ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಮೃತಿ ಇರಾನಿಗೆ ಅಮೇಥಿ ಟಿಕೆಟ್, ರಾಹುಲ್ ಗಾಂಧಿ ವಿರುದ್ಧ ಕಣಕ್ಕೆ

|
Google Oneindia Kannada News

Recommended Video

ರಾಹುಲ್ ಮಣಿಸಲು ರೆಡಿಯಾಯ್ತು ಮೋದಿ ಮಾಸ್ಟರ್ ಪ್ಲಾನ್..!?

ಅಮೇಥಿ, ಮಾರ್ಚ್‌ 21: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಮತ್ತೆ ಅಮೇಥಿಯಿಂದಲೇ ಟಿಕೆಟ್ ನೀಡಿದೆ ಬಿಜೆಪಿ. ಕಳೆದ ಬಾರಿ ಅವರು ಇದೇ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಸೋಲನ್ನಪ್ಪಿದ್ದರು.

ಉತ್ತರ ಪ್ರದೇಶದ ಅಮೇಥಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸ್ವಕ್ಷೇತ್ರ, ಕಳೆದ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಮೃತಿ ಇರಾನಿ ಅವರು ಸ್ಪರ್ಧಿಸಿ ರಾಹುಲ್ ಗಾಂಧಿ ಅವರಿಗೆ ಪೈಪೋಟಿ ನೀಡಿದ್ದರು.

ಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿಲೋಕಸಭೆ ಚುನಾವಣೆ 2019: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಅಚ್ಚರಿ

ಈ ಬಾರಿಯೂ ಸಹ ಸ್ಮೃತಿ ಅವರಿಗೆ ಇದೇ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದು, ರಾಹುಲ್ ಗಾಂಧಿ ಅವರನ್ನು ಕಟ್ಟಿಹಾಕುವ ತಂತ್ರವನ್ನು ಬಿಜೆಪಿ ಅನುಸರಿಸುತ್ತಿದೆ. ಕಳೆದ ಚುನಾವಣೆಯಲ್ಲಿ ಸ್ಮೃತಿ ಅವರು ರಾಹುಲ್ ಗಾಂಧಿ ವಿರುದ್ಧ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲನ್ನಪ್ಪಿದ್ದರು.

Smrithi Irani contesting again from Amethi against Rahul Gandhi

ಬಿಜೆಪಿ ಬಿಡುಗಡೆ ಮಾಡಿರುವ 188 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ ರಾಜ್ಯದ 28 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಅದರಲ್ಲಿ ನರೇಂದ್ರ ಮೋದಿ ಸಹ ಒಬ್ಬರು.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಬಿಜೆಪಿ ಟಿಕೆಟ್ ಬಗ್ಗೆ ಭಾರಿ ವಿವಾದ ಎಬ್ಬಿಸಿದ್ದ ಸಾಕ್ಷಿ ಮಹಾರಾಜ್ ಅವರಿಗೆ ಟಿಕೆಟ್ ನೀಡಲಾಗಿರುವುದು ಗಮನಾರ್ಹ. ಸಾಕ್ಷಿ ಮಹಾರಾಜ್ ಅವರು ವಿವಾದಿತ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಯು ವಿರೋಧ ಪಕ್ಷಗಳ ಟೀಕೆಗಳಿಗೆ ತುತ್ತಾಗುವಂತೆ ಮಾಡಿದ್ದರೂ, ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗುತ್ತದೆ ಎಂದು ಊಹಿಸಲಾಗಿತ್ತು. ಆದರೆ ಅವರಿಗೆ ಟಿಕೆಟ್ ನೀಡಲಾಗಿದೆ.

ಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ನರೇಂದ್ರ ಮೋದಿ ಅವರು ಕಳೆದ ಬಾರಿ ಚುನಾವಣೆಗೆ ಸ್ಪರ್ಧಿಸಿ ಭಾರಿ ಅಂತರದಿಂದ ಜಯಗಳಿಸಿದ್ದ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಈ ಬಾರಿಯೂ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

English summary
BJP minister Smrithi Irani contesting from Uttar Pradesh's Amethi constituency against Rahul Gandhi again. In 2014 election Smruthi Irani contested against Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X