ವೃದ್ಧೆಯಿಂದ ಬಲವಂತವಾಗಿ ಕಾಂಗ್ರೆಸ್‌ಗೆ ಮತ ಹಾಕಿಸಿದ್ದಾರೆ: ಸ್ಮೃತಿ ಆರೋಪ

ಲಕ್ನೋ, ಮೇ 6: ಅಮೇಥಿಯ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಮವಾರ ಒಂದು ವಿಡಿಯೋವನ್ನು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಅದರಲ್ಲಿ ರಾಹುಲ್ ಗಾಂಧಿಯವರು ಅಮೇಥಿಯಲ್ಲಿ ಮತಗಟ್ಟೆಯಲ್ಲಿ ಮತದಾರರನ್ನು ಸೆರೆ ಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಯೊಬ್ಬರಿಗೆ ಕಾಂಗ್ರೆಸ್‌ಗೆ ಮತಹಾಕುವಂತೆ ಬಲವಂತ ಮಾಡಿರುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ, ಆ ವಿಡಿಯೋಕ್ಕೆ ಚುನಾವಣಾ ಆಯೋಗವನ್ನು ಟ್ಯಾಗ್ ಮಾಡಿದ್ದಾರೆ.

Smriti Irani tweets video, accuses Congress of booth capturing in Amethi

ಅಮೇಥಿಯ ಗೌರಿ ಗಂಜ್‌ನ ಗುಜಾರ್ ಗ್ರಾಮದ ಮತಗಟ್ಟೆ 316ರ ವಿಡಿಯೋ ಇದಾಗಿದೆ. ಆ ವಿಡಿಯೋದಲ್ಲಿ ವೃದ್ಧೆಯೊಬ್ಬರು ಆ ಮತಗಟ್ಟೆಯಲ್ಲಿ ಬಲವಂತವಾಗಿ ನನ್ನ ಬೆರಳು ಹಿಡಿದು ಕಾಂಗ್ರೆಸ್‌ಗೆ ಮತಹಾಕುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೂ ಮುನ್ನ ಸ್ಮೃತಿ ಇರಾನಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮೇಲೆ ವಾಗ್ದಾಳಿ ನಡೆಸಿದ್ದು, ಅಮೇಥಿಯಲ್ಲಿ ಪ್ರಿಯಾಂಕಾ ಹಾಗೂ ರಾಹುಲ್ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದು ಕೇವಲ ರಾಹುಲ್ ಗಾಂಧಿ ಮಾತ್ರವಲ್ಲ ಇಡೀ ಕುಟುಂಬವೇ ಹಾಗೆ ಎಂದು ದೂರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+