ರಾಹುಲ್ ಗಾಂಧಿ ಮೊಸಳೆ ಕಣ್ಣೀರು ಸುರಿಸಿ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ: ಸ್ಮೃತಿ

ಅಮೇಥಿ, ಡಿಸೆಂಬರ್ 25: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಲೋಕಸಭಾ ಕ್ಷೇತ್ರ ಅಮೆಥಿಯಲ್ಲಿ ಇಂದು ರೈತರ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಇರಾನಿ, ರಾಹುಲ್ ಗಾಂಧಿ ಕೃಷಿ ಕಾನೂನುಗಳ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಮತ್ತು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

ರಾಹುಲ್ ಮೊಸಳೆ ಕಣ್ಣೀರು ಸುರಿಸುವ ಮೂಲಕ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

Smriti Irani Says Rahul Gandhi Telling Lies, Shedding Crocodile Tears And Misleading Farmers

ರೈತ ಸಮಸ್ಯೆಗಳ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ರಾಹುಲ್ ಗಾಂಧಿಗೆ ಸವಾಲು ಹಾಕಿದ ಇರಾನಿ, ತಾಕತ್ತಿದ್ದರೆ ಅವರು ರೈತರ ಮಧ್ಯೆ ಬಂದು ಚರ್ಚಿಸಲಿ. ಅವರ ಬಣ್ಣ ಬಯಲು ಮಾಡುತ್ತೇನೆ ಎಂದರು.

ಅವರ ಸ್ವಂತ ಜೀಜಾ(ಬಾವ) ರೈತರ ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ರಾಬರ್ಟ್ ವಾದ್ರಾ ವಿರುದ್ಧದ ಆರೋಪಗಳನ್ನು ಕೇಂದ್ರ ಸಚಿವೆ ಹೇಳಿದರು.

ಮತ್ತೊಂದೆಡೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ವಾಗ್ದಾಳಿ ಮುಂದುವರೆಸಿದ್ದು,ಕಳೆದ ವರ್ಷ ನಡೆದ ಸಂಸತ್ ಚುನಾವಣೆ ಸಂದರ್ಭ ನಿಮ್ಮ ಪಕ್ಷವೇ ಭರವಸೆ ನೀಡಿದ್ದ ಸುಧಾರಣೆಗೆ ಏಕೆ ಈಗ ನೀವು ಬೆಂಬಲ ನೀಡುತ್ತಿಲ್ಲ, ಏಕೆ ವಿರೋಧ ವ್ಯಕ್ತಪಡಿಸುತ್ತಿದ್ದೀರ ಎಂದು ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+