ಅಮೇಥಿಯಲ್ಲಿ ಇಂದು ನಾಮಪತ್ರ ಸಲ್ಲಿಸಲಿರುವ ಸ್ಮೃತಿ ಇರಾನಿ
ಅಮೇಥಿ, ಏಪ್ರಿಲ್ 11: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಅಮೇಥಿಯಲ್ಲಿ ಇಂದು(ಗುರುವಾರ) ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕೇಂದ್ರ ಜವಳಿ ಖಾತೆ ಸಚಿವೆಯಾಗಿರುವ ಸ್ಮೃತಿ ಇರಾನಿ ಅವರು 2014 ರಲ್ಲೂ ಇದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಆ ಪಕ್ಷದ ಅಭ್ಯರ್ಥಿಯಾಗಿ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

2014 ರಲ್ಲೂ ಇರಾನಿ ಅವರು ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಕಳೆದ 15 ವರ್ಷಗಳಿಂದ ರಾಹುಲ್ ಗಾಂಧಿ ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಸ್ಮೃತಿ ಇರಾನಿ ಅವರು ಗುರುವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. 2014 ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರಿಗೆ 408,651 ಮತಗಳನ್ನು ಪಡೆದು 107,903 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯ ಫೈರ್ ಬ್ರಾಂಡ್ ನಾಯಕಿ ಸ್ಮೃತಿ ಇರಾನಿ ಅವರು 300,748 ಮತಗಳನ್ನು ಪಡೆದಿದ್ದರು.











Click it and Unblock the Notifications