ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದಲ್ಲಿ 4 ತಿಂಗಳಲ್ಲಿ 5 ಮಂದಿ ಅತ್ಯಾಚಾರ ಸಂತ್ರಸ್ತೆಯರಿಗೆ ಬೆಂಕಿ

|
Google Oneindia Kannada News

ಲಕ್ನೋ, ಡಿಸೆಂಬರ್ 20: ಉತ್ತರ ಪ್ರದೇಶದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಐದು ಮಂದಿ ಅತ್ಯಾಚಾರ ಸಂತ್ರಸ್ತೆಯರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಅಪರಾಧಿಗಳು ಅತ್ಯಾಚಾರದಂತಹ ಕೃತ್ಯಗಳನ್ನು ಮಾಡುದಷ್ಟೇ ಅಲ್ಲದೆ ಸಾಕ್ಷ್ಯ ನಾಶಕ್ಕಾಗಿ ಅವರನ್ನು ಕೊಲೆ ಮಾಡುವ ಹಂತಕ್ಕೆ ಇಳಿಯುತ್ತಿದ್ದಾರೆ.

ಅತ್ಯಾಚಾರ ಆರೋಪಿಗಳ ಎನ್‌ಕೌಂಟರ್: ಸುಪ್ರೀಂಕೋರ್ಟ್ ಮಹತ್ವದ ನಿರ್ಧಾರಅತ್ಯಾಚಾರ ಆರೋಪಿಗಳ ಎನ್‌ಕೌಂಟರ್: ಸುಪ್ರೀಂಕೋರ್ಟ್ ಮಹತ್ವದ ನಿರ್ಧಾರ

ಉತ್ತರ ಪ್ರದೇಶದ ಫತೇಪುರ್‌ದಲ್ಲಿ ಕಳೆದ ಒಂದು ವಾರಗಳ ಹಿಂದೆ ಅತ್ಯಾಚಾರ ಸಂತ್ರಸ್ತೆಯೊಬ್ಬರಿಗೆ ಬೆಂಕಿ ಹಚ್ಚಿದ್ದರು. ಕೊನೆಗೆ ಅವರನ್ನು ಖಾನ್‌ಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Since September 5th Rape Victim Dies In UP

ಮತ್ತೊಂದು ಪ್ರಕರಣದಲ್ಲಿ ಪೊಲೀಸ್ ಮುಖ್ಯ ಅಧಿಕಾರಿ ಕಚೇರಿ ಎದುರೇ ಅಪರಾಧಿಗಳು ಸಂತ್ರಸ್ತೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಆದರೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ 2016ಕ್ಕೆ ಹೋಲಿಸಿದರೆ 2019ರಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳುತ್ತಿದ್ದಾರೆ ಆದರೆ ಅಂತಹ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ.

ಸುಮಾರು ಆರು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂತಹ ಪ್ರಕರಣಗಳಲ್ಲಿ ತ್ವರಿತಗತಿಯ ವಿಚಾರಣೆಯ ಮೂಲಕ ಮತ್ತು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಉನ್ನಾವೊದಲ್ಲಿ ಅತ್ಯಾಚಾರಕ್ಕೊಳಗಾದವರು ಜಾಮೀನಿನಿಂದ ಹೊರಬಂದ ಆರೋಪಿಗಳಿಂದ ಸುಟ್ಟುಹೋಗಿದ್ದಾರೆ. ಅವಳು ನಂತರ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು.

ಚಿತ್ರಕೂಟ್‌ನಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಪ್ರಕರಣ ಕಂಡುಬಂದಿದೆ ಮತ್ತು ಸಂಭಾಲ್‌ನಲ್ಲಿ 16 ವರ್ಷದ ಬಾಲಕಿಯೊಬ್ಬಳನ್ನು ಸೆಪ್ಟೆಂಬರ್‌ನಲ್ಲಿ ಅತ್ಯಾಚಾರ ಮಾಡಿ ಸುಟ್ಟುಹಾಕಲಾಯಿತು. ಮೈನ್‌ಪುರಿಯಲ್ಲಿ ಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡವೊಂದು ತನಿಖೆ ನಡೆಸುತ್ತಿದೆ.

English summary
The 18-year-old rape victim, who was allegedly burnt by the perpetrator in Fatehpur in Uttar Pradesh,making it the fifth such case in the state lately.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X