಭಾ ವ್ಯಕ್ತಿಚಿತ್ರ: ಕೇಂದ್ರ ಸಚಿವೆ, ಹೋರಾಟಗಾರ್ತಿ ಸಂಸದೆ ಶೋಭಾ

ಅನುರಾಗ್ ಠಾಕೂರ್, ಅರ್ಜುನ್ ರಾಮ್ ಮೇಘ್ವಾಲ್, ಅನ್ನಪ್ರಾಣಾ ದೇವಿ ಮತ್ತು ಶೋಭಾ ಕರಂದ್ಲಾಜೆ ಸಹ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಶೋಭಾ ಕರಂದ್ಲಾಜೆ ಈ ಕುರಿತು ಟ್ವೀಟ್ ಮಾಡಿದ್ದು, ಕೇಂದ್ರ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬಿಜೆಪಿ ಹೊಸ ಜವಾಬ್ದಾರಿ ನೀಡಿದೆ ಎಂದ ಶೋಭಾ ಕರಂದ್ಲಾಜೆ ಬಿಜೆಪಿ ಹೊಸ ಜವಾಬ್ದಾರಿ ನೀಡಿದೆ ಎಂದ ಶೋಭಾ ಕರಂದ್ಲಾಜೆ

ಮುಂದಿನ ವರ್ಷ ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ್ ವಿಧಾನಸಭೆ ಚುನಾವಣೆಗಳು ಸಹ ನಡೆಯಲಿವೆ. ಎಲ್ಲಾ ರಾಜ್ಯಗಳಿಗೂ ಬಿಜೆಪಿ ಬುಧವಾರ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿದೆ. ವಿವಿಧ ಕೇಂದ್ರ ಸಚಿವರಿಗೆ ವಿವಿಧ ರಾಜ್ಯಗಳ ಜವಾಬ್ದಾರಿಯನ್ನು ನೀಡಲಾಗಿದೆ.

ಉತ್ತರ ಪ್ರದೇಶದ ಚುನಾವಣೆ ಬಹಳ ನಿರ್ಣಾಯಕವಾಗಿದೆ. ಪ್ರಸ್ತುತ ಯೋಗಿ ಆದಿತ್ಯನಾಥ್ ಆಡಳಿತ ನಡೆಸುತ್ತಿದ್ದಾರೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಭಾರೀ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.

ಯೋಗಿ ಆದಿತ್ಯನಾಥ್ ಆಡಳಿತ ವಿರುದ್ಧ ಅಸಮಾಧಾನಗಳು ಸಹ ಇವೆ. ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನವನ್ನು ನಡೆಸಿದ್ದು, ಈಗಾಗಲೇ ಚುನಾವಣಾ ತಯಾರಿಯನ್ನು ಆರಂಭಿಸಿದೆ. ಚುನಾವಣೆ ನಡೆಯಲಿರುವ ಐದು ರಾಜ್ಯಗಳ ಪೈಕಿ ಪಂಜಾಬ್ ಹೊರತುಪಡಿಸಿ ಉಳಿದ ನಾಲ್ಕು ಕಡೆ ಬಿಜೆಪಿ ಸರ್ಕಾರವೇ ಇದೆ.

ಅಭ್ಯರ್ಥಿಗಳ ಹುಡುಕಾಟದಲ್ಲಿ ಕಾಂಗ್ರೆಸ್; 403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬಹುದೊಡ್ಡ ರಾಜ್ಯ ಉತ್ತರ ಪ್ರದೇಶ. ಕಾಂಗ್ರೆಸ್ ಸಹ ವಿಧಾನಸಭೆ ಚುನಾವಣೆ ತಯಾರಿ ಆರಂಭಿಸಿದ್ದು ಗೆಲ್ಲುವ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ.

ಕೆಲವು ಕ್ಷೇತ್ರಗಳಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಕಾಂಗ್ರೆಸ್ ಬಯಸಿತ್ತು. ಆದರೆ ಮುಂಬರುವ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುತ್ತೇವೆ ಎಂದು ಎರಡೂ ಪಕ್ಷಗಳು ಘೋಷಣೆ ಮಾಡಿದ್ದು, ಕಾಂಗ್ರೆಸ್‌ಗೆ ನಿರಾಸೆಯಾಗಿದೆ.

ಉತ್ತರ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಕ್ಷದ ಹಿರಿಯ ಮುಖಂಡರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಸೂಚನೆ ನೀಡಿದ್ದಾರೆ. 403 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿದರೆ ಅಭ್ಯರ್ಥಿಗಳನ್ನು ಹುಡುಕುವುದು ದೊಡ್ಡ ಸವಾಲು ಆಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

2017ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದ್ದು ಕೇವಲ ಒಂದಂಕಿ ಕ್ಷೇತ್ರಗಳಲ್ಲಿ ಮಾತ್ರ. ಪಕ್ಷಾಂತರ, ಆಂತರಿಕ ಕಲಹದಿಂದಾಗಿ ಪಕ್ಷ ಚುನಾವಣೆಯಲ್ಲಿ ಕಳಪೆ ಸಾಧನೆ ಮಾಡಿತ್ತು. ಈ ಬಾರಿ ರಾಜ್ಯದಲ್ಲಿ ಹೆಚ್ಚು ಸ್ಥಾನದಲ್ಲಿ ಜಯಗಳಿಸಬೇಕು ಎಂದು ಕಾಂಗ್ರೆಸ್ ಪ್ರಯತ್ನ ನಡೆಸಿದೆ. ಎಸ್‌ಪಿ ಮತ್ತು ಬಿಎಸ್‌ಪಿ ಮತ್ತೆ ಅಧಿಕಾರ ಹಿಡಿಯಬೇಕು ಎಂದು ಪ್ರಯತ್ನ ನಡೆಸಿವೆ.

ರೈತರ ನೆನಪು ಆಗಿದೆ; ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ಬಿಜೆಪಿಗೆ ರೈತರ ನೆನಪು ಆಗಿದೆ. ಈ ಬಾರಿ ರೈತರು ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ಮತ ಚಲಾವಣೆ ಮಾಡಲಿದ್ದಾರೆ" ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿಯೇ ಬಿಜೆಪಿ ರಾಜ್ಯದಲ್ಲಿ ಸೆಪ್ಟೆಂಬರ್ 16 ರಿಂದ 23ರ ತನಕ ಕಿಸಾನ್ ಸಂವಾದ್ ಕಾರ್ಯಕ್ರಮ ಆಯೋಜನೆ ಮಾಡಿದೆ. ಈ ಕಾರ್ಯಕ್ರಮದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿವೆ.

English summary
The BJP has appointed union minister Shobha Karandlaje as its co-incharge for the Uttar Pradesh assembly elections 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X