ಪ್ರೀತಿಗೆ ನಿರಾಕರಣೆ; ಹೆತ್ತ ತಾಯಿಯನ್ನೇ ಕೊಂದ ಮಗ!
ಲಕ್ನೋ, ಮಾರ್ಚ್ 10: ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗುವುದಕ್ಕೆ ನಿರಾಕರಿಸಿದಳು ಎಂದು ಯುವಕನೊಬ್ಬ ತನ್ನ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ಲೀಲಾ ಶರ್ಮಾ ಎನ್ನುವ ಮಹಿಳೆ (40) ಕೊಲೆಯಾದ ತಾಯಿ. ಆಕೆಯ ಮಗ ಶಿವಂ ಶರ್ಮಾ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಜಗದೀಶಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಶಿವಂ ಶರ್ಮಾ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಇದಕ್ಕೆ ಅವನ ತಾಯಿ ವಿರೋಧ ವ್ಯಕ್ತಪಡಿಸಿದಾಗ, ತಲೆದಿಂಬು ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದ. ಆತ ಮತ್ತು ಆತನ ಪ್ರೇಯಸಿ ರಾಣಿ ಎಂಬುವಳನ್ನು ಬಂಧಿಸಿ, ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಂ ಶರ್ಮಾ ಹಾಗೂ ಆತನ ಪ್ರೇಯಸಿ ಇಬ್ಬರೂ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ಜಗದೀಶಪುರ ಪೊಲೀಸರು ತಿಳಿಸಿದ್ದಾರೆ.












Click it and Unblock the Notifications