ಕೈ ಸಿಎಂ ಆಪ್ತರ ಮೇಲೆ ಐಟಿ ದಾಳಿ, ರಾಹುಲ್ ಮೌನವೇಕೆ?: ಸ್ಮೃತಿ ಇರಾನಿ

ಅಮೇಥಿ, ಏಪ್ರಿಲ್ 11: ಮಧ್ಯ ಪ್ರದೇಶದ ಸಿಎಂ ಕಮಲ್‌ನಾಥ್ ಅವರ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆದಿರುವ ಬಗ್ಗೆ ರಾಹುಲ್ ಗಾಂಧಿ ಏಕೆ ಮೌನವಾಗಿದ್ದಾರೆ ಎಂದು ಬಿಜೆಪಿಯ ಕೇಂದ್ರ ಮಂತ್ರಿ ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಅಮೇಥಿಯಲ್ಲಿ ರಾಹುಲ್ ಗಾಂಧಿ ಎದುರು ಚುನಾವಣೆಗೆ ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಧ್ಯ ಪ್ರದೇಶ ಸಿಎಂ ಕಮಲನಾಥ್ ಅವರ ಆಪ್ತರ ಮೇಲೆ ಐಟಿ ದಾಳಿ ನಡೆದ ವೇಳೆ 281 ಕೋಟಿ ರೂಪಾಯಿ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಈ ಹಣ ಪಕ್ಷವೊಂದಕ್ಕೆ ಸಾಗಿಸಲಾಗುತ್ತಿದ್ದು ಎನ್ನಲಾಗುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡರು ಪ್ರಶ್ನೆ ಮಾಡುತ್ತಿದ್ದಾರೆ.

Smriti Irani questioned Rahul Gandhi silence about IT raid on MP CM close aides

ಈ ಬಗ್ಗೆ ಮಾತನಾಡಿದ ಸ್ಮೃತಿ ಇರಾನಿ, ರಾಹುಲ್ ಗಾಂಧಿ ಅವರು ಐಟಿ ದಾಳಿ ಬಗ್ಗೆ ಮೌನವಾಗಿರುವುದು ಅವರ ನಿಜ ಬಣ್ಣ ತೋರಿಸುತ್ತಿದೆ ಎಂದಿದ್ದಾರೆ.

ಮಹಿಳೆಯರು ಮತ್ತು ಗರ್ಭವತಿಯರಿಗಾಗಿ ಮೀಸಲಿಟ್ಟಿದ್ದ ಹಣವನ್ನು ಲೂಟಿ ಮಾಡುತ್ತಾರೆಂದರೆ ಯಾವ ರೀತಿಯ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಮೋದಿ ಅವರು ಐದು ವರ್ಷ ಪ್ರಧಾನ ಸೇವಕರಾಗಿ ದೇಶದ ಸೇವೆ ಮಾಡಿದ್ದಾರೆ, ಅವರಿಗೆ ದೇಶದ ಜನತೆ ಮತ್ತೊಂದು ಅವಕಾಶವನ್ನು ನೀಡಲಿದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+