ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹತ್ರಾಸ್ ನಲ್ಲಿ 6ರ ಬಾಲಕಿ ಮೇಲಿನ ಅತ್ಯಾಚಾರದ ಬಗ್ಗೆ ಖಾಕಿ ಮೌನ

|
Google Oneindia Kannada News

ಲಕ್ನೋ, ಅಕ್ಟೋಬರ್.06: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ಯುವತಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಹಸಿ ಹಸಿಯಾಗಿರುವಾಗಲೇ ಜಿಲ್ಲೆಯಲ್ಲಿ ಅಂಥದ್ದೇ ಮತ್ತೊಂದು ಪ್ರಕರಣವು ವರದಿಯಾಗಿದೆ.

ಅಲಿಘರ್ ಜಿಲ್ಲೆಯಲ್ಲೇ ಸಂಬಂಧಿಕರಿಂದ ಅತ್ಯಾಚಾರಕ್ಕೊಳಗಾದ 6 ವರ್ಷದ ಬಾಲಕಿ ನವದೆಹಲಿ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾಳೆ. ಸಂಬಂಧಿಕರಿಂದಲೇ ಅತ್ಯಾಚಾರ ನಡೆದಿರುವುದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದ್ದು, ಪೊಲೀಸರು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಈ ಹಿನ್ನೆಲೆ ಕೆರಳಿದ ಮೃತ ಬಾಲಕಿಯ ಸಂಬಂಧಿಕರು ಮೃತದೇಹವನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ಹತ್ರಾಸ್: ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 4 ವರ್ಷದ ಬಾಲಕಿ ಸಾವು ಹತ್ರಾಸ್: ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 4 ವರ್ಷದ ಬಾಲಕಿ ಸಾವು

ಕಳೆದ ಸೆಪ್ಟೆಂಬರ್ 17 ರಂದು ಈ ಘಟನೆ ನಡೆದಿದೆ ಎಂದು ಎಸ್‌ಪಿ ಮುನಿರಾಜ್ ಹೇಳಿದ್ದಾರೆ. ದೂರು ಬಂದ ಬಳಿಕ ಮನೆಯ ಮೇಲೆ ದಾಳಿ ನಡೆಸಲಾಗಿತ್ತು. ಅದೇ ಮನೆಯಲ್ಲಿ ಬಾಲಕಿ ಕೂಡ ಸಿಕ್ಕಿದ್ದಳು, ಆಕೆಯನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

Six-Year-Old Raped By Relative In Hathras Dies, Family Protest Against Police Inaction

15 ವರ್ಷದ ಅಪ್ರಾಪ್ತ ಆರೋಪಿ ಬಂಧನ:

ಅಲಿಘರ್ ಜಿಲ್ಲೆಯಲ್ಲಿ 6 ವರ್ಷದ ಪುಟ್ಟ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲೂ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಈ ಪ್ರಕರಣ ಸಂಬಂಧ ಸಪ್ಟೆಂಬರ್.21ರಂದೇ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು 15 ವರ್ಷದ ಅಪ್ರಾಪ್ತ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

English summary
Six-Year-Old Raped By Relative In Hathras Dies, Family Members Protest Against Police Inaction.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X